ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಮಿತ್‌ಶಾ ಮರು ಆಯ್ಕೆ

ಹೊಸದಿಲ್ಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಮಿತ್ ಶಾ ಮರು ಆಯ್ಕೆಯಾಗಿದ್ದಾರೆ.
ಮೂರು ವರ್ಷಗಳಿಗೊಮ್ಮೆ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತಿದ್ದು, ಎರಡನೆ ಬಾರಿಯೂ ಅಮಿತ್ ಶಾಗೆ ಅಧ್ಯಕ್ಷ ಪಟ್ಟ ಒಲಿದಿದೆ.
ಸರ್ವಾನುಮತದಿಂದ ಶಾ ಅವರನ್ನು ಆಯ್ಕೆ ಮಾಡಲಾಗಿದ್ದು, ಶಾ 2019ರವರೆಗೆ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.
ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ಜೆ.ಪಿ.ನಡ್ಡಾ, ರಾಜ್‌ನಾಥ್ ಸಿಂಗ್, ಆನಂದಿ ಬೆನ್, ವಸುಂಧರಾ ರಾಜೇ ಮತ್ತಿತರರು ಉಪಸ್ಥಿತರಿದ್ದರು.
Next Story





