Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಿ.ಪಂ. ತಾ.ಪಂ. ಚುನಾವಣೆ: ಪ್ರತೀ...

ಜಿ.ಪಂ. ತಾ.ಪಂ. ಚುನಾವಣೆ: ಪ್ರತೀ ತಾಲೂಕಿಗೆ 3 ತಂಡ: ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ24 Jan 2016 1:07 PM IST
share
ಜಿ.ಪಂ. ತಾ.ಪಂ. ಚುನಾವಣೆ: ಪ್ರತೀ ತಾಲೂಕಿಗೆ 3 ತಂಡ: ಜಿಲ್ಲಾಧಿಕಾರಿ

ಮ0ಗಳೂರು: ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಗಾ ವಹಿಸಲು ಜಿಲ್ಲೆಯ ಪ್ರತೀ ತಾಲೂಕಿಗೆ 3 ಸಂಚಾರಿ ತಂಡಗಳನ್ನು (ಫ್ಲೈಯಿಂಗ್ ಸ್ಕ್ವಾಡ್) ರಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ತಿಳಿಸಿದ್ದಾರೆ.
 

ಅವರು ರವಿವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಈ ನಿಗಾ ತಂಡದಲ್ಲಿ ಅಧಿಕಾರಿ ಹಾಗೂ ಪೊಲೀಸ್ ಸಿಬ್ಬಂದಿಗಳು ಇರಲಿದ್ದು, ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತೀವ್ರ ನಿಗಾ ಇಡಲಿದೆ ಎಂದು ಅವರು ಹೇಳಿದರು.


 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 36 ಜಿಲ್ಲಾ ಪಂಚಾಯತ್ ಹಾಗೂ 136 ತಾಲೂಕು ಪಂಚಾಯತ್ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಪ್ರತೀ ಮತಗಟ್ಟೆಗೆ 5 ಸಿಬ್ಬಂದಿ/ಅಧಿಕಾರಿಗಳನ್ನು ನಿಯೋಜಿಸಲಾಗುವುದು. ತಹಶೀಲ್ದಾರ್‍ಗಳು ಪ್ರತೀ ಮತಗಟ್ಟೆಯನ್ನು ಕೂಡಲೇ ವೈಯಕ್ತಿಕವಾಗಿ ಪರಿಶೀಲಿಸಬೇಕು. ಮಸ್ಟರಿಂಗ್, ಡಿಮಸ್ಟರಿಂಗ್ ಕೇಂದ್ರ, ಸ್ಟ್ರಾಂಗ್ ರೂಂ ಹಾಗೂ ಮತ ಎಣಿಕೆ ಕೇಂದ್ರಗಳನ್ನು ಕೂಡಲೇ ಗುರುತಿಸಿ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.


 ಚುನಾವಣೆ ಸಂದರ್ಭದಲ್ಲಿ ಖಾಸಗಿ ಕಾರ್ಯಕ್ರಮ ನಡೆಸಲು ಅನುಮತಿ ಅಗತ್ಯವಿಲ್ಲ. ಆದರೆ, ರಾಜಕೀಯ ವ್ಯಕ್ತಿಗಳು ಪಾಲ್ಗೊಳ್ಳುವ, ರಾಜಕೀಯ ಹಿನ್ನೆಲೆಯುಳ್ಳ ಸಂಘಟನೆಗಳ ಕಾರ್ಯಕ್ರಮಗಳಿಗೆ ಅನುಮತಿ ಅಗತ್ಯ. ಆಯಾ ತಾಲೂಕಿನ ಜಿ.ಪಂ. ಕ್ಷೇತ್ರಗಳಿಗೆ ಸಂಬಂಧಿಸಿದ ಸಹಾಯಕ ಚುನಾವಣಾಧಿಕಾರಿಗಳು ಅನುಮತಿ ನೀಡಲು ಸಕ್ಷಮ ಪ್ರಾಧಿಕಾರಿಯಾಗಿರುತ್ತಾರೆ. ಈ ನಿಟ್ಟಿನಲ್ಲಿ ಪ್ರತೀ ತಾಲೂಕಿನಲ್ಲಿ ಏಕಗವಾಕ್ಷಿ ಕೇಂದ್ರ ತೆರೆಯುವಂತೆ ಎ.ಬಿ. ಇಬ್ರಾಹಿಂ ತಿಳಿಸಿದರು. ಕಾರ್ಯಕ್ರಮ ನಡೆಸುವ ಸಂಘಟಕರು ಕನಿಷ್ಠ 3 ದಿವಸ ಮೊದಲು ಅನುಮತಿಗೆ ಅರ್ಜಿ ಸಲ್ಲಿಸಬೇಕು.

ತಾಲೂಕು ಚುನಾವಣಾಧಿಕಾರಿಗಳು ಅನಗತ್ಯವಾಗಿ ಅನುಮತಿ ಅರ್ಜಿಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸಬಾರದು. ಬ್ಯಾನರ್, ಕಟೌಟ್ ಅಳವಡಿಕೆಗೆ ಆಯಾ ಗ್ರಾಮ ಪಂಚಾಯತ್‍ಗಳಿಂದ ಅನುಮತಿ ಪಡೆದಿರಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
 ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನು ಪೊಲೀಸ್ ಇಲಾಖೆಯು ಜ.30ರೊಳಗೆ ಗುರುತಿಸಬೇಕು. ಧಾರ್ಮಿಕ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರಕ್ಕೆ ಅವಕಾಶವಿಲ್ಲ. ಯಾವುದೇ ಕಾರಣಕ್ಕೂ ಮರುಮತದನವಾಗದಂತೆ ಮುಕ್ತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಅಧಿಕಾರಿಗಳು ಎಲ್ಲ ರೀತಿಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.


 ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಐ. ಶ್ರೀವಿದ್ಯಾ,  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶರಣಪ್ಪ,  ತಾಲೂಕು ಚುನಾವಣಾಧಿಕಾರಿಗಳು, ತಹಶೀಲ್ದಾರ್‍ಗಳು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X