ಏಮ್ಸ್ ಕಾಲೇಜ್: ಸಾಂಪ್ರದಾಯಿಕ ದಿನಾಚರಣೆ, ವಸ್ತು ಪ್ರದರ್ಶನ

ಕಡಬ: ಏಮ್ಸ್ ಪ್ರಥಮ ದರ್ಜೆ ಕಾಲೇಜ್ ಕಡಬ ಇದರ ತುಳು, ಸಾಂಸ್ಕೃತಿಕ ಹಾಗೂ ಐತಿಹಾಸಿಕ ಸಂಘಗಳ ಆಶ್ರಯದಲ್ಲಿ ಸಾಂಪ್ರದಾಯಿಕ ದಿನಾಚರಣೆಗೆ ಹಾಗೂ ಪ್ರಾಚ್ಯ ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಯಿತು.
ಕುಟ್ರುಪ್ಪಾಡಿ ಗ್ರಾಪಂ ಅಧ್ಯಕ್ಷೆ ಜಾನಕಿ ಸುಂದರ ಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರಾಂಶುಪಾಲೆ ಸಮೀರಾ ಕೆ.ಎ. ವಿಷಯ ಮಂಡಿಸಿದರು.
ಏಮ್ಸ್ ಎಜುಕೇಷನ್, ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷೆ ಫೌಝಿಯಾ ಬಿ.ಎಸ್. ಅಧ್ಯಕ್ಷತೆ ವಹಿಸಿದ್ದರು.
ಉಪನ್ಯಾಸಕ ಕೃಷ್ಣ ಪ್ರಸಾದ್ ಪ್ರಸ್ತಾವಿಸಿದರು. ಉಪನ್ಯಾಸಕಿ ಉಜ್ವಲಾ ಸ್ವಾಗತಿಸಿ, ನಳಿನಾಕ್ಷಿ ವಂದಿಸಿದರು. ವಿದ್ಯಾರ್ಥಿನಿ ಸಾಜಿದಾ ಕಾರ್ಯಕ್ರಮ ನಿರ್ವಹಿಸಿದರು.
Next Story





