Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗ್ರಾಮ ಭಾರತದ ಪುನರ್‌ನಿರ್ಮಾಣ:...

ಗ್ರಾಮ ಭಾರತದ ಪುನರ್‌ನಿರ್ಮಾಣ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ26 Jan 2016 11:56 PM IST
share
ಗ್ರಾಮ ಭಾರತದ ಪುನರ್‌ನಿರ್ಮಾಣ: ಸಿದ್ದರಾಮಯ್ಯ

ಬೆಂಗಳೂರು, ಜ.26: ಗ್ರಾಮೀಣ ಪ್ರದೇಶದಿಂದ ಉದ್ಯೋಗವನ್ನು ಅರಸಿ ಕೊಂಡು ಪಟ್ಟಣ, ನಗರಗಳ ಕಡೆ ಜನ ವಲಸೆ ಬರುತ್ತಿರುವುದು ಆಧುನಿಕ ಸಮಾಜದ ಬಹುದೊಡ್ಡ ಸಮಸ್ಯೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಂಗಳವಾರ 67ನೆ ಗಣರಾಜ್ಯೋತ್ಸವದ ಅಂಗವಾಗಿ ದೂರದರ್ಶನದಲ್ಲಿ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ಜನರ ವಲಸೆಯಿಂದಾಗಿ ಒಂದೆಡೆ ಹಳ್ಳಿಗಳು ಬರಡಾಗುತ್ತಿದ್ದರೆ, ಇನ್ನೊಂದೆಡೆ ಪಟ್ಟಣ-ನಗರಗಳು ಜನಸಂಖ್ಯೆಯ ಒತ್ತಡದಿಂದ ಕುಸಿಯತೊಡಗಿವೆ ಎಂದು ಹೇಳಿದರು.

ನಗರ ಹಾಗೂ ಪಟ್ಟಣಗಳ ಮೇಲಿನ ಒತ್ತಡ ಕಡಿಮೆ ಮಾಡಲು ಹಳ್ಳಿಗಳನ್ನು ಬದುಕಲು ಯೋಗ್ಯ ಎನಿಸಿಕೊಳ್ಳುವಂತೆ ಹೊಸ ಕಾಲದ ವಿಜ್ಞಾನ, ಸಂಪನ್ಮೂಲ, ಸಂಪರ್ಕ ಮತ್ತು ಅಭಿವೃದ್ಧಿಯ ಸಾಧ್ಯತೆಗಳನ್ನು ಬಳಸಿಕೊಂಡು ‘ಗ್ರಾಮಭಾರತ’ವನ್ನು ಪುನರ್ ನಿರ್ಮಾಣ ಮಾಡಬೇಕಾಗಿದೆ ಎಂದು ಮುಖ್ಯಮಂತ್ರಿ ಕರೆ ನೀಡಿದರು.

ಪಂಚಾಯತ್‌ಗಳು ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ಆಗಬೇಕು ಎಂದು ಮಹಾತ್ಮ ಗಾಂಧೀಜಿ ಹೇಳಿದ್ದರು. ಪಂಚಾಯತ್ ರಾಜ್ ಸಂಸ್ಥೆಗಳಿಗೆ ಹೆಚ್ಚು ಅಧಿಕಾರ ನೀಡುವ ಮೂಲಕ ಗಾಂಧೀಜಿಯವರ ಕನಸಿನ ರಾಜ್ಯವನ್ನು ನನಸು ಮಾಡ ಬೇಕೆಂಬುದು ನಮ್ಮ ಸರಕಾರದ ಸಂಕಲ್ಪ ಎಂದು ಸಿದ್ದರಾಮಯ್ಯ ತಿಳಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ 1950ರ ಜ.26ರಂದು ಸಂವಿಧಾನ ಜಾರಿಗೊಳ್ಳುತ್ತಿರುವ ಸಂದರ್ಭದಲ್ಲಿ ‘ಭಾರತೀಯರಾದ ನಾವು ಒಂದು ವೈರುಧ್ಯಗಳ ಘಟ್ಟಕ್ಕೆ ಪಾದಾರ್ಪಣೆ ಮಾಡುತ್ತಿದ್ದೇವೆ. ರಾಜಕೀಯವಾಗಿ ಸಮಾನತೆಯನ್ನು ಪ್ರತಿಪಾದಿಸುತ್ತಾ ಹೋಗುತ್ತಿರುತ್ತೇವೆ. ಆದರೆ, ಅದೇ ವೇಳೆಗೆ ಸಾಮಾಜಿಕ ಮತ್ತು ಆರ್ಥಿಕ ರಚನೆಗಳಲ್ಲಿ ಅಸಮಾನತೆ ಮುಂದುವರಿಯುತ್ತಲೇ ಇರುತ್ತದೆ. ಇಂತಹ ವೈರುಧ್ಯಗಳು ಮುಂದುವರಿದುಕೊಂಡು ಹೋದರೆ ನಾವು ಶ್ರಮವಹಿಸಿ ಕಟ್ಟಿದ ಪ್ರಜಾಪ್ರಭುತ್ವದ ಸೌಧವನ್ನು ಅಸಮಾನತೆಯಿಂದ ಬಾಧಿತರಾಗುವ ಶೋಷಿತರೆ ಕೆಡವಿಹಾಕಬಹುದು’ ಎಂಬ ಎಚ್ಚರಿಕೆಯನ್ನು ನೀಡಿದ್ದರು ಎಂದು ಅವರು ಹೇಳಿದರು.

ವೈಚಾರಿಕ ಮತ್ತು ಸಾಮಾಜಿಕ ಸಹಿಷ್ಣುತೆಯೆ ಪ್ರಜಾಪ್ರಭುತ್ವದ ಸೌಂದರ್ಯ. ಇತ್ತೀಚೆಗೆ ಅಸಹಿಷ್ಣುತೆ ಎನ್ನುವುದು ರಾಷ್ಟ್ರೀಯ ಚರ್ಚೆಯಾಗಿದೆ. ಪ್ರಜಾಪ್ರಭುತ್ವದ ಆಶಯಗಳಿಗೆ ಅನುಗುಣವಾಗಿ ಸಾಂಸ್ಕೃತಿಕವಾಗಿ ದೇಶವನ್ನು ಕಟ್ಟಲು ಪ್ರಯತ್ನಿಸುತ್ತಿರುವ ಸಾಹಿತಿಗಳು, ಕಲಾವಿದರು, ಬುದ್ಧಿಜೀವಿಗಳಿಂದ ಹಿಡಿದು ಸಾಮಾನ್ಯ ಮನುಷ್ಯನವರೆಗೆ ಎಲ್ಲರೂ ದೇಶಾದ್ಯಂತ ಅಸಹಿಷ್ಣುತೆಯ ವಿರುದ್ಧ ದನಿ ಎತ್ತತೊಡಗಿದ್ದಾರೆ. ಈ ರೀತಿ ದನಿ ಎತ್ತುವವರ ದಮನ ಕಾರ್ಯವೂ ನಡೆಯುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಅಸಹಿಷ್ಣುತೆ: ಸಾವಿರಾರು ವರ್ಷಗಳಿಂದ ಈ ದೇಶದಲ್ಲಿ ಅಸಹಿಷ್ಣುತೆ ಇದೆ. ಆದರೆ ಇಂದು ಅಸಹಿಷ್ಣುತೆಯನ್ನು ಅನಾದಿ ಕಾಲದಿಂದಲೂ ಸಹಿಸಿಕೊಂಡು ಹೋಗುತ್ತಿದ್ದ ಜನವರ್ಗ ಜಾಗೃತಗೊಂಡು ಪ್ರಶ್ನಿಸತೊಡಗಿದೆ. ಅದೇ ರೀತಿ ಅಸಹಿಷ್ಣುತೆಯನ್ನು ಪ್ರಶ್ನಿಸುವುದೇ ಅಪರಾಧವೆಂದು ಹೇಳುವ ಪಟ್ಟಭದ್ರರು ಮೆರೆಯತೊಡಗಿದ್ದಾರೆ ಎಂದು ಅವರು ಕಿವಿಮಾತು ಹೇಳಿದರು.

ರಾಜಕೀಯದಿಂದಾಗಲಿ, ಮತಧರ್ಮದ ಚಿಂತನೆಗಳಿಂದಾಗಲಿ ದೇಶ ಅಭಿವೃದ್ದಿ ಹೊಂದುವುದಿಲ್ಲ. ವೈಜ್ಞಾನಿಕ ಪ್ರಗತಿ, ತಂತ್ರಜ್ಞಾನದ ಅಭಿವೃದ್ದಿ ಮತ್ತು ವೈಚಾರಿಕ ಚಿಂತನೆಯಿಂದ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ. ಆದರೆ, ದುರದೃಷ್ಟವಶಾತ್ ಇಂದು ವಿದ್ಯೆ ಕಲಿತ ಜನರೆ ಹೆಚ್ಚು ಹೆಚ್ಚು ಮೂಢನಂಬಿಕೆಗಳಿಗೆ ಬಲಿಯಾಗುತ್ತಿದ್ದಾರೆ. ಇದರಿಂದ ನಮ್ಮ ದೇಶ ಯಾವ ಮಟ್ಟಿಗಿನ ವೈಜ್ಞಾನಿಕ ಪ್ರಗತಿ ಸಾಧಿಸಲು ಸಾಧ್ಯ? ಈ ಬಗ್ಗೆ ನಾವೆಲ್ಲಾ ಗಂಭೀರವಾಗಿ ಚಿಂತಿಸಬೇಕು ಎಂದು ಸಿದ್ದರಾಮಯ್ಯ ತಮ್ಮ ಸಂದೇಶದಲ್ಲಿ ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X