ಸೂರ್ಯತ್ತಾವು ಪಟ್ರಮೆ ಶಾಲೆಯಲ್ಲಿ ಗಣರಾಜ್ಯೋತ್ಸವ

ಬೆಳ್ತಂಗಡಿ: ಸೂರ್ಯತ್ತಾವು ಪಟ್ರಮೆ ಶಾಲೆಯಲ್ಲಿ ಗಣರಾಜ್ಯೋತ್ಸವದ ಸಭಾ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಕೀಲ ನವೀನ್ ಬಿ.ಕೆ. ಮಾತನಾಡಿದರು.
ಶಾಲಾಭಿವೃದ್ಧಿ ಸಮಿತಿ ಮತ್ತು ಹಳೆ ವಿದ್ಯಾರ್ಥಿಗಳ ಪಾಲಕರು, ಸಾರ್ವಜನಿಕರು ಈ ಸಂದರ್ಭ ಉಪಸ್ಥಿತರಿದ್ದರು.
ಪದ್ಮನಾಭ ಕುಕ್ಕೇಲಿ ಧ್ವಜಾರೋಹಣ ನೆರವೇರಿಸಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ವೆಂಕಪ್ಪ ಗೌಡ, ಪತ್ರಕರ್ತ ದೇವಿ ಪ್ರಸಾದ್ ನಿಡ್ಲೆ ಮಾತನಾಡಿದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ಶ್ರೀದರ ಕೆ.ಎಸ್. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
Next Story





