26ರಂದು ಹುತಾತ್ಮ ಸೈನಿಕರ ಕುಟುಂಬಗಳಿಗೆ ಸನ್ಮಾನ
ಮಂಗಳೂರು, ಜ.22: ನಗರದ ಎಂ.ಫ್ರೆಂಡ್ಸ್ ಟ್ರಸ್ಟ್ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ಜಿಲ್ಲೆಯ ಗಾಯಾಳು ಸೈನಿಕರಿಗೆ ಹಾಗೂ ಹುತಾತ್ಮ ಸೈನಿಕರ ಕುಟುಂಬಕ್ಕೆ ಸನ್ಮಾನ ಕಾರ್ಯಕ್ರಮವನ್ನು ಜ.26ರಂದು ಬೆಳಗ್ಗೆ 10ಕ್ಕೆ ನಗರದ ವೆಲೆನ್ಸಿಯಾದ ರೋಶನಿ ನಿಲಯದ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ಸಂಸ್ಥೆಯಲ್ಲಿ ಆಯೋಜಿಸಿದೆ ಎಂದು ಟ್ರಸ್ಟ್‌ನ ಕಾರ್ಯದರ್ಶಿ ರಶೀದ್ ವಿಟ್ಲ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.
ದ.ಕ. ಜಿಲ್ಲೆ ವ್ಯಾಪ್ತಿಯಲ್ಲಿರುವ 9 ಸೈನಿಕರು ಮತ್ತು ಸೈನಿಕ ಕುಟುಂಬವನ್ನು ಗುರುತಿಸಲಾಗಿದ್ದು, ಅವರನ್ನು ನಿವೃತ್ತ ಲೋಕಾಯುಕ್ತ ನ್ಯಾ.ಎನ್. ಸಂತೋಷ ಹೆಗ್ಡೆ, ಸಚಿವ ಯು.ಟಿ.ಖಾದರ್ ಗೌರವಿಸಲಿದ್ದಾರೆ. ಅಲ್ ಫಲಾಹ್ ಎಂಟರ್‌ಪ್ರೈಸಸ್‌ನ ವ್ಯವಸ್ಥಾಪಕ ನಿರ್ದೇಶಕ ಯೂಸುಫ್ ಎಸ್. ಹಾಗೂ ರೋಶನಿ ನಿಲಯದ ಪ್ರಾಂಶುಪಾಲೆ ಡಾ.ಸೋಫಿಯಾ ಫೆರ್ನಾಂಡಿಸ್ ಅತಿಥಿಗಳಾಗಿ ಭಾಗವಹಿಲಿದ್ದಾರೆ. ಎಂ.ಫ್ರೆಂಡ್ಸ್ ಅಧ್ಯಕ್ಷ ಜಿ.ಮುಹಮ್ಮದ್ ಹನೀಫ್ ಗೋಳ್ತಮಜಲು ಅಧ್ಯಕ್ಷತೆ ವಹಿಸುವರು. ಬಳಿಕ ನ್ಯಾ.ಸಂತೋಷ್ ಹೆಗ್ಡೆಯವರೊಂದಿಗೆ ‘ಸಾಮಾಜಿಕ ಮೌಲ್ಯಗಳ ಕುಸಿತ ಮತ್ತು ಅದರ ಪರಿಣಾಮ’ಗಳ ಕುರಿತು ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿ. ಮುಹಮ್ಮದ್ ಹನೀಫ್, ಸುಜಾ ಮುಹಮ್ಮದ್, ಅಬೂಬಕರ್, ಝಬೈರ್ ಕಂಬಳಬೆಟ್ಟು ಉಪಸ್ಥಿತರಿದ್ದರು.





