Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ ಉತ್ಸವಕ್ಕೆ ವರ್ಣರಂಜಿತ ಚಾಲನೆ

ಕರಾವಳಿ ಉತ್ಸವಕ್ಕೆ ವರ್ಣರಂಜಿತ ಚಾಲನೆ

ವಾರ್ತಾಭಾರತಿವಾರ್ತಾಭಾರತಿ23 Jan 2016 11:29 PM IST
share
ಕರಾವಳಿ ಉತ್ಸವಕ್ಕೆ ವರ್ಣರಂಜಿತ ಚಾಲನೆ

ಮಂಗಳೂರು : ಜ. 23: ದ.ಕ. ಜಿಲ್ಲಾ ಕರಾವಳಿ ಉತ್ಸವದ ಅಂಗವಾಗಿ ಇಂದು ಸಂಜೆ ಕದ್ರಿ ಉದ್ಯಾನವನದಿಂದ ಕರಾವಳಿ ಉತ್ಸವ ಮೈದಾನದವರೆಗೆ ವೈಭವಪೂರ್ಣ ಮೆರವಣಿಗೆ ನಡೆಯುವುದರೊಂದಿಗೆ ಕರಾವಳಿ ಉತ್ಸವಕ್ಕೆ ವರ್ಣರಂಜಿತ ಚಾಲನೆ ದೊರೆಯಿತು. ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಮಾರ್ಚ್ 7ರವರೆಗೆ ನಡೆಯುವ ಕರಾವಳಿ ಉತ್ಸವದ ವಸ್ತುಪ್ರದರ್ಶನವನ್ನು ಕರಾವಳಿ ಉತ್ಸವ ಮೈದಾನದಲ್ಲಿ ವಿದ್ಯುಕ್ತವಾಗಿ ಉದ್ಘಾಟಿಸಿದರು. ಮೆರವಣಿಗೆಯಲ್ಲಿ ಕರಾವಳಿಯ ವಿಶಿಷ್ಟ ಕಲಾ ಪ್ರಕಾರಗಳ ಟ್ಯಾಬ್ಲೊಗಳು, ಕೊಂಬು ಕಹಳೆ, ಚೆಂಡೆ, ಯಕ್ಷಗಾನ ಕಲಾಕೃತಿಯ ಮುಖವಾಡ-ಮಾದರಿಗಳು, ಕೋಲಾಟ, ಜಾನಪದ ಕುಣಿತ, ದಫ್, ಡೋಲು ಕುಣಿತ ಸಹಿತ ಕರಾವಳಿಯ ಸಂಸ್ಕೃತಿಯನ್ನು ಬಿಂಬಿಸುವ ವಿವಿಧ ಕಲಾಕೃತಿಗಳು, ತಂಡಗಳು ಮೆರವಣಿಗೆಯುದ್ದಕ್ಕೂ ಉತ್ಸವಕ್ಕೆ ಮೆರುಗು ನೀಡಿದವು.

ಬಳಿಕ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಕರಾವಳಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ನಿಟ್ಟೆ ವಿಶ್ವವಿದ್ಯಾನಿಲಯದ ಸಹಕುಲಾಧಿಪತಿ ಡಾ.ಎಂ.ಶಾಂತರಾಮ ಶೆಟ್ಟಿ ಅವರು, ಕರಾವಳಿ ಉತ್ಸವದ ಉದ್ಘಾಟನೆಗೆ ತನ್ನನ್ನು ಆಹ್ವಾನಿಸಿರುವುದಕ್ಕೆ ಸಂತೋಷ ತಂದಿದೆ ಎಂದರು. ಮಂಗಳೂರು ನಗರ ಸ್ಮಾರ್ಟ್ ಸಿಟಿಯಾಗುವ ಸಂಭವವಿದ್ದು, ಮುಂದಿನ ಕರಾವಳಿ ಉತ್ಸವದ ಆಚರಣೆಯ ಸಂದರ್ಭದಲ್ಲಿ ಸ್ಮಾರ್ಟ್‌ಸಿಟಿಯ ಸಂಭ್ರಮದೊಂದಿಗೆ, ಮಂಗಳೂರು ನಗರ ಇನ್ನಷ್ಟು ಅಭಿವೃದ್ಧಿ ಹೊಂದುವ ಮೂಲಕ ಕರಾವಳಿ ಉತ್ಸವವನ್ನು ಆಚರಿಸುವಂತಾಗಲಿ ಎಂದು ಹಾರೈಸಿದರು.ಸಚಿವ ರಮಾನಾಥ ರೈ ಮಾತನಾಡಿ, 45 ದಿನಗಳ ಕಾಲ ನಡೆಯುವ ಈ ಕರಾವಳಿ ಉತ್ಸವವು ಕರಾವಳಿಯ ಜನತೆಗೆ ಹಬ್ಬದ ವಾತಾವರಣವನ್ನು ಮೂಡಿಸಲಿ. ಜನರು ಸಂಭ್ರಮದೊಂದಿಗೆ ಭಾಗವಹಿಸುವಂತಾಗಲಿ ಎಂದು ಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಅಧ್ಯಕ್ಷ ಜೆ.ಆರ್.ಲೋಬೊ ವಹಿಸಿದ್ದರು. ವೇದಿಕೆಯಲ್ಲಿ ಮೇಯರ್ ಜೆಸಿಂತಾ ವಿಜಯ ಆಲ್ಫ್ರೆಡ್, ಉಪಮೇಯರ್ ಪುರುಷೋತ್ತಮ ಚಿತ್ರಾಪುರ, ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಮಂಡಳಿಯ ಅಧ್ಯಕ್ಷೆ ದಿವ್ಯಪ್ರಭಾ ಗೌಡ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್, ರಾಯ್ ಕ್ಯಾಸ್ಟಲಿನೊ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಡಾ.ಎಂ.ಶಾಂತರಾಮ ಶೆಟ್ಟಿ ಅವರಿಗೆ ಪೇಟ ತೊಡಿಸಿ, ಫಲಪುಷ್ಪ ನೀಡಿ ಸನ್ಮಾನಿಸಲಾಯಿತು. ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಡಾ.ಎಚ್.ಎನ್.ಗೋಪಾಲಕೃಷ್ಣ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X