ಫೆ.24ರಿಂದ ಪ್ರಥಮ ಪಿಯುಸಿ ಪರೀಕ್ಷೆ

ಬೆಂಗಳೂರು, ಜ.23: 2015-16ನೆ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಫೆ.24ರಿಂದ ಮಾ.5ರವರೆಗೆ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಈ ಹಿಂದೆ ಫೆ.17ರಿಂದ ಫೆ.29ರವರೆಗೆ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ವಿಧಾನಸಭೆಯ ಮೂರು ಕ್ಷೇತ್ರಗಳ ಉಪ ಚುನಾವಣೆ ಹಾಗೂ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಪರೀಕ್ಷೆ ವೇಳಾಪಟ್ಟಿಯನ್ನು ಪುನರ್ ಪರಿಷ್ಕರಿಸಿ ಪ್ರಕಟಿಸಲಾಗಿದೆ.
ವೇಳಾಪಟ್ಟಿ: ಫೆ.24ರಂದು ಹಿಂದಿ (ಬೆಳಗ್ಗೆ 9ರಿಂದ ಮಧ್ಯಾಹ್ನ 12.15ರವರೆಗೆ), ಉರ್ದು ಹಾಗೂ ಸಂಸ್ಕೃತ (ಮಧ್ಯಾಹ್ನ 2ರಿಂದ ಸಂಜೆ 5:15ರವರೆಗೆ), ಫೆ.25ರಂದು ಕನ್ನಡ, ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೆಬಿಕ್, ಫ್ರೆಂಚ್(ಬೆಳಗ್ಗೆ 9ರಿಂದ ಮಧ್ಯಾಹ್ನ 12:15ರವರೆಗೆ).
ಫೆ.26ರಂದು ಅರ್ಥಶಾಸ್ತ್ರ, ಭೂಗರ್ಭಶಾಸ್ತ್ರ (ಬೆಳಗ್ಗೆ 9ರಿಂದ ಮಧ್ಯಾಹ್ನ 12.15ರವರೆಗೆ), ಕರ್ನಾಟಿಕ್ ಸಂಗೀತ, ಹಿಂದಸ್ತಾನಿ ಸಂಗೀತ, ಮನಃಶಾಸ್ತ್ರ (ಮಧ್ಯಾಹ್ನ 2 ರಿಂದ ಸಂಜೆ 5:15ರವರೆಗೆ), ಫೆ.27ರಂದು ಇಂಗ್ಲೀಷ್(ಬೆಳಗ್ಗೆ 9 ರಿಂದ ಮಧ್ಯಾಹ್ನ 12:15ರವರೆಗೆ), ಫೆ.29ರಂದು ಭೂಗೋಳಶಾಸ್ತ್ರ, ಗಣಿತ, ಮೂಲ ಗಣಿತ(ಬೆಳಗ್ಗೆ 9 ರಿಂದ ಮಧ್ಯಾಹ್ನ 12:15ರವರೆಗೆ), ತರ್ಕಶಾಸ್ತ್ರ, ಗೃಹ ವಿಜ್ಞಾನ (ಮಧ್ಯಾಹ್ನ 2ರಿಂದ ಸಂಜೆ 5:15ರವರೆಗೆ).
ಮಾ.1ರಂದು ವ್ಯವಹಾರ ಅಧ್ಯಯನ, ರಸಾಯನಶಾಸ್ತ್ರ, ಶಿಕ್ಷಣ(ಬೆಳಗ್ಗೆ 9 ರಿಂದ ಮಧ್ಯಾಹ್ನ 12:15ರವರೆಗೆ), ಮಾ.2ರಂದು ಇತಿಹಾಸ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ(ಬೆಳಗ್ಗೆ 9 ರಿಂದ ಮಧ್ಯಾಹ್ನ 12.15ರವರೆಗೆ), ಮಾ.3ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ(ಬೆಳಗ್ಗೆ 9 ರಿಂದ ಮಧ್ಯಾಹ್ನ 12:15ರವರೆಗೆ).
ಮಾ.4ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೌತಶಾಸ್ತ್ರ(ಬೆಳಗ್ಗೆ 9 ರಿಂದ ಮಧ್ಯಾಹ್ನ 12:15ರವರೆಗೆ), ಮಾ.5ರಂದು ಸಮಾಜಶಾಸ್ತ್ರ, ಜೀವಶಾಸ್ತ್ರ(ಬೆಳಗ್ಗೆ 9 ರಿಂದ ಮಧ್ಯಾಹ್ನ 12:15ರವರೆಗೆ) ಪರೀಕ್ಷೆಗಳು ನಡೆಯಲಿವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಡಿ.ಎಸ್.ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







