ಉಮನಗುಡ್ಡೆ ರಸ್ತೆ ಉದ್ಘಾಟನೆ

ಬಂಟ್ವಾಳ, ಜ.22: ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ನಿರ್ಮಾಣಗೊಂಡ ಬ್ರಹ್ಮರಕೂಟ್ಲುವಿನ ದರಿಬಾಗಿಲು-ಉಮನಗುಡ್ಡೆ ನೂತನ ಕಾಂಕ್ರಿಟ್ ರಸ್ತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಳ್ಳಿಗೆ ಗ್ರಾಪಂ ಅಧ್ಯಕ್ಷೆ ರತ್ನಾ, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಮಮತಾ ಗಟ್ಟಿ, ಭೂನ್ಯಾಯ ಮಂಡಳಿ ಸದಸ್ಯ ದಿವಾಕರ ಪಂಬದಬೆಟ್ಟು, ಪುರಸಭಾ ಸದಸ್ಯರಾದ ರಾಮಕೃಷ್ಣ ಆಳ್ವ, ಜಗದೀಶ್ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಅಲಿ ಮತ್ತಿತರರು ಉಪಸ್ಥಿತರಿದ್ದರು.
Next Story





