Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್‌ಐಎ ಬಂಧನ: ಮುಂಬ್ರಾ ನಾಗರಿಕರಲ್ಲಿ...

ಎನ್‌ಐಎ ಬಂಧನ: ಮುಂಬ್ರಾ ನಾಗರಿಕರಲ್ಲಿ ಗೊಂದಲ

ವಾರ್ತಾಭಾರತಿವಾರ್ತಾಭಾರತಿ24 Jan 2016 11:40 PM IST
share

ಮುಂಬ್ರಾ,ಜ.24: ಐಸಿಸ್ ಜೊತೆ ನಂಟು ಹೊಂದಿದ ಆರೋಪದಲ್ಲಿ ಕಳೆದ ವಾರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿರುವ ಮುದಬ್ಬೀರ್ ಶೇಖ್‌ನ ಬಂಧನವು ಮುಂಬೈಯ ಉಪನಗರವಾದ ಮುಂಬ್ರಾ ಪಟ್ಟಣದ ನಾಗರಿಕರನ್ನು ಅಚ್ಚರಿಯಲ್ಲಿ ಕೆಡವಿದೆ. ಭಾರತದಲ್ಲಿ ಮುದಬ್ಬೀರ್ ಜಾಗತಿಕ ಭಯೋತ್ಪಾದಕ ಸಂಘಟನೆ ಐಸಿಸ್‌ಗಾಗಿ ಯುವಕರ ನೇಮಕಾತಿಯ ಹೊಣೆ ವಹಿಸಿದ್ದನೆಂದು ಆರೋಪಿಸಲಾಗಿದೆ. ಕಳೆದ ಗುರುವಾರ ರಾತ್ರಿ ಎನ್‌ಐಎ ಹಾಗೂ ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳವು ಜಂಟಿ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿತ್ತು. ಐಸಿಸ್ ಜೊತೆ ನಿಕಟ ಸಂಪರ್ಕ ಹೊಂದಿದ ಆರೋಪದಲ್ಲಿ ಶೇಖ್ ಸೇರಿದಂತೆ ದೇಶಾದ್ಯಂತದ 14 ಮಂದಿ ಯುವಕರನ್ನು ಕಳೆದ ವಾರ ಬಂಧಿಸಲಾಗಿತ್ತು.

ಆದರೆ ಮುದಬ್ಬೀರ್ ಶೇಖ್ ತನ್ನ ಪತ್ನಿ ಹಾಗೂ ಇಬ್ಬರು ಪುತ್ರಿಯರೊಂದಿಗೆ ವಾಸವಿದ್ದ ಮುಂಬ್ರಾದ ಬಹುತೇಕ ನಿವಾಸಿಗಳಿಗೆ ಮುದಬ್ಬೀರ್ ಶೇಖ್ ಯಾವ ಕಾರಣಕ್ಕಾಗಿ ಬಂಧಿತನಾದನೆಂಬ ಬಗ್ಗೆ ಅರಿವಿರಲಿಲ್ಲ. ಮುಂಬ್ರಾದಲ್ಲಿ ಐಸಿಸ್ ಜೊತೆ ಯಾರಾದರೂ ಶಾಮೀಲಾಗಿದ್ದಾರೆಂಬುದು ನಾವು ಈತನಕ ಕೇಳಿರಲಿಲ್ಲವೆಂದು 24 ವರ್ಷದ ಸ್ಥಳೀಯ ನಿವಾಸಿ ಅಝರ್ ಮಲಿಮ್ ಹೇಳುತ್ತಾರೆ.
ಮುಂಬ್ರಾದ ಶೇ.90ರಷ್ಟು ನಿವಾಸಿಗಳು ಮುಸ್ಲಿಮರೆಂಬ ಕಾರಣಕ್ಕೆ ಇಲ್ಲಿಯ ಜನರಿಗೆ ಭಯೋತ್ಪಾದಕರ ಜೊತೆ ನಂಟಿದೆಯೆಂದು ಭಾವಿಸಕೂಡದು ಎನ್ನುತ್ತಾರವರು.
1992ರಲ್ಲಿ ಮುಂಬೈಯಲ್ಲಿ ಕೋಮುಗಲಭೆ ಭುಗಿಲೆದ್ದ ಬಳಿಕ ನಗರದ ವಿವಿಧೆಡೆಯಿಂದ ಮುಸ್ಲಿಮರು ಮುಂಬ್ರಾಕ್ಕೆ ವಲಸೆ ಬರತೊಡಗಿದರು. ಹೀಗಾಗಿ ಇಲ್ಲಿ ಅವರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡುಬಂದಿತು. ಅನೇಕ ಪ್ರಕರಣಗಳಲ್ಲಿ ಇಲ್ಲಿನ ಮುಸ್ಲಿಮ್ ಯುವಕರನ್ನು ಪೊಲೀಸರು ಬಂಧಿಸಿ ಜೈಲಿಗೆ ತಳ್ಳುತ್ತಿದ್ದರು. ಕೆಲವು ವರ್ಷಗಳ ಬಳಿಕ ಅವರ ಮೇಲಿನ ಆರೋಪಗಳು ಸುಳ್ಳೆಂದು ಸಾಬೀತಾಗಿ ಅವರು ಜೈಲಿನಿಂದ ಹೊರಬರುತ್ತಿದ್ದರು ಎಂದು ಮುಂಬ್ರಾದ ಮೊಬೈಲ್ ಅಂಗಡಿ ಮಾಲಕ ಸರ್ವಾರ್ ಹುಸೈನ್ ಹೇಳುತ್ತಾರೆ.
ಕೆಲವು ವರ್ಷಗಳ ಹಿಂದೆಯಷ್ಟೇ ಮುದಬ್ಬೀರ್ ಮುಂಬ್ರಾಕ್ಕೆ ಬಂದು ನೆಲೆಸಿದ್ದ. ಆತನ ಪ್ರಾಮಾಣಿಕನೆಬುಂದನ್ನು ತಾನು ಕೇಳಿದ್ದೇನೆ.ಮುಸ್ಲಿಮನೊಬ್ಬನ ವಿರುದ್ಧ ಭಯೋತ್ಪಾದನೆಯ ಸುಳ್ಳು ಆರೋಪ ಹೊರಿಸಲ್ಪಟ್ಟ ಇನ್ನೊಂದು ಪ್ರಕರಣ ಇದಾಗಿರಲೂಬಹುದೆಂದು ಆತ ಸಂದೇಹ ವ್ಯಕ್ತಪಡಿಸುತ್ತಾರೆ. ಮುದಬ್ಬೀರ್ ಓರ್ವ ಸರಳ ವ್ಯಕ್ತಿಯಾಗಿದ್ದ ಆತ ಭಯೋತ್ಪಾದಕ ಸಂಘಟನೆಯ ಜೊತೆ ನಂಟು ಹೊಂದಿದ್ದನೆಂಬುದನ್ನು ನಂಬಲು ಸಾಧ್ಯವಿಲ್ಲವೆಂದು ಆತನ ನೆರೆಹೊರೆಯಾತ ಫಿರೋಜ್ ಸೊರಾತಿಯಾ ಹೇಳುತ್ತಾರೆ.
      ಆದರೆ ಮುಂಬ್ರಾದ ಇನ್ನೋರ್ವ ನಿವಾಸಿ ಅಬ್ಬಾಸ್ ಸೈಯದ್ ವಿಭಿನ್ನ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ‘ಬೆಂಕಿ ಇರದೆ ಹೊಗೆಯೇಳಲು ಸಾಧ್ಯವಿಲ’್ಲ. ಮುಂಬ್ರಾದಲ್ಲಿ ಎಲ್ಲ ವ್ಯಕ್ತಿಗಳನ್ನು ಬಿಟ್ಟು, ಪೊಲೀಸರು ಓರ್ವನ ಬೆನ್ನ ಹಿಂದೆ ಬಿದ್ದಿರುವುದಕ್ಕೆ ಬಲವಾದ ಕಾರಣವಿರಲೇಬೇಕು. ಇಂದು ಐಸಿಸ್ ನಮ್ಮ ಸಮುದಾಯಕ್ಕೆ ದೊಡ್ಡ ಬೆದರಿಕೆಯಾಗಿದೆ. ಆ ಗುಂಪಿನ ಸಿದ್ಧಾಂತದಿಂದ ನಮ್ಮ ಕೆಲವು ಯುವಜನರು ದಾರಿತಪ್ಪುವ ಸಾಧ್ಯತೆಯಿದೆಯೆಂದು ಆವರು ಹೇಳುತ್ತಾರೆ. ಇಂದು ಮುಸ್ಲಿಮ್ ಯುವಕರು ತಮ್ಮ ಬಿಡುವಿನ ಸಮಯವನ್ನು ಆನ್‌ಲೈನ್‌ನಲ್ಲಿ ಕಳೆಯುತ್ತಿದ್ದಾರೆ. ಅವರು ಸ್ಥಳೀಯ ಮಸೀದಿಗಳಲ್ಲಿ ಧರ್ಮಗುರುಗಳ ಬೋಧನೆಗಳ ಬಗ್ಗೆ ಹೆಚ್ಚು ಗಮನ ನೀಡುತ್ತಿಲ್ಲವೆನ್ನುತ್ತಾರೆ. ಆನ್‌ಲೈನ್‌ನಲ್ಲಿ ಪ್ರಸಾರವಾಗುವ ವೀಡಿಯೊಗಳು, ಇಸ್ಲಾಮ್ ಬಗ್ಗೆ ತಪ್ಪು ಮಾಹಿತಿ ನೀಡುತ್ತವೆಯೆಂದು ಅವರು ದೂರುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X