ಕೆಪಿಸಿಸಿ ಕಚೇರಿಯಲ್ಲಿ ಗಣರಾಜ್ಯೋತ್ಸಕಾರ್ಯಕ್ರಮ
ಬೆಂಗಳೂರು.ಜ.26: ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಎಲ್. ಶಂಕರ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ನಂತರ ಬಿ.ಎಲ್. ಶಂಕರ್, ಎಲ್ಲರಿಗೂ ಶಿಕ್ಷಣ ನೀಡುವುದು, ಆಹಾರದ ಹಕ್ಕು ಒದಗಿಸುವುದು ಹಾಗೂ ಆರೋಗ್ಯ ಕಾಪಾಡುವ ಸಾಂವಿಧಾನಿಕ ಹೊಣೆ ನಮ್ಮ ಮೇಲಿದೆ; ಅದನ್ನು ನಿರ್ವಹಿಸಲು ಎಲ್ಲರೂ ಸಹಕಾರ ನೀಡಬೇಕು ಎಂದು ಹೇಳಿದರು.
ವಿವಿಧ ರಾಜಕೀಯ ಪಕ್ಷಗಳ ಕಚೇರಿಗಳಲ್ಲಿಯೂ ಗಣರಾಜ್ಯೋತ್ಸವ ಕಾರ್ಯಕ್ರಮ ಏರ್ಪಾಡಾಗಿತ್ತು.
Next Story





