Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಝೈಕಾ ವೈರಸ್ ವಿರುದ್ಧ ಸಮರ: ಒಬಾಮ ಕರೆ

ಝೈಕಾ ವೈರಸ್ ವಿರುದ್ಧ ಸಮರ: ಒಬಾಮ ಕರೆ

ವಾರ್ತಾಭಾರತಿವಾರ್ತಾಭಾರತಿ27 Jan 2016 11:13 PM IST
share
ಝೈಕಾ ವೈರಸ್ ವಿರುದ್ಧ ಸಮರ: ಒಬಾಮ ಕರೆ

ವಾಶಿಂಗ್ಟನ್,ಜ.27: ವಿಶ್ವದಾದ್ಯಂತ ಭೀತಿಯನ್ನು ಸೃಷ್ಟಿಸಿರುವ ‘ ಝೈಕಾ ವೈರಸ್‌ನ ಮೂಲೋತ್ಪಾಟನೆಗೆ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ವಿಶ್ವಸಮುದಾಯಕ್ಕೆ ಕರೆ ನೀಡಿದ್ದಾರೆ. ಝೈಕಾ ವೈರಸ್‌ನ ಹರಡುವಿಕೆಯನ್ನು ತಡೆಗಟ್ಟುವ ಲಸಿಕೆಗಳು ಹಾಗೂ ಔಷಧಿಗಳ ಸಂಶೋಧನೆಯನ್ನು ತ್ವರಿತಗೊಳಿಸುವಂತೆ ಒಬಾಮಾ ವೈದ್ಯ ವಿಜ್ಞಾನಿಗಳಿಗೆ ತಿಳಿಸಿದ್ದಾರೆ.
 ಝೈಕಾ ವೈರಸ್ ಸೋಂಕು ತಗಲಿದ ಮಹಿಳೆಯರಿಗೆ ಹುಟ್ಟುವ ಶಿಶುಗಳ ಮೆದುಳು ಬೆಳವಣಿಗೆ ಕುಂಠಿತವಾಗಿರುತ್ತದೆಯೆಂದು ವಿಜ್ಞಾನಿಗಳು ಬಹಿರಂಗಪಡಿಸಿರುವುದು,ಭಾರೀ ಆತಂಕಕ್ಕೆ ಕಾರಣವಾಗಿದೆ.ಝೈಕಾ ವೈರಸ್ ಮುಂದಿನ ಕೆಲವು ತಿಂಗಳುಗಳೊಳಗೆ ದಕ್ಷಿಣ ಹಾಗೂ ಉತ್ತರ ಅಮೆರಿಕಗಳಿಗೆ ಹರಡುವ ಅಪಾಯವಿದೆಯೆಂದು ವಿಶ್ವ ಆರೋಗ್ಯಸಂಸ್ಥೆಯು ಎಚ್ಚರಿಕೆ ನೀಡಿದೆ.
 ಕೆರಿಬಿಯನ್ ಸಮುದ್ರ ಪ್ರದೇಶ, ಉತ್ತರ ಹಾಗೂ ದಕ್ಷಿಣ ಅಮೆರಿಕ ಖಂಡದಲ್ಲಿರುವ ಒಟ್ಟು 21 ರಾಷ್ಟ್ರಗಳಲ್ಲಿ ಝೈಕಾ ರೋಗಾಣುಗಳು ಈಗಾಗಲೇ ಪತ್ತೆಯಾಗಿವೆ. ತಿಳಿಜ್ವರ,ಕಣ್ಣುರಿ ಹಾಗೂ ತಲೆನೋವು ಈ ರೋಗದ ಆರಂಭಿಕ ಲಕ್ಷಣಗಳಾಗಿವೆ. ಈ ವೈರಸ್ ಗರ್ಭದಲ್ಲಿರುವ ಶಿಶುಗಳ ಬೆಳವಣಿಗೆಗೆ ಹಾನಿಯನ್ನುಂಟು ಮಾಡುತ್ತವೆಯೆಂದು ವೈದ್ಯವಿಜ್ಞಾನಿಗಳು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.
   
 ಝೈಕಾ ವೈರಸ್ ಪತ್ತೆಯಾಗಿರುವ ಬ್ರೆಝಿಲ್‌ನಲ್ಲಿ, ಅಸಹಜವಾದ ಸಣ್ಣ ತಲೆಯಿರುವ ಶಿಶುಗಳ (ಮೈಕ್ರೊಸೆಫಲಿ)ಜನನ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿರುವುದು ಕಂಡುಬಂದಿದೆ.ಈ ಹಿನ್ನೆಲೆಯಲ್ಲಿ ಮಧ್ಯ ಹಾಗೂ ದಕ್ಷಿಣ ಅಮೆರಿಕದ ರಾಷ್ಟ್ರಗಳಲ್ಲಿ ಮಹಿಳೆಯರು ಗರ್ಭಧಾರಣೆಯನ್ನು ತಾತ್ಕಾಲಿಕವಾಗಿ ಮುಂದೂಡುವಂತೆ ಅಲ್ಲಿನ ಸರಕಾರಗಳು ಕರೆ ನೀಡಿವೆ. ಕಳೆದ ವರ್ಷದ ಅಕ್ಟೋಬರ್ ತಿಂಗಳಿನಿಂದೀಚೆಗೆ ಬ್ರೆಝಿಲ್‌ನಲ್ಲಿ ಮೈಕ್ರೊಸೆಫಲಿ ರೋಗಪೀಡಿತ 3893 ಶಿಶುಗಳು ಜನಿಸಿದ್ದರೆ, ಅದಕ್ಕೂ ಮುನ್ನ ವಾರ್ಷಿಕವಾಗಿ ಈ ರೋಗದ ಸರಾಸರಿ 160 ಪ್ರಕರಣಗಳಷ್ಟೇ ವರದಿಯಾಗಿದ್ದವು.

ಝೈಕಾ ವೈರಸ್ ಏನಿದು?
ಝೈಕಾ ವೈಸ್, ‘ಇಡ್ಸ್ ಏಜಿಪ್ಟಿ’ ಎಂಬ ಪ್ರಭೇದದ ಸೊಳ್ಳೆಯ ಮೂಲಕ ಹರಡುತ್ತದೆ. ಈ ಸೊಳ್ಳೆಯು ಡೆಂಗ್ ಜ್ವರ ಹಾಗೂ ಹಳದಿ ಜ್ವರವನ್ನು ಕೂಡಾ ಹರಡುತ್ತದೆ. 1940ರಲ್ಲಿ ಮೊದಲ ಬಾರಿಗೆ ಝೈಕಾ ವೈರಸ ಪತ್ತೆಯಾಗಿತ್ತು.  ಝೈಕಾ ವೈರಸ್ ಶಿಶುಗಳ ಮೆದುಳಿನ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತವೆಯೆಂದು ವಿಜ್ಞಾನಿಗಳು ಪ್ರತಿಪಾದಿಸಿದ್ದಾರೆ.


 ಡೆನ್ಮಾರ್ಕ್ ಪ್ರವಾಸಿಗನಿಗೂ ಝೈಕಾ

ಲ್ಯಾಟಿನ್ ಅಮೆರಿಕದಿಂದ ಸ್ವದೇಶಕ್ಕೆ ವಾಪಸಾಗಿರುವ ಡೆನ್ಮಾರ್ಕ್‌ನ ಪ್ರವಾಸಿಗನೊಬ್ಬನಲ್ಲೂ ಝೈಕಾ ವೈರಸ್ ಪತ್ತೆಯಾಗಿದೆ. ಇದಕ್ಕೂ ಮುನ್ನ ಜರ್ಮನಿ, ಬ್ರಿಟನ್ ಹಾಗೂ ಸ್ವೀಡನ್‌ಗಳಲ್ಲಿಯೂ ಝೈಕಾ ರೋಗ ಪ್ರಕರಣಗಳು ವರದಿಯಾಗಿದ್ದವು.

 


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X