ಹುಸಿ ಬಾಂಬ್ ಕರೆ ಮಾಡಿದ್ದ ಯುವಕ ಪೊಲೀಸ್ ವಶಕ್ಕೆ: ವಿಚಾರಣೆ

ಮಂಗಳೂರು, ಜ. 26: ಮಾರುಕಟ್ಟೆಯಲ್ಲಿ ಬಾಂಬ್ ಇದೆ ಎಂದು ಹುಸಿ ಕರೆ ಮಾಡಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣಗೊಳಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಯುವಕ ನಗರದ ಕಂಕನಾಡಿ ಮಾರುಕಟ್ಟೆಯ ನೌಕರ ಎಂದು ಹೇಳಲಾಗಿದೆ. ಹುಸಿ ಬಾಂಬ್ ಕರೆಯ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಎಂ. ಚಂದ್ರಶೇಖರ ಮಾರ್ಗದರ್ಶನದಲ್ಲಿ ನಗರದ ಬಾಂಬ್ ಸ್ಕ್ವಾಡ್‌ನ ಪ್ರಭಾರ ಸಬ್ ಇನ್ಸ್‌ಪೆಕ್ಟರ್ ಸೋಮಪ್ಪ ನಾಯಕ್ ನೇತೃತ್ವದಲ್ಲಿ ನಗರದ ಕೇಂದ್ರ ಮಾರುಕಟ್ಟೆ ಹಾಗೂ ಕಂಕನಾಡಿ ಮಾರುಕಟ್ಟೆಯಲ್ಲಿ ಪೊಲೀಸರು ಶ್ವಾನದಳದೊಂದಿಗೆ ತಪಾಸಣೆ ನಡೆಸಿದ್ದರು.
Next Story





