Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೇರ ತೆರಿಗೆ ವ್ಯಾಜ್ಯಗಳ ತ್ವರಿತ ಇತ್ಯರ್ಥ...

ನೇರ ತೆರಿಗೆ ವ್ಯಾಜ್ಯಗಳ ತ್ವರಿತ ಇತ್ಯರ್ಥ ವ್ಯವಸ್ಥೆಗೆ ಪ್ರಣವ್ ಕರೆ

ವಾರ್ತಾಭಾರತಿವಾರ್ತಾಭಾರತಿ24 Jan 2016 11:37 PM IST
share

ಹೊಸದಿಲ್ಲಿ, ಜ.24: ಉದ್ಯಮಸ್ನೇಹಿ ವಾತಾವರಣ ಕುರಿತ ಜಾಗತಿಕ ರ್ಯಾಂಕಿಂಗ್‌ನಲ್ಲಿ ಭಾರತದ ಸ್ಥಾನಮಾನ ಸುಧಾರಣೆಯಾಗಬೇಕಿದೆಯೆಂದು ರಾಷ್ಟ್ರಪತಿ ಪ್ರಣವ್ ಮುಖರ್ಜಿ ರವಿವಾರ ಆಗ್ರಹಿಸಿದ್ದಾರೆ. ಹೆಚ್ಚುತ್ತಿರುವ ತೆರಿಗೆ ವಿವಾದಗಳ ಇತ್ಯರ್ಥಕ್ಕಾಗಿ ವಿನೂತನವಾದ ತೆರಿಗೆ ವ್ಯಾಜ್ಯ ನಿರ್ವಹಣಾ ವ್ಯವಸ್ಥೆಯನ್ನು ಜಾರಿಗೊಳಿಸುವ ಅಗತ್ಯವಿದೆಯೆಂದು ಅವರು ಪ್ರತಿಪಾದಿಸಿದ್ದಾರೆ.
 

ಆದಾಯತೆರಿಗೆ ಮೇಲ್ಮನವಿ ಟ್ರಿಬ್ಯೂನಲ್‌ನ 75ನೆ ವರ್ಷಾಚರಣೆಯ ಅಂಗವಾಗಿ ಹೊಸದಿಲ್ಲಿಯಲ್ಲಿ ಆಯೋಜಿಸಲಾಗಿರುವ ಎರಡು ದಿನಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಕಳೆದ ಕೆಲವು ವರ್ಷಗಳಿಂದ ನೇರ ತೆರಿಗೆ ವ್ಯಾಜ್ಯ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗಿದೆಯೆಂದು ಅಭಿಪ್ರಾಯಿಸಿದ್ದಾರೆ. ಭಾರತೀಯ ಆರ್ಥಿಕತೆಯ ಅಭಿವೃದ್ಧಿಯ ಜೊತೆಜೊತೆಗೆ ನೇರ ತೆರಿಗೆಗಳು ಹಾಗೂ ತೆರಿಗೆ ಪಾವತಿದಾರರ ಸಂಖ್ಯೆಯಲ್ಲಿ ಹಲವು ಪಟ್ಟು ಹೆಚ್ಚಳವಾಗಿದೆ. ಇದು ತೆರಿಗೆ ವ್ಯಾಜ್ಯ ಇತ್ಯರ್ಥ ವ್ಯವಸ್ಥೆಯ ಮೇಲೆ ಅಪಾರ ಒತ್ತಡವನ್ನುಂಟು ಮಾಡಿದೆಯೆಂದವರು ಹೇಳಿದ್ದಾರೆ.
 ಹೂಡಿಕೆಗಳನ್ನು ಉತ್ತೇಜಿಸಲು ಹಾಗೂ ಉದ್ಯಮವನ್ನು ಆಕರ್ಷಿಸಲು, ತೆರಿಗೆ ವ್ಯಾಜ್ಯಗಳನ್ನು ಇತ್ಯರ್ಥ ವ್ಯವಸ್ಥೆಯು ಪೂರಕವಾಗಿದೆಯೆಂದವರು ಹೇಳಿದ್ದಾರೆ. ವಿಶ್ವಬ್ಯಾಂಕ್‌ನ ಗ್ರೂಪ್ 2016ರ ವರದಿ ಪ್ರಕಾರ, ಉದ್ಯಮಸ್ನೇಹಿ ವಾತಾವರಣವಿರುವ ದೇಶಗಳ ಪಟ್ಟಿಯಲ್ಲಿ ಭಾರತವು 130ನೆ ಸ್ಥಾನದಲ್ಲಿದೆ.
‘‘ತ್ವರಿತವಾಗಿ ನ್ಯಾಯದಾನ ವ್ಯವಸ್ಥೆ, ಸ್ಥಿರವಾದ ಆದೇಶಗಳು, ನ್ಯಾಯಪರ ನಿಲುವು ಹಾಗೂ ಉದ್ಯಮ ಕೇಂದ್ರಿತ ವ್ಯಾಜ್ಯ ನಿರ್ವಹಣಾ ವ್ಯವಸ್ಥೆಯು ಭಾರತದ ಬೆಳವಣಿಗೆಗೆ ಕೊಡುಗೆಯನ್ನು ನೀಡಬಲ್ಲುದು ಎಂದು ಅಧ್ಯಕ್ಷರು ತಿಳಿಸಿದ್ದಾರೆ.
  ಕಳೆದ ಕೆಲವು ವರ್ಷಗಳಲ್ಲಿ ಭಾರತದ ಆರ್ಥಿಕತೆಯು ವ್ಯಾಪಕವಾದ ಬದಲಾವಣೆಯನ್ನು ಕಂಡಿದೆ. 2015-16ರ ಸಾಲಿನಲ್ಲಿ, ನೇರ ತೆರಿಗೆಯ ಮೂಲಕ 7.98 ಲಕ್ಷ ಕೋಟಿ ರೂ. ಆದಾಯ ದೊರೆಯುವ ನಿರೀಕ್ಷೆಯಿದೆಯೆಂದು ರಾಷ್ಟ್ರಪತಿ ತಿಳಿಸಿದರು. ಭಾರತದ ಆರ್ಥಿಕತೆಯಲ್ಲಿ ನೇರ ತೆರಿಗೆಯು ಮಹತ್ವದ ಪಾತ್ರ ವಹಿಸುತ್ತಿದೆಯೆಂಬುದನ್ನು ಈ ಅಂಕಿಅಂಶಗಳು ಸೂಚಿಸುತ್ತವೆಯೆಂದವರು ಹೇಳಿದರು.
ಭಾರತದ ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಠಾಕೂರ್ ಹಾಗೂ ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡ ಮತ್ತಿತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X