‘ಬರ’ ಪರಿಹಾರಕ್ಕೆ ಡಿಸಿಗಳಿಗೆ ಹಣ ಬಿಡುಗಡೆ
ಬೆಂಗಳೂರು, ಜ. 25: ರಾಜ್ಯದಲ್ಲಿನ ಬರ ಪರಿಹಾರ ಕಾರ್ಯಕ್ಕೆ ಕೇಂದ್ರ ಸರಕಾರ 1,540 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ಆ ಹಣವನ್ನು ಬರ ಸ್ಥಿತಿ ಹಿನ್ನೆಲೆಯಲ್ಲಿ ಬೆಳೆ ನಷ್ಟ ಅನುಭವಿಸಿದ 4 ಲಕ್ಷ ರೈತರಿಗೆ ಪರಿಹಾರ ನೀಡಲು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ.
ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೇಲ್ಕಂಡ ತೀರ್ಮಾನ ಕೈಗೊಂಡಿದೆ ಎಂದು ಗೊತ್ತಾಗಿದೆ. ಕೇಂದ್ರ ಸರಕಾರ ಬಿಡುಗಡೆ ಮಾಡಿರುವ 1,540 ಕೋಟಿ ಹಣವನ್ನು 34,87,825 ಮಂದಿ ರೈತರಿಗೆ ಬೆಳೆ ಸಬ್ಸಿಡಿ ರೂಪದಲ್ಲಿ ನೀಡಲಾಗುವುದು ಎಂದು ಹೇಳಲಾಗಿದೆ.
Next Story





