Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಪಾಲಿಗೆ ಕಂಟಕವಾಗಿರುವ ‘ಹೆಬ್ಬಾಳ’

ಬಿಜೆಪಿ ಪಾಲಿಗೆ ಕಂಟಕವಾಗಿರುವ ‘ಹೆಬ್ಬಾಳ’

ವಾರ್ತಾಭಾರತಿವಾರ್ತಾಭಾರತಿ21 Jan 2016 11:27 PM IST
share
ಬಿಜೆಪಿ ಪಾಲಿಗೆ ಕಂಟಕವಾಗಿರುವ ‘ಹೆಬ್ಬಾಳ’

ಬೆಂಗಳೂರು, ಜ.21: ಪ್ರತಿಪಕ್ಷ ಬಿಜೆಪಿಗೆ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಕಂಟಕವಾಗಿದೆ. ಬಿಜೆಪಿ ಶಾಸಕ ಜಗದೀಶ್‌ಕುಮಾರ್ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯನಾಯ್ಡು, ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಪ್ರಬಲ ಲಾಬಿ ನಡೆಸುತ್ತಿದ್ದಾರೆ.
ಕಟ್ಟಾ ಸುಬ್ರಹ್ಮಣ್ಯನಾಯ್ಡು ತಮಗೆ ಟಿಕೆಟ್ ನೀಡಿ, ಚುನಾವಣೆಯ ವೆಚ್ಚವನ್ನು ಪಕ್ಷ ಭರಿಸಬೇಕು ಎಂಬ ಬೇಡಿಕೆಯನ್ನು ಇಟ್ಟಿದ್ದಾರೆ. ಒಂದು ವೇಳೆ ಬೇರೆಯವರಿಗೆ ಟಿಕೆಟ್ ನೀಡಿದರೆ ಚುನಾವಣಾ ಪ್ರಕ್ರಿಯೆಯಲ್ಲಿ ತಟಸ್ಥವಾಗಿರುವುದಾಗಿ ಪಕ್ಷದ ಪ್ರಮುಖ ನಾಯಕರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಭೂ ಅಕ್ರಮಗಳ ಆರೋಪಗಳಿಂದಾಗಿ 2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಟ್ಟಾ ಸುಬ್ರಹ್ಮಣ್ಯನಾಯ್ಡುಗೆ ಬಿಜೆಪಿ ಟಿಕೆಟ್ ನೀಡಿರಲಿಲ್ಲ. ಆದರೆ, ಅವರು ತಮ್ಮ ಬೆಂಬಲಿಗ ಜಗದೀಶ್‌ಕುಮಾರ್‌ಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಬದಲಾದ ರಾಜಕೀಯ ಪರಿಸ್ಥಿತಿಯಿಂದಾಗಿ ಸ್ವತಃ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಬಿಜೆಪಿಯಿಂದ ಟಿಕೆಟ್ ಪಡೆಯಲು ಪ್ರಯತ್ನ ಪಡುತ್ತಿದ್ದಾರೆ.

 ಕೋಲಾರದ ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ಮೂಲಕ ಟಿಕೆಟ್ ಗಿಟ್ಟಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಈ ಸಂಬಂಧ ಸದಾನಂದಗೌಡ, ಗುರುವಾರ ಚಾಮರಾಜ ಪೇಟೆಯಲ್ಲಿರುವ ಕೇಶವಕೃಪಾದಲ್ಲಿ ಆರೆಸ್ಸೆಸ್ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದಾರೆ.
ರಾಜ್ಯಾಧ್ಯಕ್ಷರಿಗೆ ವರದಿ ಸಲ್ಲಿಕೆ:  ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಕುರಿತು ಸ್ಪಷ್ಟವಾದ ತೀರ್ಮಾನ ಕೈಗೊಳ್ಳಲಾಗಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷರಿಗೆ ವರದಿಯನ್ನು ಸಲ್ಲಿಸಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ತಿಳಿಸಿದ್ದಾರೆ.

ಗುರುವಾರ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಪ್ರಮುಖ ನಾಯಕರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಬಿಜೆಪಿ ಘಟಕದ ವತಿಯಿಂದ ರಾಜ್ಯಾಧ್ಯಕ್ಷರಿಗೆ ವರದಿ ಸಲ್ಲಿಸಲಾಗಿದೆ. ಶೀಘ್ರವೇ ಅಭ್ಯರ್ಥಿಯನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದರು.
ಸಂಭಾವ್ಯ ಅಭ್ಯರ್ಥಿಗಳು:  ವೈ.ಎ.ನಾರಾಯಣಸ್ವಾಮಿ(ಹೆಬ್ಬಾಳ), ಸೂರ್ಯಕಾಂತ ನಾಗಮಾರಪಲ್ಲಿ ಅಥವಾ ಪ್ರಕಾಶ್ ಖಂಡ್ರೆ(ಬೀದರ್), ಮಾಜಿ ಸಚಿವ ಶಿವನಗೌಡ ನಾಯಕ್(ದೇವದುರ್ಗ) ಹೆಸರನ್ನು ಬಿಜೆಪಿ ಕೇಂದ್ರೀಯ ಸಮಿತಿಗೆ ರಾಜ್ಯ ಘಟಕ ಶಿಫಾರಸು ಮಾಡಿದ್ದು, ಬಹುತೇಕ ಶುಕ್ರವಾರ ಸಂಜೆ ವೇಳೆಗೆ ಅಭ್ಯರ್ಥಿಗಳ ಘೋಷಣೆಯಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X