ಹೆಣ್ಣುಮಕ್ಕಳ ರಕ್ಷಣೆ ಪ್ರತಿಯೊಬ್ಬನಾಗರಿಕನ ಜವಾಬ್ದಾರಿ: ನ್ಯಾ.ತುರಮರಿ

ಚಿಕ್ಕಬಳ್ಳಾಪುರ, ಜ.21: ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಹಲ್ಲೆ, ಕಿರುಕುಳ, ಅತ್ಯಾಚಾರ, ದಬ್ಬಾಳಿಕೆಗಳನ್ನು ತಡೆಯುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ವಿ.ತುರಮರಿ ಅಭಿಪ್ರಾಯಪಟ್ಟರು.
ನಗರದ ವಾಪಸಂದ್ರ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರಕಾರಿ ಬಾಲಕಿಯರ ಪ್ರೌಢಶಾಲೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಲೈಂಗಿಕ ಕಿರುಕುಳದ ವಿರುದ್ಧ ರಕ್ಷಣೆ ಮಾಡಿಕೊಳ್ಳಲು ಬೇಕಾದ ತಂತ್ರಗಳ ಬಗ್ಗೆ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
"ಹೆಣ್ಣು ಮಕ್ಕಳ ಮೇಲೆ ದಬ್ಬಾಳಿಕೆ ತಡೆಯುವಲ್ಲಿ ಪ್ರತಿಯೊಬ್ಬರ ಪಾತ್ರ ಮಹತ್ತರವಾಗಿದ್ದು, ಹೆಣ್ಣು ಮಕ್ಕಳ ಮೇಲೆ ನಡೆಯುವ ದಬ್ಬಾಳಿಕೆ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಪಟ್ಟ ಇಲಾಖೆಗಳಿಗೆ ದೂರು ನೀಡುವ ಪರಿಪಾಠ ಬೆಸಿಕೊಳ್ಳಬೇಕೆಂದರು.ಡತೆಯೇ ಜೀವನದ ಪ್ರತಿಬಿಂಬ’
ನಮ್ಮ ನಡತೆಯೇ ಜೀವನದಲ್ಲಿ ಪ್ರತಿಧ್ವನಿಯಂತೆ ಪ್ರತಿಬಿಂಬಿಸುವುದರಿಂದ, ಪ್ರತಿಯೊಬ್ಬರೂ ಮೌಲ್ಯಾಧಾರಿತ ಜೀವನ ಸಾಗಿಸಬೇಕಾಗಿದೆ. ಅಲ್ಲದೆ, ಜೀವನದಲ್ಲಿ ಆತ್ಮ ಸಂಯಮವನ್ನು ಅಳವಡಿಸಿಕೊಳ್ಳುವ ಅಗತ್ಯತೆಯಿದ್ದು, ಈ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗುವುದು ಎಂದು ತಿಳಿಸಿದರು.
ಹೆಣ್ಣು ಮಕ್ಕಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ಎಲ್ಲ ಕ್ಷೇತ್ರಗಳಲ್ಲಿ ಪ್ರಾಬಲ್ಯ ಸಾಧಿಸಬೇಕೆಂದ ಅವರು, ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಹಲ್ಲೆ, ಕಿರುಕುಳ, ಅತ್ಯಾಚಾರ, ದಬ್ಬಾಳಿಕೆಗಳನ್ನು ತಡೆದು ಅವರ ಗೌರವ, ಸ್ವಾತಂತ್ರ್ಯವನ್ನು ರಕ್ಷಿಸಲು ಹಾಗೂ ಅವರಿಗೆ ಅನುಕೂಲಕರ ವಾತಾವರಣ ಸೃಷ್ಟಿಸಲು ಜಾರಿಗೊಂಡಿರುವ ಫೋಕ್ಸೋ ಕಾಯ್ದೆಯ ಕಾನೂನಿನ ಚೌಕಟ್ಟನ್ನು ವಿವರಿಸಿದರು.ರಕ್ಷಕ ವೃತ್ತ ನಿರೀಕ್ಷಕ ಸತ್ಯನಾರಾಯಣ್ ಮಾತನಾಡಿ, ಅನಾದಿ ಕಾಲದಿಂದಲೂ ದೇಶದಲ್ಲಿ ಹೆಣ್ಣು ಮಕ್ಕಳು ಕೀಳು ಎಂಬ ಭಾವನೆಯು ಬೇರೂರಿದ್ದು, ಈ ಮನಸ್ಥಿತಿ ಬದಲಾಗದಾಗ ಮಾತ್ರ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಶೋಷಣೆ ಸಂಪೂರ್ಣವಾಗಿ ತಡೆಯಲು ಸಾಧ್ಯ ಎಂದು ತಿಳಿಸಿದರು.ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷ ಎಚ್.ಸಿ. ಪಾಪಿರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಸುರೇಖಾ ವಿಜಯಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಕಂಠ, ಉಪನಿರೀಕ್ಷಕ ಸಿ.ಡಿ. ಶಿವಸ್ವಾಮಿ, ಸರಕಾರಿ ಬಾಲಕಿಯರ ಶಾಲೆಯ ಮುಖ್ಯ ಶಿಕ್ಷಕಿ ಕೃಷ್ಣಕುಮಾರಿ ಮತ್ತಿತರರು ಉಪಸ್ಥಿತರಿದ್ದರು.







