Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಜನಪರ ದನಿ ಹತ್ತಿಕ್ಕುವ ಹುನ್ನಾರ

ಜನಪರ ದನಿ ಹತ್ತಿಕ್ಕುವ ಹುನ್ನಾರ

ವಾರ್ತಾಭಾರತಿವಾರ್ತಾಭಾರತಿ20 Jan 2016 11:07 PM IST
share

ನಮ್ಮ ದೇಶದ ಆಳುವ ವರ್ಗ ಎಷ್ಟು ಅಸಹನೆಯಿಂದ ಕೂಡಿದೆ ಅಂದರೆ ನ್ಯಾಯಕ್ಕಾಗಿ ದನಿ ಎತ್ತುವ ವ್ಯಕ್ತಿಗಳನ್ನು ಮತ್ತು ಸಂಘಟನೆಗಳನ್ನು ಅದು ಸಹಿಸುತ್ತಿಲ್ಲ. ಅದಕ್ಕೆ ತೀರಾ ಇತ್ತೀಚಿನ ಉದಾಹರಣೆ ಅಂದರೆ ಮ್ಯಾಗ್ಸೆಸೆ ಪುರಸ್ಕೃತ ಲೇಖಕಿ ಹಾಗೂ ಖ್ಯಾತ ಸಾಮಾಜಿಕ ಕಾರ್ಯಕರ್ತೆ ಅರುಣಾ ರಾಯ್ ಮತ್ತು ಅವರ ಸಂಘಟನೆಯ ಕಾರ್ಯಕರ್ತರ ಮೇಲೆ ರಾಜಸ್ಥಾನದಲ್ಲಿ ಹಲ್ಲೆ ನಡೆದಿದೆ. ಸರಕಾರದ ಜನಪರ ಯೋಜನೆಗಳ ಕುರಿತು ಜನಜಾಗೃತಿ ಉಂಟುಮಾಡಲು ರಾಜ್ಯವ್ಯಾಪಿ ಯಾತ್ರೆಯನ್ನು ಆರಂಭಿಸಿರುವ ಅರುಣಾ ರಾಯ್ ಮತ್ತವರ ಕಾರ್ಯಕರ್ತರ ಮೇಲೆ ಅಲ್ಲಿನ ಬಿಜೆಪಿ ಶಾಸಕ ಮತ್ತು ಆತನ ಬೆಂಬಲಿಗರು ದಾಳಿ ನಡೆಸಿದ್ದಾರೆ. ಅಹಿಂಸಾತ್ಮಕವಾಗಿ ಸಾಮಾಜಿಕ ಬದಲಾವಣೆಯ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡ ಗಾಂಧಿವಾದಿ ಮಹಿಳೆಯ ಮೇಲೆ ನಡೆದ ಹಲ್ಲೆಯನ್ನು ಅನೇಕರು ಖಂಡಿಸಿದ್ದಾರೆ. ‘ಮಜ್ದೂರ್ ಕಿಸಾನ್’ ಕಾರ್ಮಿಕ ಸಂಘಟನೆಯ ನಾಯಕಿಯಾದ ಅರುಣಾ ರಾಯ್ ಅವರು ದಾಳಿ ಮಾಡುವಂತಹ ಯಾವುದೇ ಅಪರಾಧವನ್ನು ಮಾಡಿರಲಿಲ್ಲ. ಆದರೆ, ಅಪರಾಧವೇ ಅಧಿಕಾರ ಸ್ಥಾನದಲ್ಲಿ ಕುಳಿತಾಗ ಪ್ರಶ್ನೆ ಮಾಡುವವರನ್ನು ಅದು ಸಹಿಸುವುದಿಲ್ಲ. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಂತಹ ಜನಪರ ಯೋಜನೆಗಳು ದುರುಪಯೋಗವಾಗುತ್ತಿರುವ ಬಗ್ಗೆ ಜನರಲ್ಲಿ ಜಾಗೃತಿಯನ್ನು ಉಂಟುಮಾಡಲು ರಾಜಸ್ಥಾನದ ಜಲ್ವಾರ್ ಜಿಲ್ಲೆಯಲ್ಲಿ ಜಾಥಾ ಹಮ್ಮಿಕೊಂಡಿದ್ದ ಅರುಣಾ ರಾಯ್ ಅವರ ಮೇಲೆ ಬಿಜೆಪಿ ಶಾಸಕ ಕನ್ವರ್‌ಲಾಲ್ ಮೀನಾ ತನ್ನ ಬೆಂಬಲಿಗರನ್ನು ಕಟ್ಟಿಕೊಂಡು ಹಲ್ಲೆ ಮಾಡಿದ್ದಾನೆ. ಸರಕಾರದ ಉತ್ತರದಾಯಿತ್ವದ ಕುರಿತು ಜನಜಾಗೃತಿ ಉಂಟುಮಾಡುವುದನ್ನು ಆಳುವ ವರ್ಗ ಎಂದೂ ಸಹಿಸುವುದಿಲ್ಲ. ಜನರಿಗಾಗಿ ಮೀಸಲಾಗಿಟ್ಟಿರುವ ಹಣ ಮಧ್ಯವರ್ತಿಗಳ ಪಾಲಾಗುತ್ತಿರುವ ಬಗ್ಗೆ ಎಲ್ಲರೂ ಮಾತನಾಡುತ್ತಾರೆ. ಆದರೆ ಅದನ್ನು ತಡೆಯಲು ಯಾರೂ ಪ್ರಯತ್ನಿಸುವುದಿಲ್ಲ. ಅರುಣಾ ರಾಯ್ ಅವರಂತಹ ಸಾಮಾಜಿಕ ಕಾರ್ಯಕರ್ತೆ ಜನತೆಯ ಹಕ್ಕುಗಳಿಗಾಗಿ ‘ಜವಾಬ್‌ದೊ’ ಎಂಬ ಯಾತ್ರೆಯನ್ನು ಹಮ್ಮಿಕೊಂಡರೆ ಈ ರೀತಿಯ ಹಲ್ಲೆಯನ್ನು ಎದುರಿಸಬೇಕಾಗುತ್ತದೆ. ರಾಜಸ್ಥಾನದಲ್ಲಿ ಅವರ ಮೇಲೆ ಹಲ್ಲೆ ನಡೆಯುವಾಗ ಪೊಲೀಸರು ರಕ್ಷಣೆಗೆ ಬಾರದೆ ಮೂಕಪ್ರೇಕ್ಷಕರಾಗಿ ನಿಂತದ್ದು ವ್ಯವಸ್ಥೆಯ ನಿಜ ಸ್ವರೂಪಕ್ಕೆ ಹಿಡಿದ ಕನ್ನಡಿಯಾಗಿದೆ. ಕಾಂಗ್ರೆಸ್‌ಗಿಂತ ತಮ್ಮದು ಭಿನ್ನ ಸಂಸ್ಕೃತಿ ಎಂದು ಹೇಳಿಕೊಳ್ಳುವ ಬಿಜೆಪಿ ನಾಯಕರು ಅಧಿಕಾರಕ್ಕೆ ಬಂದ ನಂತರ ಏನೇನು ಮಾಡುತ್ತಿದ್ದಾರೆ ಎಂಬುದನ್ನು ದೇಶದ ಜನತೆ ಗಮನಿಸುತ್ತಿದ್ದಾರೆ. ಮಧ್ಯಪ್ರದೇಶದ ವ್ಯಾಪಂ ಹಗರಣ ಈಗಾಗಲೇ ಜಗಜ್ಜಾಹೀರಾಗಿದೆ. ಕೇಂದ್ರದ ಹಲವಾರು ಮಂತ್ರಿಗಳು ನಾನಾ ಹಗರಣಗಳಲ್ಲಿ ಸಿಲುಕಿದ್ದಾರೆ. ರಾಜಸ್ತಾನದಲ್ಲಿರುವ ಬಿಜೆಪಿ ಸರಕಾರ ಕೂಡಾ ಹಗರಣದಿಂದ ಮುಕ್ತವಾಗಿಲ್ಲ. ತನ್ನ ಹಗರಣವನ್ನು ಬಯಲಿಗೆಳೆಯುತ್ತಿರುವ ಅರುಣಾ ರಾಯ್‌ರಂತಹವರ ಮೇಲೆ ಈ ರೀತಿ ಹಲ್ಲೆಗೆ ಪ್ರಚೋದಿಸುತ್ತಿದೆ. ಈ ಹಿಂದೆ ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಖ್ಯಾತ ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರ ಮೇಲೆ ಕೂಡಾ ಇದೇ ರೀತಿ ದಾಳಿ ನಡೆದಿತ್ತು.

ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೇ ಈ ಹಿಂದೆ ಪ್ರತಿನಿಧಿಸುತ್ತಿದ್ದ ಹಾಗೂ ಈಗ ಆಕೆಯ ಪುತ್ರ ದುಷ್ಯಂತ್ ಸಿಂಗ್ ಪ್ರತಿನಿಧಿಸುತ್ತಿರುವ ಜಲ್ವಾರದ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಸಂಬಂಧಿಸಿದಂತೆ ಹಲವಾರು ಹಗರಣಗಳು ನಡೆದಿವೆ. ಅವುಗಳ ಬಗ್ಗೆ ಜನಜಾಗೃತಿ ಉಂಟುಮಾಡಲು ಅರುಣಾ ರಾಯ್ ಅವರು ಜಾಥಾ ನಡೆಸಿದರೆ ಈ ರೀತಿ ಗೂಂಡಾಗಿರಿಗೆ ಅಲ್ಲಿನ ಸರಕಾರ ಮುಂದಾಗಿದೆ. ಸಾಮಾಜಿಕ ಜಾಗೃತಿಗಾಗಿ ಹಾಗೂ ಪರಿಸರ ರಕ್ಷಣೆಗಾಗಿ ಮತ್ತು ಸಾಕ್ಷರತೆಗಾಗಿ ಕೆಲಸ ಮಾಡುತ್ತಿರುವ ಸಂಘಟನೆಗಳನ್ನು ಕೇಂದ್ರದ ಬಿಜೆಪಿ ಸರಕಾರ ಅತ್ಯಂತ ಕ್ರೂರವಾಗಿ ಹತ್ತಿಕ್ಕುತ್ತಿದೆ. ನಮ್ಮ ದೇಶದ ಅರಣ್ಯ ಸಂಪತ್ತನ್ನು ರಕ್ಷಿಸಲು ಹೋರಾಡುತ್ತಾ ಬಂದ ‘ಗ್ರೀನ್‌ಪೀಸ್ ಇಂಡಿಯಾ’ ಎಂಬ ಸ್ವಯಂ ಸೇವಾ ಸಂಸ್ಥೆಯ ನೋಂದಣಿಯನ್ನು ರದ್ದು ಮಾಡಿ ಅದರ ಕಾರ್ಯಕರ್ತರಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ. ಇನ್ನೊಂದೆಡೆ ನಮ್ಮ ಅಮೂಲ್ಯವಾದ ಅರಣ್ಯ ಸಂಪತ್ತನ್ನು ಕಾರ್ಪೊರೇಟ್ ಕಂಪೆನಿಗಳ ಲೂಟಿಗೆ ಮುಕ್ತಗೊಳಿಸಲಾಗಿದೆ. ಇದು ನಿಜಕ್ಕೂ ಆತಂಕಕಾರಿ ಬೆಳವಣಿಗೆಯಾಗಿದೆ. ಈ ಹಿಂದಿನ ಕೇಂದ್ರದ ಯುಪಿಎ ಸರಕಾರ ಜಾರಿಗೆ ತಂದಿದ್ದ ಮಾಹಿತಿ ಹಕ್ಕು ಕಾಯ್ದೆಯಿಂದಾಗಿ ಅನೇಕ ಹಗರಣಗಳು ಬಯಲಿಗೆ ಬಂದಿವೆ. ಅನೇಕ ಭ್ರಷ್ಟರು ವಿಚಾರಣೆ ಎದುರಿಸುತ್ತಿದ್ದಾರೆ. ಆದರೆ, ಕಾನೂನನ್ನೇ ರದ್ದು ಪಡಿಸಲು ಮೋದಿ ಸರಕಾರ ಹುನ್ನಾರ ನಡೆಸುತ್ತಿದೆ. ಹೈದರಾಬಾದ್ ವಿವಿಯ ವಿದ್ಯಾರ್ಥಿ ರೋಹಿತ್ ವೇಮುಲಾ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಸಂಘಪರಿವಾರದ ವಿದ್ಯಾರ್ಥಿ ಸಂಘಟನೆ ಹಾಗೂ ಕೇಂದ್ರ ಸಚಿವರ ಕೈವಾಡದ ಸಂಗತಿ ಈಗಾಗಲೇ ಬಹಿರಂಗವಾಗಿದೆ. ‘ಆತ್ಮಹತ್ಯೆ’ ಎಂದು ಕರೆಯಲಾದ ಈ ಕೊಲೆಗೆ ಕಾರಣವಾದ ವಿಶ್ವವಿದ್ಯಾನಿಲಯದ ಕುಲಪತಿಯನ್ನು ಬಂಧಿಸುವ ಬದಲಾಗಿ ಆತನನ್ನು ಸಮರ್ಥನೆ ಮಾಡಿ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮತಿ ಇರಾನಿ ಬುಧವಾರ ಹೇಳಿಕೆ ನೀಡಿದ್ದು, ಸರಕಾರ ಯಾರನ್ನು ರಕ್ಷಿಸುತ್ತಿದೆ ಎಂಬುದಕ್ಕೆ ಉದಾಹರಣೆಯಾಗಿದೆ. ಕೇಂದ್ರ ಸಚಿವೆಯ ಈ ಹೇಳಿಕೆಯನ್ನು ಹೈದರಾಬಾದ್‌ನ ಅಂಬೇಡ್ಕರ್ ವಿದ್ಯಾರ್ಥಿ ಸಂಘಟನೆಯ ವಿದ್ಯಾರ್ಥಿಗಳು ತೀವ್ರವಾಗಿ ಆಕ್ಷೇಪಿಸಿದ್ದಾರೆ.
ಈ ಎಲ್ಲ ವಿದ್ಯಮಾನಗಳನ್ನು ಗಮನಿಸಿದರೆ ಕೇಂದ್ರ ಸರಕಾರ ಸಂವಿಧಾನಾತ್ಮಕ ಹಕ್ಕುಗಳನ್ನು ದಮನ ಮಾಡಲು ಹೊರಟಿರುವುದು ಸ್ಪಷ್ಟವಾಗುತ್ತದೆ. ರಾಜಸ್ಥಾನದಲ್ಲಿ ಅರುಣಾ ರಾಯ್ ಮೇಲೆ ಬಿಜೆಪಿ ಶಾಸಕ ನಡೆಸಿದ ಹಲ್ಲೆಯನ್ನು ಪ್ರಜ್ಞಾವಂತರೆಲ್ಲರೂ ಖಂಡಿಸಬೇಕಾಗಿದೆ. ಆತನ ವಿರುದ್ಧ ಕ್ರಮಕ್ಕೆ ಸರಕಾರದ ಮೇಲೆ ಒತ್ತಡ ತರಬೇಕಾಗಿದೆ. ಜನತೆಯ ನಿರಂತರ ಹೋರಾಟದಿಂದ ಮಾತ್ರ ನಮ್ಮ ದೇಶದ ಪ್ರಜಾಪ್ರಭುತ್ವವನ್ನು ರಕ್ಷಿಸಲು ಸಾಧ್ಯವಾಗುತ್ತದೆ.
ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಜಾತ್ಯತೀತತೆಯಲ್ಲಿ ನಂಬಿಕೆ ಇರುವ ರಾಜಕೀಯ ಪಕ್ಷಗಳು, ಜನಪರ ಸಂಘಟನೆಗಳು ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸರ್ವಾಧಿಕಾರಿ ಪ್ರವೃತ್ತಿಯ ವಿರುದ್ಧ ಹೋರಾಡಲು ಸಂಕಲ್ಪ ತೊಡಬೇಕಾಗಿದೆ. ಈ ನಿಟ್ಟಿನಲ್ಲಿ ಮಾಧ್ಯಮಗಳ ಪಾತ್ರ ಕೂಡಾ ಅತ್ಯಂತ ಮುಖ್ಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X