ಕಸಾಪ ಚುನಾವಣೆ: ರಾಜ್ಯಾದ್ಯಂತ ಒಟ್ಟು 406 ನಾಮಪತ್ರ ಸಲ್ಲಿಕೆ
ಬೆಂಗಳೂರು, ಜ.26: ಫೆ 28ರಂದು ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ, ಗಡಿ ರಾಜ್ಯ ಘಟಕಗಳ ಅಧ್ಯಕ್ಷ ಮತ್ತು ಜಿಲ್ಲಾಧ್ಯಕ್ಷ ಸ್ಥಾನಗಳ ಚುನಾವಣೆಗೆ ರಾಜ್ಯಾದ್ಯಂತ 230 ಅಭ್ಯರ್ಥಿಗಳಿಂದ ಒಟ್ಟು 406 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಕಸಾಪ ಕೇಂದ್ರ ಚುನಾವಣಾಧಿಕಾರಿ ಕೆ.ನಾಗರಾಜು ತಿಳಿಸಿದ್ದಾರೆ.
ಕೇಂದ್ರ ಅಧ್ಯಕ್ಷ ಸ್ಥಾನಕ್ಕೆ ಒಟ್ಟು 16 ಅಭ್ಯರ್ಥಿಗಳು 31 ನಾಮಪತ್ರಗಳು ಸಲ್ಲಿಕೆಯಾಗಿವೆ. ಗಡಿ ರಾಜ್ಯ ಘಟಕಗಳ ಅಧ್ಯಕ್ಷ ಸ್ಥಾನಕ್ಕೆ ಒಟ್ಟು 7 ಅಭ್ಯರ್ಥಿಗಳಿಂದ 10 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಇನ್ನೂ 30 ಜಿಲ್ಲಾ ಘಟಕಗಳ ಅಧ್ಯಕ್ಷ ಸ್ಥಾನಕ್ಕೆ 207 ಅಭ್ಯರ್ಥಿಗಳಿಂದ ಒಟ್ಟು 365 ನಾಮಪತ್ರಗಳು ಸಲ್ಲಿಕೆಯಾಗಿವೆ.
ಜ. 28ರಂದು ನಾಮಪತ್ರಗಳನ್ನು ಪರಿಶೀಲನೆ ಮತ್ತು ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಘಟಕಗಳ ಜಿಲ್ಲಾ ಕೇಂದ್ರಗಳು ಮತ್ತು ತಾಲೂಕು ಕಚೇರಿಗಳಲ್ಲಿ ಪ್ರಕಟಿಸಲಾಗುತ್ತದೆ. ಫೆ.1ರಂದು ಮಧ್ಯಾಹ್ನ 3 ಗಂಟೆಯವರೆಗೂ ನಾಮಪತ್ರಗಳನ್ನು ಹಿಂಪಡೆಯಲು ಕಾಲಾವಕಾಶ ನೀಡಲಾಗಿದೆ. ಮತ್ತು ಅಂದು ಸಂಜೆ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.





