Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು; ಪ್ರಾಟೆಸ್ಟೆಂಟ್ ಸಮುದಾಯಕ್ಕೆ...

ಬೆಂಗಳೂರು; ಪ್ರಾಟೆಸ್ಟೆಂಟ್ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯೆ ಕಲ್ಪಿಸುವಂತೆ ಆಗ್ರಹ,

ವಾರ್ತಾಭಾರತಿವಾರ್ತಾಭಾರತಿ22 Jan 2016 6:45 PM IST
share

ಬೆಂಗಳೂರು.ಜ.22: ಸರ್ಕಾರ ಮತ್ತು ಪಕ್ಷದ ಪದಾಧಿಕಾರಿಗಳ ನೇಮಕಾತಿಗಳಲ್ಲಿ ಪ್ರಾಟೆಸ್ಟೆಂಟ್ಸ್ ಸಮುದಾಯಕ್ಕೆ ತೀವ್ರ ಅನ್ಯಾಯವಾಗುತ್ತಿದ್ದು, ರೋಮನ್ ಕ್ಯಾಥೋಲಿಕ್ ಕ್ರೈಸ್ತರಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತಿದೆ ಎಂದು ಆಲ್ ಇಂಡಿಯಾ ಕ್ರಿಶ್ಚಿಯನ್ ಡೆಮೋಕ್ರೇಟಿಕ್ ಫ್ರೆಂಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಏಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರಿಗೆ ದೂರು ನೀಡಿದೆ.

ಶೇ 40 ರಷ್ಟಿರುವ ರೋಮನ್ ಕ್ಯಾತೋಲಿಕ್ ಸಮುದಾಯಕ್ಕೆ ಹೆಚ್ಚಿನ ಅವಕಾಶಗಳನ್ನು ನೀಡಲಾಗುತ್ತಿದೆ. ಸರ್ಕಾರದಲ್ಲಿ ಸಚಿವ ಸ್ಥಾನ, ವಿಧಾನಮಂಡಲದ ನೇಮಕಾತಿಯಲ್ಲಿ ಶೇ 95 ರಷ್ಟು ಕ್ಯಾಥೋಲಿಕ್ ಸಮುದಾಯಕ್ಕೆ ದೊರೆಯುತ್ತಿದೆ. ಪಕ್ಷದಲ್ಲೂ ಪ್ರಾಟೆಸ್ಟೆಂಟ್ಸ್ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯೆ ದೊರೆಯುತ್ತಿಲ್ಲ ಎಂದು ಆಪಾದಿಸಿದೆ.

ಆಲ್ ಇಂಡಿಯಾ ಡೆಮೋಕ್ರೇಟಿಕ್ ಫ್ರೆಂಟ್ ಅಧ್ಯಕ್ಷ ಹಾಗೂ ಕೆಪಿಸಿಸಿ ಕಾರ್ಮಿಕ ವಿಭಾಗದ ಮಾಜಿ ಅಧ್ಯಕ್ಷ ಕೆ. ಸ್ಯಾಮುಯಲ್ ಚಾಕೋ ನೇತೃತ್ವದ ನಿಯೋಗ ಸಿದ್ದರಾಮಯ್ಯ, ದಿಗ್ವಿಜಯ್ ಸಿಂಗ್ ಅವರಲ್ಲದೇ ಗೃಹ ಸಚಿವ ಡಾ: ಜಿ. ಪರಮೇಶ್ವರ್ ಹಾಗೂ ಏಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫರ್ನಾಂಡೀಸ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಕಾಂಗ್ರೆಸ್ ಪಕ್ಷದ ಜತೆ ಅನಾದಿಕಾಲದಿಂದಲೂ ಗುರುತಿಸಿಕೊಂಡಿರುವ ಪ್ರಾಟೆಸ್ಟೆಂಟ್ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯೆ ಕಲ್ಪಿಸುವಂತೆ ಕೋರಿತು.

ಪಕ್ಷ ಮತ್ತು ಸರ್ಕಾರದಲ್ಲಿ ಪ್ರಾತಿನಿಧ್ಯವಿಲ್ಲದೇ ಇರುವ ಹಿನ್ನೆಲೆಯಲ್ಲಿ ಪ್ರಾಟೆಸ್ಟೆಂಟ್ ಸಮುದಾಯ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಸಾಮಾಜಿಕ ಮತ್ತು ಆರ್ಥಿಕವಾಗಿಯೂ ತೀರ ಹಿಂದುಳಿದೆ. ಶಾಸನಸಭೆಗಳಿಗೆ ನೇಮಕಾತಿ ಮಾಡುವಾಗ ಸಂದರ್ಭದಲ್ಲೂ ಪ್ರಾಟೆಸ್ಟೆಂಟ್ ವರ್ಗಕ್ಕೆ ಮಾನ್ಯತೆ ದೊರೆಯುತ್ತಿಲ್ಲ.

 ಈ ಅನ್ಯಾಯವನ್ನು ಸರಿಪಡಿಸಿಕೊಳ್ಳಬೇಕಿದ್ದು, ಕ್ರೈಸ್ತ ಸಮುದಾಯದಲ್ಲಿ ನಿರ್ಲಕ್ಷ್ಯಕ್ಕೊಳಗಾಗಿರುವ ಪ್ರಾಟೆಸ್ಟೆಂಟ್ ಸಮುದಾಯಕ್ಕೆ ಸೂಕ್ತ ರೀತಿಯಲ್ಲಿ ನ್ಯಾಯ ಒದಗಿಸಿಕೊಡಬೇಕು. ಈ ವರ್ಗದಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕೆಂದು ಕೋರಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಲ್ಪ ಸಂಖ್ಯಾತರ ಅಭಿವೃದ್ಧಿಗಾಗಿ ಕ್ರೈಸ್ತ್ರರ ಅಭಿವೃದ್ಧಿ ಮಂಡಳಿ ರಚಿಸಿ, ಸಮುದಾಯದ ಶ್ರೇಯೋಭಿವೃದ್ಧಿಗಾಗಿ 100 ಕೋಟಿ ರೂ ಮೀಸಲಿಟ್ಟಿರುವುದು ಶ್ಲಾಘನೀಯ ಕಾರ್ಯವಾಗಿದೆ. ಆದರೆ ಸರ್ಕಾರ ಈ ಮಂಡಳಿಯನ್ನು ಕ್ರೈಸ್ತ್ರರ ಅಭಿವೃದ್ಧಿ ನಿಗಮ ಮಾಡಿ 300 ಕೋಟಿ ರೂ ಆರ್ಥಿಕ ನೆರವು ನೀಡಬೇಕು. ಸೂಕ್ತ ವ್ಯಕ್ತಿಯನ್ನು ನಿಗಮಕ್ಕೆ ಅಧ್ಯಕ್ಷರನ್ನಾಗಿ ನೇಮಕಮಾಡಿ ಕ್ರೈಸ್ತ್ರರ ಸಮಗ್ರ ಅಭಿವೃದ್ಧಿಯತ್ತ ಗಮನಹರಿಸಬೇಕೆಂದು ನಿಯೋಗ ಮನವಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X