Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಎಬಿವಿಪಿ ನಾಯಕನಿಂದ ಸುಳ್ಳು ಹೇಳಿಕೆ:...

ಎಬಿವಿಪಿ ನಾಯಕನಿಂದ ಸುಳ್ಳು ಹೇಳಿಕೆ: ಪೊಲೀಸರ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ21 Jan 2016 11:39 PM IST
share

ಹೈದರಾಬಾದ್,ಜ.21: ಕಳೆದ ವರ್ಷ ಅಂಬೇಡ್ಕರ್ ವಿದ್ಯಾರ್ಥಿ ಸಂಘ(ಎಎಸ್‌ಎ)ದ ಸದಸ್ಯರು ತನ್ನ ಮೇಲೆ ಹಲ್ಲೆ ನಡೆಸಿದ್ದರು ಎಂಬ ಎಬಿವಿಪಿ ನಾಯಕ ಸುಶೀಲ ಕುಮಾರ್ ಹೇಳಿಕೆಯು ಉತ್ಪ್ರೇಕ್ಷೆಯಿಂದ ಕೂಡಿದೆ ಎಂದು ಸೈಬರಾಬಾದ್ ಪೊಲೀಸರು ಮತ್ತು ಹೈದರಾಬಾದ್ ವಿವಿಯ ಅಧಿಕಾರಿಗಳು ಬುಧವಾರ ಹೈದರಾಬಾದ್ ಉಚ್ಚ ನ್ಯಾಯಾಲಯದಲ್ಲಿ ಹೇಳಿಕೆಗಳನ್ನು ನೀಡಿದ್ದಾರೆ. ಎಬಿವಿಪಿ ಮತ್ತು ಎಎಸ್‌ಎ ಕಾರ್ಯಕರ್ತರ ಹೊಯ್‌ಕೈ ಬಳಿಕ ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ ಅವರು ಎಎಸ್‌ಎ ಸದಸ್ಯರು ಕುಮಾರ್‌ಗೆ ಥಳಿಸಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರೋಪಿಸಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮತಿ ಇರಾನಿಯವರಿಗೆ ಪತ್ರವನ್ನು ಬರೆದಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ನೀಡಿರುವ ಈ ಹೇಳಿಕೆಗಳು ಭಾರೀ ಮಹತ್ವವನ್ನು ಪಡೆದುಕೊಂಡಿವೆ. ಆತ್ಮಹತ್ಯೆ ಮಾಡಿಕೊಂಡಿರುವ ರೋಹಿತ್ ವೇಮುಲಾ ಮತ್ತು ಇತರ ನಾಲ್ವರು ದಲಿತ ವಿದ್ಯಾರ್ಥಿಗಳ ಉಚ್ಚಾಟನೆಗೆ ಈ ಘಟನಾವಳಿಗಳು ನಾಂದಿ ಹಾಡಿದ್ದವು.
 ವಿವಿ ಆವರಣದಲ್ಲಿ ತನ್ನ ಪುತ್ರನಿಗೆ ರಕ್ಷಣೆ ನೀಡಬೇಕೆಂದು ಕೋರಿ ಕುಮಾರ್ ತಾಯಿ ವಿನಯಾ ಸಲ್ಲಿಸಿರುವ ಅರ್ಜಿಗೆ ಉತ್ತರವಾಗಿ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಪೊಲೀಸರು ಮತ್ತು ವಿವಿ ಅಧಿಕಾರಿಗಳು, ಕಳೆದ ವರ್ಷದ ಆಗಸ್ಟ್‌ನಲ್ಲಿ ಕ್ಯಾಂಪಸ್‌ನಲ್ಲಿ ಎಬಿವಿಪಿ ಮತ್ತು ಎಎಸ್‌ಎ ಕಾರ್ಯಕರ್ತರ ನಡುವಿನ ಹೊಡೆದಾಟದಲ್ಲಿ ಕುಮಾರ್‌ಗೆ ಭುಜದ ಮೇಲೆ ಸಣ್ಣ ತರಚಿದ ಗಾಯಗಳಷ್ಟೇ ಆಗಿದ್ದವು ಎಂದು ಸ್ಪಷ್ಟಪಡಿಸಿದ್ದಾರೆ.
ಕುಮಾರ್ ಆ.3ರಂದು ಪೊಲೀಸರಿಗೆ ಸಲ್ಲಿಸಿದ್ದ ದೂರಿನಲ್ಲಿ ಎಎಸ್‌ಎದ 40 ಸದಸ್ಯರು ತನ್ನ ಮೇಲೆ ಹಲ್ಲೆ ನಡೆಸಿದ್ದರು ಎಂದು ದೂರಿಕೊಂಡಿದ್ದರು. ದಲಿತ ವಿದ್ಯಾರ್ಥಿಗಳ ಹಲ್ಲೆಯಿಂದಾಗಿ ಕುಮಾರ್ ರಕ್ತವಾಂತಿ ಮಾಡಿಕೊಳ್ಳುತ್ತಿದ್ದು, ಶ್ವಾಸಕೋಶಗಳಲ್ಲಿ ನೋವಾಗುತ್ತದೆ ಎಂದು ದೂರಿಕೊಂಡಿದ್ದರಿಂದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಬಿವಿಪಿ ಬಳಿಕ ಹೇಳಿತ್ತು.
 ವಿವಿಯ ಪರವಾಗಿ ಪ್ರಮಾಣಪತ್ರವನ್ನು ಸಲ್ಲಿಸಿರುವ ಕುಲಸಚಿವ ಬಿ.ಪಾಂಡು ರೆಡ್ಡಿ ಅವರು ಘಟನೆಯ ಬಗ್ಗೆ ಶಿಸ್ತುಪಾಲನಾ ಮಂಡಳಿಯ ವರದಿ,ಆ.4ರಂದು ಕುಮಾರ್ ದಾಖಲಾಗಿದ್ದ ವೈದ್ಯರ ವರದಿಯನ್ನು ಉಲ್ಲೇಖಿಸಿ ಕುಮಾರ್‌ಗೆ ತರಚಿದ ಗಾಯಗಳಷ್ಟೇ ಆಗಿದ್ದವು ಎಂದು ತಿಳಿಸಿದ್ದಾರೆ.
  ಹೈದರಾಬಾದ್‌ನ ಪೊಲೀಸ್ ಆಯುಕ್ತ ಸಿ.ವಿ.ಆನಂದ್ ಅವರೂ ಕುಮಾರ್‌ಗೆ ಸಣ್ಣಪುಟ್ಟ ಗಾಯಗಳು ಮಾತ್ರ ಆಗಿದ್ದವು ಎಂದು ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.
 ಇದಿಷ್ಟೇ ಅಲ್ಲ, ಕುಮಾರನ ತಾಯಿ ತನ್ನ ಪುತ್ರನ ಬಗ್ಗೆ ಸಹಾನುಭೂತಿಯನ್ನು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದೂ ಪಾಂಡು ರೆಡ್ಡಿ ಹೇಳಿದ್ದಾರೆ. ಪ್ರಕರಣದ ಮುಂದಿನ ವಿಚಾರಣೆ ಜ.25ರಂದು ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X