Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಗಿ ಭದ್ರತೆಯಲ್ಲಿ ದ.ಕ. ಜಿಲ್ಲಾ ಮಟ್ಟದ...

ಬಿಗಿ ಭದ್ರತೆಯಲ್ಲಿ ದ.ಕ. ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ

ವಾರ್ತಾಭಾರತಿವಾರ್ತಾಭಾರತಿ26 Jan 2016 1:25 PM IST
share
ಬಿಗಿ ಭದ್ರತೆಯಲ್ಲಿ ದ.ಕ. ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ

ಮಂಗಳೂರು, ಜ. 26: ನಗರದ ನೆಹರೂ ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬಳಿಕ ಗಣರಾಜ್ಯೋತ್ಸವ ಸಂದೇಶ ನೀಡಿದ ಅವರು, ಸಂವಿಧಾನವನ್ನು ಜಾರಿಗೊಳಿಸಿದ ದಿನವಾದ ಇಂದು ಭಾರತೀಯರೆಲ್ಲರೂ ಭಾವನಾತ್ಮಕವಾಗಿ ಒಂದಾದ ದಿನವಾಗಿದೆ. ಆದ್ದರಿಂದ ಪ್ರತಿಯೊಬ್ಬ ಭಾರತೀಯನೂ ಈ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕಾಗಿದೆ ಎಂದರು.

ರಾಜ್ಯ ಸರಕಾರವು ಜಾರಿಗೆ ತಂದಿರುವ ಹಲವಾರು ಯೋಜನೆಗಳನ್ನು ಪ್ರಸ್ತಾಪಿಸಿದ ಅವರು, ಸರಕಾರದ ಮಹತ್ವದ ಯೋಜನೆಯಾದ ಅನ್ನಭಾಗ್ಯದಡಿ ಜಿಲ್ಲೆಯಲ್ಲಿ ವಾರ್ಷಿಕ 36 ಕೋಟಿ ರೂ. ಅನುದಾನ ವಿನಿಯೋಜಿಸಲಾಗಿದೆ. ಒಟ್ಟು 2 ಲಕ್ಷಕ್ಕೂ ಅಧಿಕ ಮೇಲ್ಪಟ್ಟು ಫಲಾನುಭವಿಗಳು ಈ ಯೋಜನೆಯ ಸದುಪಯೋಗ ಪಡೆಯುತ್ತಿದ್ದಾರೆ ಎಂದರು. ರೈತರು ತಮ್ಮ ಜಮೀನುಗಳ ಸಮರ್ಪಕ ದಾಖಲೆಗಳನ್ನು ಇಡುವ ಸರಕಾರದ ಪೋಡಿ ಮುಕ್ತ ಅಭಿಯಾನ ಯೋಜನೆಯಡಿ 30 ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಆ ಗ್ರಾಮಗಳ ಅಳತೆ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. 2ನೆ ಹಂತದಲ್ಲಿ ಮತ್ತೆ 30 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಸರಕಾರಿ ಜಮೀನುಗಳಲ್ಲಿ ಮನೆ ಕಟ್ಟಿಕೊಂಡಿರುವವರಿಗೆ ಸಕ್ರಮೀಕರಣ ಮಾಡುವ ಉದ್ದೇಶದಿಂದ 94 ಸಿ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿದ್ದು, ಈವರೆಗೆ 2400 ಚದರ ಅಡಿ ಇದ್ದ ವಿಸ್ತೀರ್ಣವನ್ನು 4000 ಚದರ ಅಡಿಗಳಿಗೆ ಹೆಚ್ಚಿಸಾಗಿದೆ. ಜಿಲ್ಲೆಯಲ್ಲಿ 54,000 ಅರ್ಜಿಗಳು ಸ್ವೀಕಾರವಾಗಿ, 4492 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ ಎಂದು ಅವರು ಹೇಳಿದರು.ನಗರ ಪ್ರದೇಶದ ಸರಕಾರಿ ಜಾಗಗಳಲ್ಲಿ ಮನೆ ಕಟ್ಟಿಕೊಂಡಿರುವವರನ್ನು ಸಕ್ರಮೀಕರಣಗೊಳಿಸಲು 94ಸಿಸಿ ಜಾರಿಗೆ ತಂದಿದ್ದು, ಅರ್ಜಿ ಸ್ವೀಕರಿಸುವ ಕಾರ್ಯ ಪ್ರಗತಿಯಲ್ಲಿದೆ. ವಿಕಲಚೇತನರನ್ನು ವಿವಹಾವಾಗುವ ಸಾಮಾನ್ಯರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 50,000 ರೂ. ಪ್ರೋತ್ಸಾಹ ಧನ ನೀಡಲು ಯೋಜಿಸಲಾಗಿದೆ. ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ನೀಡುವ ಯೋಜನೆ ಜಾರಿಗೊಳಿಸಲಾಗಿದೆ. ಜಿಲ್ಲೆಯ ಮಲೆಕುಡಿಯ ಜನಾಂಗದವರಲ್ಲಿ ಸಿಕ್‌ಸೆಲ್ ಅನಿಮಿಯಾ ಕಾಯಿಲೆಯಿಂದ ಬಳಲುವವರಿಗೆ ಸಮಗ್ರ ಪಾಲನೆ ದೃಷ್ಟಿಯಿಂದ 120 ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದವರು ಹೇಳಿದರು.

ಕೇಂದ್ರ ಸರಕಾರದ ಅಮೃತ ಯೋಜನೆಯಡಿ 200 ಕೋಟಿ ರೂ. ಅನುದಾನ ಬಿಡುಗಡೆಯಾಗಲಿದ್ದು, ಒಳಚರಂಡಿ, ಮಳೆ ನೀರು, ಚರಂಡಿ ಹಾಗೂ ಪಾರ್ಕ್ ಅಭಿವೃದ್ಧಿ ಮೊದಲಾದ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ರೈ ತಿಳಿಸಿದರು. ಈ ಸಂದರ್ಭ ಸರಕಾರಿ ಸೇವೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 6 ಮಂದಿಗೆ ದ.ಕ. ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದೇ ಸಂದರ್ಭ ರಾಷ್ಟ್ರಪತಿಯವರ ಶ್ಲಾಘನೀಯ ಪದಕಕ್ಕೆ ಆಯ್ಕೆಯಾಗಿರುವ ಮಂಗಳೂರು ಪೊಲೀಸ್ ಆಯುಕ್ತ ಎಂ. ಚಂದ್ರಶೇಖರ್, ಮಂಗಳೂರು ನಗರ ಉತ್ತರ ಉತ್ತರ ಉಪ ವಿಭಾಗದ ಎಸಿಪಿ ಮದನ್ ಎ. ಗಾಂವಕರ್, ರಾಜ್ಯ ಮಟ್ಟದ ಸರ್ವೋತ್ತಮ ಪ್ರಶಸ್ತಿಗೆ ಆಯ್ಕೆಯಾದ ಜಿಲ್ಲಾಧಿಕಾರಿ ಕಚೇರಿಯ ಕಂದಾಯ ವಿಭಾಗದ ಅಧೀಕ್ಷಕ ಶೇಖ್ ಹಸನ್‌ರವರನ್ನು ಸಚಿವರು ಅಭಿನಂದಿಸಿದರು.

ಬಳಿಕ ಎನ್‌ಸಿಸಿ, ಸೇವಾದಳ, ಪೊಲೀಸ್ ವಿಭಾಗ ಸೇರಿದಂತೆ 17 ತಂಡಗಳ ಆಕರ್ಷಕ ಪಥ ಸಂಚಲನ, ನಗರದ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ದೇಶಾಭಿಮಾನದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿತು. ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್, ಸಂಸದ ನಳಿನ್ ಕುಮಾರ್ ಕಟೀಲು, ಮೇಯರ್ ಜೆಸಿಂತಾ ವಿಜಯಾ ಆಲ್ಪ್ರೆಡ್, ಉಪ ಮೇಯರ್ ಪುರುಷೋತ್ತಮ ಚಿತ್ರಾಪುರ, ಶಾಸಕರಾದ ಐವನ್ ಡಿಸೋಜಾ, ಜೆ.ಆರ್. ಲೋಬೋ, ಕ್ಯಾ. ಗಣೇಶ್ ಕಾರ್ಣಿಕ್, ಮೂಡಾ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಾಯ್ ಕ್ಯಾಸ್ತಲಿನೊ, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್, ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ, ಪಶ್ಚಿಮ ವಲಯ ಐಜಿಪಿ ಅಮೃತ್ ಪಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶರಣಪ್ಪ ಎಸ್.ಡಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಐ. ಶ್ರೀವಿದ್ಯಾ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X