ಜ.27: ಸುಧಾಕರ್ ರೆಡ್ಡಿ ಮಂಗಳೂರಿಗೆ

ಮಂಗಳೂರು, ಜ.21: ಭಾರತ ಕಮ್ಯುನಿಸ್ಟ್ ಪಕ್ಷ(ಸಿಪಿಐ)ದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರವರಂ ಸುಧಾಕರ್ ರೆಡ್ಡಿ ಜ.27ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಅವರು ಅಂದು ಬೆಳಗ್ಗೆ 10ಕ್ಕೆ ನಡೆಯಲಿರುವ ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿ ಹಾಗೂ ಎಲ್ಲ ಜಿಲ್ಲಾ ಕಾರ್ಯದರ್ಶಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಕಾಸರಗೋಡಿನ ಹೊಸಂಗಡಿಯಲ್ಲಿ ನಡೆಯಲಿರುವ ಪಕ್ಷದ ‘ಜನಪರ ಜಾಥಾ’ದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಲಿದ್ದಾರೆ ಎಂದು ಸಿಪಿಐ ದ.ಕ. ಮತ್ತು ಉಡುಪಿ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್ ತಿಳಿಸಿದ್ದಾರೆ.
Next Story





