ಜಿಲ್ಲಾ ಮಟ್ಟದ ರಾಷ್ಟ್ರೀಯ ಮತದಾರರ ದಿನಾಚರಣೆ

ಪುತ್ತೂರು, ಜ.26: ಮತದಾನದ ಉದ್ದೇಶ, ಧ್ಯೇಯವನ್ನು ಅರ್ಥ ಮಾಡಿಕೊಳ್ಳುವ ಮೂಲಕ ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ. ಆ ಜವಾಬ್ದಾರಿ ಅರಿತುಕೊಂಡು ಎಲ್ಲರೂ ಮತ ಚಲಾಯಿಸಬೇಕು ಎಂದು ಪುತ್ತೂರು ನ್ಯಾಯಾಲಯದ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ವಿ.ನಾಗರಾಜ್ ಹೇಳಿದರು.ದರ್ಬೆ ಸಂತ ಫಿಲೋಮಿನಾ ಕಾಲೇಜಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಸವಣೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಬಿ.ವಿ.ಸೂರ್ಯನಾರಾಯಣ ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ, ಭಾರತದ ಸಂವಿಧಾನ ರಚನಾಕಾರರಾದ 600 ಮಂದಿಯಲ್ಲಿ ಐವರು ದ.ಕ. ಜಿಲ್ಲೆಯವರು. ಆದ್ದರಿಂದ ಮತದಾನದ ಪ್ರಕ್ರಿಯೆಯನ್ನು ಯಶಸ್ವಿಗೊಳಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.
Next Story





