Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಶ್ಚಿಮ ದಂಡೆಯಿಂದ ಯಹೂದಿ ನಿವಾಸಿಗಳ...

ಪಶ್ಚಿಮ ದಂಡೆಯಿಂದ ಯಹೂದಿ ನಿವಾಸಿಗಳ ತೆರವು: ಬಲಪಂಥೀಯ ಇಸ್ರೇಲ್ ಸಂಸದರ ವಿರೋಧ

ವಾರ್ತಾಭಾರತಿವಾರ್ತಾಭಾರತಿ22 Jan 2016 11:24 PM IST
share

ಜೆರುಸಲೇಂ, ಜ. 22: ಪಶ್ಚಿಮ ದಂಡೆಯ ನಗರ ಹೆಬ್ರಾನ್‌ನಲ್ಲಿ ಅಕ್ರಮವಾಗಿ ನೆಲೆಸಿರುವ ಯಹೂದಿ ನಿವಾಸಿಗಳನ್ನು ಇಸ್ರೇಲ್ ಪಡೆಗಳು ಶುಕ್ರವಾರ ಬಲವಂತವಾಗಿ ತೆರವುಗೊಳಿಸಿದವು. ಇದಕ್ಕೆ ಪ್ರತಿರೋಧ ವ್ಯಕ್ತಿಪಡಿಸಿದ ನಿವಾಸಿಗಳು, ತಾವು ಈ ಮನೆಗಳನ್ನು ಫೆಲೆಸ್ತೀನೀಯರಿಂದ ಖರೀದಿಸಿದ್ದೇವೆ ಎಂದು ಹೇಳಿಕೊಂಡರು.
ಈ ಘರ್ಷಣೆಯ ಬೆನ್ನಿಗೇ, ರಂಗಕ್ಕಿಳಿದ ಕೆಲವು ಬಲಪಂಥೀಯ ಇಸ್ರೇಲ್ ಸಂಸದರು, ಯಹೂದಿಯರನ್ನು ಬಲವಂತವಾಗಿ ಒಕ್ಕಲೆಬ್ಬಿಸಿದರೆ ಸರಕಾರಕ್ಕೆ ನೀಡುವ ಬೆಂಬಲವನ್ನು ಹಿಂದಕ್ಕೆ ಪಡೆದುಕೊಳ್ಳುವ ಬೆದರಿಕೆ ಹಾಕಿದ್ದಾರೆ.
ಇಸ್ರೇಲಿಗರು ಮತ್ತು ಫೆಲೆಸ್ತೀನೀಯರ ನಡುವೆ ಭಾರೀ ಉದ್ವಿಗ್ನತೆ ಕಾಣಿಸಿಕೊಳ್ಳುವ ಹೆಬ್ರಾನ್ ನಗರದಲ್ಲಿ, ಯಹೂದಿಗಳು ಖರೀದಿಸಿದ್ದಾರೆನ್ನಲಾದ ಮನೆಗಳಲ್ಲಿ ವಾಸಿಸಲು ಅನುಮೋದನೆ ನೀಡಲು ಇಸ್ರೇಲ್ ರಕ್ಷಣಾ ಸಚಿವ ಮೋಶೆ ಯಾಲನ್ ನಿರಾಕರಿಸಿರುವುದು ಗಮನಾರ್ಹವಾಗಿದೆ.
ರಕ್ಷಣಾ ಸಚಿವರ ಈ ನಿಲುವನ್ನು ಪ್ರಧಾನಿ ಬೆಂಜಮಿನ್ ನೆತನ್ಯಾಹುರ ಲಿಕುಡ್ ಪಕ್ಷದ ಸಚಿವರು ಮತ್ತು ಸಂಸದರು ಟೀಕಿಸಿದ್ದಾರೆ.
ಫೆಲೆಸ್ತೀನ್ ಮಾಲಕರಿಂದ ತಾವು ಕಾನೂನುಬದ್ಧವಾಗಿ ಮನೆಗಳನ್ನು ಖರೀದಿಸಿರುವುದಾಗಿ ಯಹೂದಿ ನಿವಾಸಿಗಳು ಹೇಳಿಕೊಂಡಿದ್ದಾರೆ. ಆದರೆ, ಹೀಗೆ ಖರೀದಿಸಲಾದ ಮನೆಗಳಲ್ಲಿ ವಾಸಿಸಲು ಅವರಿಗೆ ರಕ್ಷಣಾ ಸಚಿವಾಲಯದ ಅನುಮೋದನೆ ಬೇಕಾಗಿದೆ. ಮನೆ ಖರೀದಿ ವ್ಯವಹಾರದಲ್ಲಿ ನಿವಾಸಿಗಳು ಕಾನೂನು ಪಾಲಿಸಿಲ್ಲ ಎಂದು ಮೋಶೆ ಹೇಳಿದ್ದಾರೆ.
ಪಶ್ಚಿಮ ದಂಡೆಯ ದಕ್ಷಿಣದಲ್ಲಿರುವ ನಗರ ಹೆಬ್ರಾನ್‌ನಲ್ಲಿ ಸುಮಾರು 2.2 ಲಕ್ಷ ಫೆಲೆಸ್ತೀನಿಯರು ವಾಸಿಸುತ್ತಿದ್ದಾರೆ. ನಗರದ ಕೇಂದ್ರ ಭಾಗದಲ್ಲಿ ಸುಮಾರು 1,000 ಯಹೂದಿಗಳೂ ವಾಸಿಸುತ್ತಿದ್ದಾರೆ. ಹಾಗಾಗಿ, ಇದು ಹಿಂದಿನಿಂದಲೂ ಘರ್ಷಣೆಯ ಕೇಂದ್ರ ಬಿಂದುವಾಗಿದೆ. ಇಲ್ಲಿ ನೆಲೆಸಿರುವ ಯಹೂದಿ ನಿವಾಸಿಗಳಿಗೆ ಇಸ್ರೇಲ್ ಸೇನೆ ರಕ್ಷಣೆ ನೀಡುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X