j.30ರಂದು ಆಲಡ್ಕದಲ್ಲಿ ಹೊನಲು ಬೆಳಕಿನ ದಫ್ ಸ್ಪರ್ಧೆ, ಬಹುಭಾಷಾ ಕವಿಗೋಷ್ಠಿ-2016 ಕಾರ್ಯಕ್ರಮ

ವಿಟ್ಲ : ದಫ್ ಎಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲೆ, ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಹಾಗೂ ಕರಾವಳಿ ಟೈಮ್ಸ್ ಪತ್ರಿಕಾ ಬಳಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಹೊನಲು ಬೆಳಕಿನ ದಫ್ ಸ್ಪರ್ಧೆ ಹಾಗೂ ಬಹುಭಾಷಾ ಕವಿಗೋಷ್ಠಿ-2016 ಕಾರ್ಯಕ್ರಮವು ಜ 30 ರಂದು ಸಂಜೆ 6.30 ರಿಂದ ಪಾಣೆಮಂಗಳೂರು-ಆಲಡ್ಕ ಮೈದಾನದ ಮರ್‌ಹೂಂ ಸಜಿಪ ಉಸ್ತಾದ್ ನಗರದ ಮರ್‌ಹೂಂ ಕೆ.ಎಂ. ಇಕ್ಬಾಲ್ ಮಾಸ್ಟರ್ ವೇದಿಕೆಯಲ್ಲಿ ನಡೆಯಲಿದೆ.
ಶೈಖುನಾ ಕೆ.ಪಿ. ಅಬ್ದುಲ್ ಜಬ್ಬಾರ್ ಮುಸ್ಲಿಯಾರ್ ಮಿತ್ತಬೈಲು ದುವಾಶಿರ್ವಚನಗೈಯಲಿದ್ದು, ಆಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಮುದರ್ರಿಸ್ ಹಾಜಿ ಬಿ.ಎಚ್. ಅಬೂಸ್ವಾಲಿಹ್ ಮುಸ್ಲಿಯಾರ್ ಉದ್ಘಾಟಿಸುವರು.
ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮೈಸೂರು ಮಹಾಲಿಂಗೇಶ್ವರ ಮಠದ ಶ್ರೀ ಬಸವಲಿಂಗ ಮೂರ್ತಿ ಸ್ವಾಮೀಜಿ, ಸೂಫಿ ಮತ್ತು ಶರಣ ಸಂತರ ಸೇವಾ ಸಮಿತಿಯ ರಾಜ್ಯಾಧ್ಯಕ್ಷ ಖ್ವಾಜಾ ಅಝೀಂ ಅಲಿ ಶಾ ಚಿಸ್ತಿ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜ, ಮಂಗಳೂರು ಶಾಸಕ ಬಿ.ಎ. ಮೊದಿನ್ ಬಾವಾ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್, ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ.ಎಸ್. ಮುಹಮ್ಮದ್, ಎನ್.ಎಸ್. ಕರೀಂ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಮೊದಲಾದವರು ಭಾಗವಹಿಸುವರು.
ಬಹುಭಾಷಾ ಕವಿ ಹುಸೈನ್ ಕಾಟಿಪಳ್ಳ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸುವರು ಎಂದು ದಫ್ ಎಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಪಿ.ಎಂ. ಅಶ್ರಫ್ ಪಾಣೆಮಂಗಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








