Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಲಿತರ ಏಳಿಗೆಗೆ ಸರಕಾರ ಬದ್ಧ: ಪ್ರಧಾನಿ...

ದಲಿತರ ಏಳಿಗೆಗೆ ಸರಕಾರ ಬದ್ಧ: ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ22 Jan 2016 11:35 PM IST
share

ವಾರಣಾಸಿ,ಜ.22: ಹೈದರಾಬಾದ್‌ನಲ್ಲಿ ದಲಿತ ವಿದ್ಯಾರ್ಥಿಯ ಆತ್ಮಹತ್ಯೆ ಕುರಿತಂತೆ ತನ್ನ ಸರಕಾರವು ತೀವ್ರ ದಾಳಿಗೆ ಗುರಿಯಾಗಿರುವಂತೆಯೇ ಇತ್ತ ಪ್ರಧಾನಿ ನರೇಂದ್ರ ಮೋದಿಯವರು, ತನ್ನ ಸರಕಾರವು ದಲಿತರು,ಬಡವರು ಮತ್ತು ದಮನಿತರ ಏಳಿಗೆಗೆ ಬದ್ಧವಾಗಿದೆ ಎಂದು ಶುಕ್ರವಾರ ಇಲ್ಲಿ ಹೇಳಿದರು.
ತನ್ನ ಲೋಕಸಭಾ ಕ್ಷೇತ್ರದಲ್ಲಿ ಅಂಗವಿಕಲರಿಗೆ ಅಗತ್ಯ ಸಾಧನಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ದಲಿತರನ್ನು ಪ್ರಸ್ತಾಪಿಸಿದರಾದರೂ ಹೈದರಾಬಾದ್ ವಿವಿಯ ದಲಿತ ವಿದ್ಯಾರ್ಥಿ ರೋಹಿತ್ ವೇಮುಲಾ ಅವರ ಆತ್ಮಹತ್ಯೆಯ ಬಗ್ಗೆ ಮಾತನಾಡುವ ಗೋಜಿಗೆ ಹೋಗಲಿಲ್ಲ.
ನಮ್ಮ ಸರಕಾರವು ಬಡವರು,ದಲಿತರು,ದಮನಿತರು ಮತ್ತು ಅವಕಾಶ ವಂಚಿತರಿಗಾಗಿ ಅರ್ಪಿತವಾಗಿದೆ ಮತ್ತು ಬದುಕಿನಲ್ಲಿ ಬವಣೆಗೊಳಗಾದವರಿಗಾಗಿ ಏನನ್ನಾದರೂ ಮಾಡಲು ಪ್ರಯತ್ನಿಸುತ್ತಿದೆ. ಬಡವರ ಏಳಿಗೆಗಾಗಿ ಮತ್ತು ಅವರ ಬದುಕಿನಲ್ಲಿ ಬದಲಾವಣೆಗಳನ್ನು ತರಲು ಈ ಸರಕಾರವು ಬದ್ಧವಾಗಿದೆ ಮತ್ತು ಈ ನಿಟ್ಟಿನಲ್ಲಿ ನಿರಂತರ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ಮೋದಿ ನುಡಿದರು.
ಎಲ್ಲ ಸಮಯದಲ್ಲಿಯೂ ನಾನು ಭಯಂಕರ ಒತ್ತಡದಲ್ಲಿರುತ್ತೇನೆ ಮತ್ತು ನನ್ನನ್ನು ವಿವಾದಗಳಲ್ಲಿ ಸಿಲುಕಿಸುವ ಪ್ರಯತ್ನಗಳು ನಡೆಯುತ್ತಿರುತ್ತವೆ. ಆದರೆ ಬಡವರಿಗಾಗಿ ಶ್ರಮಿಸುವ ನನ್ನ ಕೆಲಸದಿಂದ ನಾನು ವಿಮುಖನಾಗುವುದಿಲ್ಲ ಎಂದರು.
ಬಡವರು ಮತ್ತು ಶೋಷಿತರಿಗೆ ನೆರವಾಗುವುದು ನನ್ನ ಮಂತ್ರವಾಗಿದೆ ಮತ್ತು ಅದಕ್ಕಾಗಿಯೇ ನಾನು ಯಾವುದಕ್ಕೂ ವಿಚಲಿತನಾಗುವುದಿಲ್ಲ. ವ್ಯವಸ್ಥೆಯಲ್ಲಿ ಬದಲಾವಣೆಗಳಾಗುತ್ತಿದ್ದು, ಮಧ್ಯವರ್ತಿಗಳಿಗೆ ಉಳಿಗಾಲವಿಲ್ಲದ್ದರಿಂದ ಇವೆಲ್ಲ ನಡೆಯುತ್ತಿದೆ ಎಂದರು.
 ವಿಕಲಾಂಗರತ್ತ ನಮ್ಮ ಮನೋಭಾವ ಬದಲಾಗಬೇಕು. ಅವರನ್ನು ವಿಕಲಾಂಗರು ಎನ್ನುವ ಬದಲು ‘ದಿವ್ಯಾಂಗರು’ಎಂದು ಕರೆಯಬೇಕು. ಅವರ ವೈಕಲ್ಯಗಳ ಬದಲು ಜನರು ದೇವರು ಅವರಿಗೆ ವಿಶೇಷ ಶಕ್ತಿಯನ್ನು ನೀಡಿದ್ದಾನೆ ಎಂದು ಪರಿಗಣಿಸಬೇಕು ಎಂದು ಕರೆ ನೀಡಿದರು.
ಇಂತಹ ಜನರಿಗೆ ಸರಕಾರಿ ಕಚೇರಿಗಳಲ್ಲಿ ಸೌಲಭ್ಯಗಳನ್ನು ಕಲ್ಪಿಸಲು ಮತ್ತು ಅವರ ಬದುಕನ್ನು ಆರಾಮದಾಯಕವಾಗಿಸಲು ‘ಸುಗಮ್ಯ ಭಾರತ್ ಅಭಿಯಾನ’ವನ್ನು ಆರಂಭಿಸುವುದಾಗಿ ಪ್ರಕಟಿಸಿದ ಅವರು, ಇದಕ್ಕಾಗಿ ಅಗತ್ಯವಾದರೆ ಕೆಲವು ನಿಯಮಗಳನ್ನೂ ಬದಲಿಸಬಹುದು ಎಂದರು.
ವಿಕಲಾಂಗರಿಗಾಗಿ ಇನ್ನು ಮುಂದೆ ಪ್ರತಿಯೊಂದೂ ಸರಕಾರಿ ಕಟ್ಟಡದಲ್ಲಿ ರ್ಯಾಂಪ್‌ಗಳು ಮತ್ತು ಶೌಚಾಲಯ ಆಸನ ಸೌಲಭ್ಯಗಳನ್ನು ಕಲ್ಪಿಸುವುದಾಗಿ ಅವರು ಪ್ರಕಟಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X