Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಗಳಲ್ಲಿ...

ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಗಳಲ್ಲಿ ಉಚಿತ ವೈ-ಫೈ ಸೌಲಭ್ಯ

ವಾರ್ತಾಭಾರತಿವಾರ್ತಾಭಾರತಿ25 Jan 2016 11:34 PM IST
share

ಬೆಂಗಳೂರು, ಜ. 25: ಕೆಎಸ್ಸಾರ್ಟಿಸಿ, ಡಿವಿಓಐಎಸ್ ಕಮ್ಯೂನಿಕೇಷನ್ಸ್ ಪ್ರೈವೇಟ್ ಲಿ. ಸಹಯೋಗದಲ್ಲಿ ನಿಗಮದ ಆಯ್ದ ನಿಲ್ದಾಣಗಳಲ್ಲಿ ಉಚಿತ ವೈ-ಫೈ ಇಂಟರ್ನೆಟ್ ಸೇವೆಯನ್ನು ಪ್ರಾಯೋಗಿಕವಾಗಿ ಆರಂಭಿಸಲಾಗಿದೆ.
ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರ ಬಸ್ ನಿಲ್ದಾಣ ಹಾಗೂ ಹಾಸನ, ಮಂಡ್ಯ, ಮೈಸೂರು, ಮಡಿಕೇರಿ, ಧರ್ಮಸ್ಥಳ, ಮಂಗಳೂರು, ಕುಂದಾಪುರ, ಶಿವಮೊಗ್ಗ, ಹರಿಹರ, ದಾವಣಗೆರೆ, ಚಿಕ್ಕಮಗಳೂರು ಮತ್ತು ತುಮಕೂರು ನಗರಗಳ ಬಸ್ ನಿಲ್ದಾಣಗಳಲ್ಲಿ ಉಚಿತ ವೈ-ಫೈ ಇಂಟರ್ನೆಟ್ ಸೇವೆಯನ್ನು ಒದಗಿಸಲಾಗಿದೆ.
ಸಾರ್ವಜನಿಕ ಪ್ರಯಾಣಿಕರು ಸದರಿ ವೈ-ಫೈ ಸೌಲಭ್ಯವನ್ನು ಉಚಿತವಾಗಿ ಪಡೆಯಬಹುದು. ಈ ಸೇವೆಯನ್ನು ಸದ್ಯದಲ್ಲಿಯೇ ಕೋಲಾರ ಮತ್ತು ಚಿತ್ರದುರ್ಗ ನಗರ ಬಸ್ ನಿಲ್ದಾಣಗಳಲ್ಲಿ ಅಳವಡಿಸಲು ಉದ್ದೇಶಿಸಲಾಗಿದೆ. ಭಾರತ ದೇಶದಲ್ಲಿಯೇ ಪ್ರಥಮವಾಗಿ ನಿಗಮವು ಮೇಲ್ಕಂಡ ಯೋಜನೆಯನ್ನು ಜಾರಿಗೆ ತಂದಿದ್ದು, ಸುಮಾರು 1ಲಕ್ಷ ಪ್ರಯಾಣಿಕರು ಈ ಸೌಕರ್ಯವನ್ನು ಪಡೆಯಬಹುದಾಗಿದೆ.
ವೈ-ಫೈ ಬಳಸಲು ಕ್ರಮ: ಮೊಬೈಲ್, ಲ್ಯಾಪ್‌ಟಾಪ್, ಟ್ಯಾಬ್ಲೆಟ್‌ನಲ್ಲಿ ಲಭ್ಯವಿರುವ ವೈ-ಫೈನಲ್ಲಿ ಐ-ಒಎನ್ ವೈ-ಫೈಯನ್ನು ಆಯ್ಕೆ ಮಾಡಿ, ಐ-ಒಎನ್ ನೆಟ್‌ವರ್ಕ್ ಅಥವಾ ಗೂಗಲ್ ಪ್ಲೆ ಸ್ಟೋರ್‌ನಿಂದ ಉಚಿತ ಒಎನ್ ವೈ-ಫೈ ಆ್ಯಪ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು.
ಐ-ಫೋನ್ ಬಳಕೆದಾರರಿಗೆ, ಲಾಗಿನ್ ಪುಟ ಬ್ರೌಸರ್ ಮೂಲಕ ಕಾಣಿಸಿಕೊಳ್ಳುತ್ತದೆ ಅಥವಾ ಅಪ್ಲಿಕೇಷನ್‌ನ್ನು ಐಸ್ಟೋರ್‌ನಿಂದಲೂ ಮಾಡಬಹುದು, ಹತ್ತು(10) ಅಂಕಿಯ ಮೊಬೈಲ್ ಸಂಖ್ಯೆ ನಮೂದಿಸಿ ನಂತರ, ಎಸ್‌ಎಂಎಸ್ ಮೂಲಕ ಪಾಸ್‌ವರ್ಡ್ ಸ್ವೀಕರಿಸುತ್ತೀರಿ, ತದನಂತರ ಸಬ್‌ಮಿಟ್ ಬಟನ್ ಒತ್ತಿರಿ, ತಕ್ಷಣ ಇಂಟರ್ನೆಟ್ ಸಂಪರ್ಕ ಮಾಡಬಹುದು..!
ಬಳಕೆದಾರರು ಯಾವುದೇ ಸಹಾಯಕ್ಕಾಗಿ ದೂ.ಸಂಖ್ಯೆ 080-4511 4512/ 4511 4513ಗೆ ಕರೆ ಮಾಡಬಹುದು. ‘ಡಿಜಿಟಲ್ ಇಂಡಿಯಾ’ದೆಡೆಗೆ ಸಾರಿಗೆ ನಿಗಮದ ವಿಶೇಷ ಕೊಡುಗೆ ಇದಾಗಿದ್ದು, ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೆಎಸ್ಸಾರ್ಟಿಸಿ ಪ್ರಕಟನೆಯಲ್ಲಿ ಕೋರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X