ಯುಜಿಡಿ ಕಾಮಗಾರಿ ಅವ್ಯವಸ್ಥೆ ಖಂಡಿಸಿ ವಿನೂತನ ಪ್ರತಿಭಟನೆ
ಚಾಮರಾಜನಗರ.ಜ.25: ನಗರದ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಯುಜಿಡಿ ಅವ್ಯವಸ್ಥೆ ವಿರುದ್ಧ ಸುವರ್ಣ ಕನ್ನಡ ರಕ್ಷಣಾ ವೇದಿಕೆ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಕೇಕ್ ಕತ್ತರಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಆಲೂರು ಮಲ್ಲು, ಪಟ್ಟಣದಲ್ಲಿ ಯುಜಿಡಿ ಕಾಮಗಾರಿಯು ಪ್ರಾರಂಭವಾಗಿ 4ವರ್ಷ ಕಳೆದರೂ ಪೂರ್ಣಗೊಂಡಿರುವುದಿಲ್ಲ.ಇದರಿಂದ ಸಂಚಾರ ವ್ಯವಸ್ಥೆ ದುಸ್ತರವಾಗಿದ್ದು, ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳು ಹೆಚ್ಚಾಗಿದೆ. ಜನಸಾಮಾನ್ಯರು ದಿನನಿತ್ಯ ಓಡಾಡದಂತಹ ಪರಿಸ್ಥ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಹಲವಾರು ಬಾರಿ ಪ್ರಗತಿ ಪರ ಸಂಘಟನೆಗಳು ಬಂದ್ ಹಾಗೂ ಪ್ರತಿಭಟನೆ ಮಾಡಿದ್ದರೂ ಸಹ ಪ್ರಯೋಜನವಾಗಿಲ್ಲ.ಆದ್ದರಿಂದ ಕಾಮಗಾರಿಯನ್ನು ಶೀಘ್ರವಾಗಿ ಗುಣಮಟ್ಟದಿಂದ ಪೂರ್ಣಗೊಳಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಆಲೂರು ಮಲ್ಲು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಸುವರ್ಣ ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಸುರೇಶ್ ವಾಜಪೇಯಿ ಸಂಘದ ಗೌರವ ಅಧ್ಯಕ್ಷ ಸಿದ್ದರಾಜು, ಮುಖಂಡರಾದ ಆರ್.ನಾರಾಯಣ್,ಜಿ.ಎಂ.ಶಂಕರ್,ಹರೀಶ್ ಕುಮಾರ್,ಆಟೋಮಂಜು,ಕೆ.ನಾರಾಯಣ್ ಮತ್ತಿತರರು ಉಪಸ್ಥಿತರಿದ್ದರು.





