ಇಂದು ರಕ್ತದಾನ ಶಿಬಿರ
ಉಡುಪಿ, ಜ.26: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ರಕ್ತನಿಧಿ ಕೇಂದ್ರ ಕೆಎಂಸಿ ಮಣಿಪಾಲ ಮತ್ತು ರಕ್ತ ನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ ಉಡುಪಿ, ಹಾಗೂ ಎಂಜಿಎಂ ಕಾಲೇಜಿನ ಎನ್ನೆಸ್ಸೆಸ್, ಎನ್‌ಸಿಸಿ, ರೆಡ್‌ಕ್ರಾಸ್ ಘಟಕಗಳ ಆಶ್ರಯದಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಜ.27ರಂದು ಬೆಳಗ್ಗೆ 9ಗಂಟೆಗೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ.ವಿಶಾಲ್ ಆರ್. ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಮಣಿಪಾಲ ವಿವಿಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್. ಬಲ್ಲಾಳ್ ವಹಿಸುವರು ಎಂದು ಪ್ರಕಟನೆ ತಿಳಿಸಿದೆ.
Next Story





