ಮಂಗಳೂರು : ಅರಿವು ಸಿಇಟಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕಾರ್ಯಕ್ರಮ

ಮಂಗಳೂರು,ಜ.22: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಚೆಕ್‌ಗಳ ವಿತರಣೆ ಹಾಗೂ ಅರಿವು ಸಿಇಟಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕಾರ್ಯಕ್ರಮ ಜ.23 ಬೆಳಿಗ್ಗೆ 9.30ಕ್ಕೆ ನಗರದ ಸೈಂಟ್ ಅಲೋಶಿಯಸ್ ಕಾಲೇಜಿನ ಲೊಯೊಲ ಸಭಾಂಗಣದಲ್ಲಿ ನಡೆಯಲಿದೆ.
ಈ ಯೋಜನೆಯ ಪ್ರಯೋಜನವನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಪಡೆಯಬಹುದಾಗಿದ್ದು, ಈ ಶಿಬಿರದಲ್ಲಿ ವಿದ್ಯಾರ್ಥಿಗಳ ಪೋಷಕರು ಸಹ ಭಾಗವಹಿಸಿ ಕಾರ್ಯಕ್ರಮದ ಮಾಹಿತಿಯನ್ನು ಪಡೆಯಬಹುದು ಎಂದು ಪ್ರಕಟನೆ ತಿಳಿಸಿದೆ.
Next Story





