ಯುವ ವಿಜ್ಞಾನಿ: ರಾಜ್ಯಮಟ್ಟಕ್ಕೆ ಆಯ್ಕೆ

ಉಡುಪಿ, ಜ.23: ಸಂತ ಸಿಸಿಲೀಸ್ ಪ್ರೌಢಶಾಲೆಯ 10ನೆ ತರಗತಿಯ ವಿದ್ಯಾರ್ಥಿನಿ ಶಾಲಿಕಾ ಎಕ್ಕಾರು, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನಡೆಸಿದ ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಪ್ರಶಸ್ತಿ ಪ್ರದಾನ ಯೋಜನೆಯಡಿ ನಡೆದ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಲೇಖಕ, ವಿದ್ವಾಂಸ ಡಾ.ಗಣನಾಥ ಎಕ್ಕಾರು ಹಾಗೂ ತೆಂಕನಿಡಿಯೂರು ಸರಕಾರಿ ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನಾರ ಪುತ್ರಿ.
Next Story





