ನಾಳೆ ಒಕ್ಕಲಿಗ ಸಂಘದ 7ನೆ ವಾರ್ಷಿಕೋತ್ಸವ
ಬೆಂಗಳೂರು, ಜ. 21: ಸಂಕ್ರಾಂತಿ ಹಬ್ಬದ ಸೊಗಡನ್ನು ಜನತೆಗೆ ಪರಿಚಯಿಸುವ ಸಲುವಾಗಿ ವಿಶ್ವ ಒಕ್ಕಲಿಗರ ಮಹಾ ವೇದಿಕೆಯಿಂದ 7ನೆ ವರ್ಷದ ವಾರ್ಷಿಕೋತ್ಸವವನ್ನು ಜ. 23ರಂದು ಮಹಾಲಕ್ಷ್ಮೀ ಲೇಔಟ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಗೋಪಾಲಯ್ಯ ತಿಳಿಸಿದ್ದಾರೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ವಾರ್ಷಿಕೋತ್ಸವಕ್ಕೆ ನಿರ್ಮಾಲಾನಂದ ಸ್ವಾಮೀಜಿ ಹಾಗೂ ನಂಜಾವಧೂತ ಸ್ವಾಮೀಜಿಯವರು ಚಾಲನೆ ನೀಡಲಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅತಿಥಿಗಳಾಗಿ ಆಗಮಿಸಲಿದ್ದಾರೆಂದು ತಿಳಿಸಿದರು. ಉತ್ಸವ ಸಂಜೆ 4 ರಿಂದ 9 ಗಂಟೆಯವರೆಗೆ ನಡೆಯುತ್ತದೆ. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ವಿಶ್ವಮಾನವ ಒಕ್ಕಲಿಗ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಗುತ್ತದೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಉಪ ಮೇಯರ್ ಹೇಮಲತಾ, ಜಿ.ಟಿ. ದೇವೇಗೌಡ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.
Next Story





