ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ

ಉಳ್ಳಾಲ ಜ.21: ದೇರಳಕಟ್ಟೆಯ ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಕೋಟೆಕಾರ್ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಂಸ್ಥೆಯ ನಿರ್ದೇಶಕ ಅಬ್ದುರ್ರಹ್ಮಾನ್ ಮಗುವಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಸ್ಥೆಯ ವೈದ್ಯಕೀಯ ಅಧಿಕಾರಿ ಡಾ. ರೋಹನ್ ಮೋನಿಶ್, ಮಕ್ಕಳ ತಜ್ಞರಾದ ಡಾ. ಪ್ರಸಾದ್ ನಾಯಕ್, ಹಾಗೂ ಆಸ್ಪತ್ರೆ ಸಿಬ್ಬಂದಿ ಉಪಸ್ಥಿತರಿದ್ದರು.
Next Story





