Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯದಲ್ಲಿ ನಡೆಯಿತು ಜೆಡಿಎಸ್ ಸಭೆ -...

ಸುಳ್ಯದಲ್ಲಿ ನಡೆಯಿತು ಜೆಡಿಎಸ್ ಸಭೆ - ಮೈತ್ರಿ ಮಾಡಿಕೊಳ್ಳದೆ ಸ್ಪರ್ಧಿಸಲು ಕಾರ್ಯಕರ್ತರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ26 Jan 2016 6:38 PM IST
share
ಸುಳ್ಯದಲ್ಲಿ ನಡೆಯಿತು ಜೆಡಿಎಸ್ ಸಭೆ - ಮೈತ್ರಿ ಮಾಡಿಕೊಳ್ಳದೆ ಸ್ಪರ್ಧಿಸಲು ಕಾರ್ಯಕರ್ತರ ಆಗ್ರಹ

ಸುಳ್ಯ: ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯು ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಪಕ್ಷದ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞಿ, ಜಿಲ್ಲಾ ವಕ್ತಾರ ರಾಮ್‌ಗಣೇಶ್, ಯುವ ಘಟಕದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ, ತಾಲೂಕು ಘಟಕದ ಅಧ್ಯಕ್ಷ ದಯಾಕರ ಆಳ್ವ, ಎ.ಪಿ.ಎಂ.ಸಿ. ಅಧ್ಯಕ್ಷ ಜಾಕೆ ಮಾಧವ ಗೌಡ, ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಂಠಿಕಾನ, ತಾಲೂಕು ಯುವ ಜನತಾದಳ ಅಧ್ಯಕ್ಷ ಪ್ರವೀಣ್ ಮುಂಡೋಡಿ ಮೊದಲಾದವರು ಭಾಗವಹಿಸಿದ್ದರು. ಸಭೆಯಲ್ಲಿ ಭಾಗವಹಿಸಿದ್ದ ಅನೇಕ ಕಾರ್ಯಕರ್ತರು ಮುಂಬರುವ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ಸ್ಪರ್ಧೆ ಮಾಡಬೇಕು ಎಂದು ಸಲಹೆ ನೀಡಿದರು. ಮಹಮ್ಮದ್ ಇಕ್ಬಾಲ್ ಎಲಿಮಲೆ, ವಿನೂಪ್ ಮಲ್ಲಾರ, ಹನೀಫ್ ಮೊಟ್ಟೆಂಗಾರು, ರೋಹನ್ ಪೀಟರ್, ನಾರಾಯಣ ಅಗ್ರಹಾರ, ಡಾಮೋಹನ್‌ಕುಮಾರ್ ಮೊದಲಾದವರು ಅಭಿಪ್ರಾಯ ವ್ಯಕ್ತಪಡಿಸಿ ಪಕ್ಷ ಅಧಿಕಾರದಲ್ಲಿ ಇದ್ದರೂ ಇಲ್ಲದಿದ್ದರೂ ನಾವೆಲ್ಲಾ ಸುದೀರ್ಘ ಕಾಲದಿಂದ ಪಕ್ಷದಲ್ಲಿದ್ದೇವೆ. ಇಲ್ಲಿ ಜೆಡಿಎಸ್‌ಗೆ ಮತಗಳಿವೆ. ನಮ್ಮಲ್ಲಿ ಉತ್ಸಾಹವೂ ಇದೆ. ಹಣವಾಗಲಿ, ಅಧಿಕಾರವಾಗಲಿ ನಮಗೆ ಬೇಡ, ಆದರೆ ನಾಯಕರಿಂದ ನೈತಿಕ ಬೆಂಬಲ ಬೇಕು. ಪಕ್ಷ ನಿಂತ ನೀರಾಗದೆ ಚಟುವಟಿಕೆಯಿಂದ ಕೂಡಿರಬೇಕು. ಜನವಿರೋಧಿ ನೀತಿಗಳ ವಿರೋಧಿಸಿ ಪ್ರತಿಭಟನೆ ನಡೆಸಬೇಕು ಎಂದು ಹೇಳಿದರು. ಹಿಂದಿನ ತಾ.ಪಂ. ಚುನಾವಣೆಯ ವೇಳೆ ನನ್ನ ವಿರುದ್ಧವೇ ಮತ್ತೊಬ್ಬ ಅಭ್ಯರ್ಥಿಗೆ ಬಿಫಾರ್ಮ್ ನೀಡಿ ಬಳಿಕ ಅವರು ಕೂಡಾ ಕಣದಿಂದ ಹಿಂದೆ ಸರಿಯುವ ಹಾಗಿತ್ತು. ಇಂತಹ ಬೆಳವಣಿಗೆಗಳು ನಡೆಯಬಾರದು. ಹೀಗಾದರೆ ನಮ್ಮ ನಾಯಕರನ್ನೇ ನಮ್ಮ ಗ್ರಾಮಕ್ಕೆ ಬಾರದಂತೆ ತಡೆಯಬೇಕಾಗುತ್ತದೆ ಎಂದು ರೋಹನ್ ಪೀಟರ್ ಹೇಳಿದರು. ಕಾರ್ಯಕರ್ತರ ಅಹವಾಲುಗಳನ್ನು ಆಲಿಸಿದ ಬಳಿಕ ಮಾತನಾಡಿದ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞಿಯವರು, ಪಕ್ಷದಲ್ಲಿ ಹಲವು ನ್ಯೂನತೆಗಳಿರುವುದು ನಿಜ. ರಾಜ್ಯದ ನಾಯಕರಿಂದಲೂ ನಮಗೆ ತೊಂದರೆಯಾಗಿದೆ. ಚುನಾವಣೆಗಾಗುವಾಗ ಪಕ್ಷಕ್ಕೆ ಬರುವುದು ಅವರಿಗೆ ಟಿಕೆಟ್ ನೀಡುವುದು ನಂತರ ಅವರು ಪಕ್ಷ ಬಿಟ್ಟು ಹೋಗುವುದು ಇದೆಲ್ಲಾ ನಡೆದುದರಿಂದ ನಮಗೇ ತಿರುಗುಬಾಣವಾಗಿದೆ. ಮುಂದೆ ಈ ರೀತಿಯಾಗಬಾರದು. ಈ ಚುನಾವಣೆಯಲ್ಲಿ ಸಿಪಿಎಂನೊಂದಿಗೆ ಮೈತ್ರಿ ಮಾಡುವಂತೆ ರಾಜ್ಯದಿಂದ ಆದೇಶ ಬಂದಿದೆ. ಸುಳ್ಯ ತಾಲೂಕಿನಲ್ಲಿ ಎಷ್ಟು ಕ್ಷೇತ್ರಗಳಿಗೆ ಅಭ್ಯರ್ಥಿಗಳು ನಿಂತರೂ ಬಿಫಾರ್ಮ್ ನೀಡುತ್ತೇವೆ ಎಂದರು.

ತಾಲೂಕು ಜನತಾದಳ ಅಧ್ಯಕ್ಷ ದಯಾಕರ ಆಳ್ವ ಮಾತನಾಡಿ, ಈ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಬಾರದು. ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಎಸ್.ಡಿ.ಪಿ.ಐ.ನೊಂದಿಗೆ ಮೈತ್ರಿ ಮಾಡಿಕೊಂಡ ಕಾರಣ ನನಗೆ ವೇದಿಕೆಯಲ್ಲಿ ತಲೆತಗ್ಗಿಸಿ ಕುಳಿತುಕೊಳ್ಳುವಂತಾಗಿತ್ತು ಎಂದರು. ಎ.ಪಿ.ಎಂ.ಸಿ. ಅಧ್ಯಕ್ಷ ಜಾಕೆ ಮಾಧವ ಗೌಡ ಮಾತನಾಡಿ, ಪಕ್ಷದಿಂದ ಯಾವುದೇ ಕಾರ್ಯಕ್ರಮಗಳಿಲ್ಲದೆ, ಚಟುವಟಿಕೆಯಿಲ್ಲದೆ ಕಾರ್ಯಕರ್ತರನ್ನು ಹಿಡಿದಿಟ್ಟುಕೊಳ್ಳುವಂತಹ ಯೋಜನೆಗಳಿಲ್ಲದ್ದರಿಂದ ಕಾರ್ಯಕರ್ತರಿಗೆ ಭ್ರಮನಿರಸನವಾಗಿರುವುದು ನಿಜ. ಆದರೆ ಈಗಲೂ ಜೆಡಿಎಸ್ ಬಗ್ಗೆ ಗೌರವದ ವಾತಾವರಣ ಇದೆ. ನಾವೆಲ್ಲಾ ಧೃತಿಗೆಡದೆ ಪಕ್ಷವನ್ನು ಮುನ್ನಡೆಸೋಣ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X