Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪರಿಹಾರ ನೀಡಿದ ಬಳಿಕ ವಿದ್ಯುತ್ ಟವರ್...

ಪರಿಹಾರ ನೀಡಿದ ಬಳಿಕ ವಿದ್ಯುತ್ ಟವರ್ ನಿರ್ಮಿಸಿ: ಕೆಪಿಸಿಟಿಎಲ್ ಅಧಿಕಾರಿಗಳಿಗೆ ಸಂತ್ರಸ್ತ ರೈತರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ22 Jan 2016 11:49 PM IST
share
ಪರಿಹಾರ ನೀಡಿದ ಬಳಿಕ ವಿದ್ಯುತ್ ಟವರ್ ನಿರ್ಮಿಸಿ: ಕೆಪಿಸಿಟಿಎಲ್ ಅಧಿಕಾರಿಗಳಿಗೆ ಸಂತ್ರಸ್ತ ರೈತರ ಆಗ್ರಹ


ಪುತ್ತೂರು, ಜ.22: ನೆಟ್ಲಮುಡ್ನೂರು- ಮಾಡಾವು 110 ಕೆವಿ ವಿದ್ಯುತ್ ಲೈನ್ ಕೃಷಿಕರ ಜಮೀನಿನಲ್ಲಿ ಹಾದು ಹೋಗುತ್ತಿದ್ದು, ವಿದ್ಯುತ್ ಟವರ್ ನಿರ್ಮಾಣಕ್ಕಾಗಿ ರೈತರ ಭೂಮಿಯನ್ನು ಬಳಸಿಕೊಳ್ಳಲಾಗಿದೆ. 
ಭೂಮಿ ಮತ್ತು ಕೃಷಿ ಕಳೆದುಕೊಂಡ ರೈತರಿಗೆ ಇಲಾಖೆ ಸೂಕ್ತ ರೀತಿಯಲ್ಲಿ ಪರಿಹಾರ ನೀಡದಿದ್ದಲ್ಲಿ ವಿದ್ಯುತ್ ಟವರನ್ನು ದ್ವಂಸ ಮಾಡುವುದಾಗಿ ಜಿಲ್ಲಾ ರೈತ ಸಂಘ ಕೆಪಿಟಿಸಿಎಲ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದೆ.
ವಿದ್ಯುತ್ ಲೈನ್‌ಗಾಗಿ ಭೂಸ್ವಾಧೀನ ವಿಚಾರದಲ್ಲಿ ಪರಿಹಾರ ಮಾತುಕತೆಗಾಗಿ ಕುಂಬ್ರದ ನವೋದಯ ರೈತ ಸಭಾಭವನದಲ್ಲಿ ಸಂತ್ರಸ್ತ ರೈತರ ಜೊತೆ ಕೆಪಿಟಿಸಿಎಲ್ ಅಧಿಕಾರಿಗಳು ಶುಕ್ರವಾರ ಸಭೆ ನಡೆಸಿದರು. ಸಭೆಯಲ್ಲಿ ಉಪಸ್ಥಿತರಿದ್ದ ಸುಮಾರು 120 ಸಂತ್ರಸ್ತರು ಮತ್ತು ರೈತ ಸಂಘದ ಮುಖಂಡರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಳೆದ ಎರಡು ವರ್ಷಗಳಿಂದ ನಮ್ಮನ್ನು ವ್ಯರ್ಥವಾಗಿ ಕುಣಿದಾಡಿಸುತ್ತಿದ್ದೀರಿ, ಕಳೆದ ಸಭೆಯಲ್ಲಿ ಪರಿಹಾರ ನೀಡುವುದಾಗಿ ಹೇಳಿ ಬಳಿಕ ವಂಚಿಸಲಾಗಿದೆ ಎಂದು ಆರೋಪಿಸಿದರು. ನೆಟ್ಲಮುಡ್ನೂರಿನಿಂದ -ಮಾಡಾವುವರೆಗೆ ಸುಮಾರು 100 ಕ್ಕೂ ಮಿಕ್ಕಿ ಟವರ್‌ಗಳನ್ನು ನಿರ್ಮಾಣ ಮಾಡಲಾಗು ತ್ತಿದ್ದು, ಒಂದು ಟವರ್ ನಿರ್ಮಾಣಕ್ಕೆ 5 ರಿಂದ 10 ಸೆಂಟ್ಸ್ ಜಮೀನನ್ನು ಇಲಾಖೆ ವಶಕ್ಕೆ ಪಡೆದುಕೊಂಡಿದೆ. ವಿದ್ಯುತ್ ಲೈನ್ ಹಾದುಹೋಗುವ ಪ್ರದೇಶದಲ್ಲಿರುವ ಅಡಿಕೆ, ತೆಂಗು, ರಬ್ಬರ್ ಮತ್ತು ಇತರೆ ಫಲವಸ್ತುಗಳನ್ನು ಕಡಿಯಲಾಗಿದ್ದು, ಮತ್ತೆಂದೂ ಆ ಜಾಗದಲ್ಲಿ ಕೃಷಿ ನಡೆಸುವಂತಿಲ್ಲ. ಕೆಲವೊಂದು ರೈತರ ಭೂಮಿಯಲ್ಲಿ 3 ರಿಂದ 4 ಟವರ್‌ಗಳು ನಿರ್ಮಾಣವಾಗುತ್ತಿದೆ. ನಮ್ಮ ಭೂಮಿಗೆ ಪರಿಹಾರ ಕೊಟ್ಟೇ ಲೈನ್ ಎಳೆಯಿರಿ ಎಂದು ರೈತರು ಆಗ್ರಹಿಸಿದರು.
ಕೆಪಿಟಿಸಿಎಲ್‌ನ ಚೀಫ್ ಎಂಜಿನಿಯರ್ ಹೊನ್ನೇಗೌಡ ಹಾಸನ ಮಾತನಾಡಿ, ರೈತರ ಬೇಡಿಕೆಯನ್ನು ಮೇಲಾಧಿಕಾರಿಗಳಿಗೆ ತಿಳಿಸುತ್ತೇವೆ. ಮುಂದಿನ ನಾಲ್ಕು ತಿಂಗಳಿನಲ್ಲಿ ಸೂಕ್ತ ರೀತಿಯಲ್ಲಿ ಪರಿಹಾರವನ್ನು ನೀಡುತ್ತೇವೆ. ಪರಿಹಾರ ಮೊತ್ತವನ್ನು ನೀಡಿದ ಬಳಿಕವೇ ನಾವು ಲೈನ್ ಎಳೆಯುವ ಕಾರ್ಯವನ್ನು ಮುಂದುವರೆಸಲಿದ್ದೇವೆ. ರೈತರು ಇಲಾಖೆಯೊಂದಿಗೆ ಕೈ ಜೋಡಿಸುವಂತೆ ಮನವಿ ಮಾಡಿದರು.
ಕೆಪಿಟಿಸಿಎಲ್ ಎಂಜನಿಯರ್‌ಗಳಾದ ಬಿ.ಎಸ್. ಹೆಬ್ಬಾಳ್, ಅನಂತಸ್ವಾಮಿ, ಮಂಗಳೂರು ಅಧಿಕಾರಿ ದೀಪಕ್, ರೈತ ಸಂಘದ ರಾಜ್ಯ ಕಾರ್ಯದರ್ಶಿ ಕುಮಾರ್ ಸುಬ್ರಹ್ಮಣ್ಯ ಶಾಸ್ತ್ರಿ, ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ್ ಶೆಟ್ಟಿ ಬೈಲುಗುತ್ತು, ಕಾರ್ಯದರ್ಶಿ ಬಡಿಲ ಈಶ್ವರ ಭಟ್, ಮಾಡಾವು ಸೀತಾರಾಮ ರೈ, ಡಾ. ಸತ್ಯಾವತಿ ಆಳ್ವ ಮತ್ತಿತರರು ಉಪಸ್ಥಿತರಿದ್ದರು. ಶೇಖರ್ ರೈ ಸ್ವಾಗತಿಸಿದರು. ವಿಜಯಕುಮಾರ್ ವಂದಿಸಿದರು.

ಶಾಲೆಗಳಿಗೆ ಆಟಿಕೆ ಮತ್ತು ವಿಜ್ಞಾನ ಮಾದರಿಗಳ ವಿತರಣೆ
ಬೆಳ್ತಂಗಡಿ, ಜ.22: ಕಪುಚಿನ್ ಕೃಷಿಕ ಸೇವಾ ಕೇಂದ್ರ ದಯಾಳ್‌ಭಾಗ್ ಗ್ರಾಮಾಭಿವೃದ್ಧಿ ಯೋಜನೆ ವಿಮುಕ್ತಿ ವತಿಯಿಂದ ದಾನಿಗಳ ಸಹಾಯದಿಂದ ಆಯ್ದ ಶಾಲೆಗಳಿಗೆ ಆಟಿಕೆ ಸಾಮಗ್ರಿಗಳು ಮತ್ತು ವಿಜ್ಞಾನ ಮಾದರಿಗಳ ವಿತರಣಾ ಕಾರ್ಯಕ್ರಮ ನಡೆಯಿತು.
ಅತಿಥಿಗಳಾಗಿ ಬೆನಕ ಹೆಲ್ತ್ ಸೆಂಟರ್‌ನ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್.ಜಿ.ಭಟ್, ಸಂಸ್ಥೆಯ ನಿರ್ದೇಶಕ ವಂ.ಫಾ.ವಿನೋದ್ ಮಸ್ಕರೇನ್ಹಸ್ ಮಾತನಾಡಿದರು.ಪದ್ಮನಾಭ ಸ್ವಾಗತಿಸಿದರು. ಸುಮಂಗಲಾ ವಂದಿಸಿದರು. ಜಲಜಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X