ರಾಜ್ಯ ಅಲ್ಪಸಂಖ್ಯಾತರ ಆಯೋಗಕ್ಕೆ ಹೆಚ್ಚಿನ ಅಧಿಕಾರ
ಬೆಂಗಳೂರು, ಜ. 25: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗಕ್ಕೆ ನ್ಯಾಯಾಂಗ ಅಧಿಕಾರ ನೀಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ ಎಂದು ಗೊತ್ತಾಗಿದೆ.
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಧಿನಿಯಮ 1994ಕ್ಕೆ ತಿದ್ದುಪಡಿ ತರುವ ಮೂಲಕ ‘ಪಾರ್ಸಿ’ ಸಮುದಾಯಕ್ಕೂ ಅಲ್ಪಸಂಖ್ಯಾತರಿಗೆ ನೀಡುವ ಸೌಲಭ್ಯಗಳನ್ನು ಪಾರ್ಸಿ ಸಮುದಾಯದವರಿಗೂ ನೀಡಲು ರಾಜ್ಯ ಸರಕಾರ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ರಾಜ್ಯ ಹಿಂ.ವರ್ಗಗಳ ಆಯೋಗ, ಮಹಿಳಾ ಆಯೋಗ, ಎಸ್ಸಿ-ಎಸ್ಟಿ ಆಯೋಗಕ್ಕೆ ನ್ಯಾಯಾಂಗ ಅಧಿಕಾರ ನೀಡಿರುವ ಮಾದರಿಯಲ್ಲೇ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗಕ್ಕೆ ಹೆಚ್ಚಿನ ಅಧಿಕಾರ ನೀಡಬೇಕೆಂದು ಬೇಡಿಕೆಯನ್ನು ರಾಜ್ಯ ಸರಕಾರ ಪುರಸ್ಕರಿಸಿ ಮೇಲ್ಕಂಡ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ.
Next Story





