Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ...

ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ: ಕೇಂದ್ರಕ್ಕೆ ಸುಪ್ರೀಂ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ27 Jan 2016 11:44 PM IST
share
ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ: ಕೇಂದ್ರಕ್ಕೆ ಸುಪ್ರೀಂ ನೋಟಿಸ್

ಹೊಸದಿಲ್ಲಿ,ಜ.27: ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆಯ ಕುರಿತಂತೆ ಸರ್ವೋಚ್ಚ ನ್ಯಾಯಾಲಯವು ಬುಧವಾರ ಕೇಂದ್ರಕ್ಕೆ ನೋಟಿಸ್ ಹೊರಡಿಸಿದ್ದು, ಜ.29ರೊಳಗೆ ಉತ್ತರಿಸುವಂತೆ ನಿರ್ದೇಶ ನೀಡಿದೆ. ಕಾಂಗ್ರೆಸ್ ಪಕ್ಷ ಮತ್ತು ಅರುಣಾಚಲ ಪ್ರದೇಶ ವಿಧಾನಸಭೆಯ ಸ್ಪೀಕರ್ ನಬಮ್ ರೆಬಿಯಾ ಈ ವಿಷಯದಲ್ಲಿ ಸರ್ವೋಚ್ಚ ನ್ಯಾಯಾಲಯದ ಮಧ್ಯಪ್ರವೇಶವನ್ನು ಕೋರಿದ್ದರು.

ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಫೆ.1ಕ್ಕೆ ನಿಗದಿಗೊಳಿಸಿದೆ.

ಇದಕ್ಕೂ ಮುನ್ನ ನಾಟಕೀಯ ಬೆಳವಣಿಗೆಯಲ್ಲಿ ಸರ್ವೋಚ್ಚ ನ್ಯಾಯಾಲಯವು ರಾಷ್ಟ್ರಪತಿ ಆಡಳಿತವನ್ನು ಜಾರಿಗೊಳಿಸುವಂತೆ ಅರುಣಾಚಲ ಪ್ರದೇಶದ ರಾಜ್ಯಪಾಲ ಜ್ಯೋತಿಪ್ರಸಾದ್ ರಾಜಖೋವಾ ಅವರು ಮಾಡಿದ್ದ ಶಿಫಾರಸನ್ನು 15 ನಿಮಿಷಗಳಲ್ಲಿ ತನಗೆ ಸಲ್ಲಿಸುವಂತೆ ರಾಜ್ಯಪಾಲರ ಪರ ವಕೀಲರಿಗೆ ಸೂಚಿಸಿತ್ತು. ಕಾಂಗ್ರೆಸ್‌ನ ಮುಖ್ಯ ಸಚೇತಕ ರಾಜೇಶ ಟಾಕೋ ಈ ಅರ್ಜಿಯನ್ನು ಸಲ್ಲಿಸಿದ್ದಾರೆ.

ನಬಮ್ ಟುಕಿ ನೇತೃತ್ವದ ಕಾಂಗ್ರೆಸ್ ಸರಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿರುವ ರಾಜ್ಯಪಾಲರ ವರದಿ ಮತ್ತು ರಾಷ್ಟ್ರಪತಿಗಳಿಗೆ ಕೇಂದ್ರದ ಶಿಫಾರಸನ್ನು ಅರ್ಜಿಯು ಪ್ರಶ್ನಿಸಿದೆ.

ಕಾಂಗ್ರೆಸ್ ಸಲ್ಲಿಸಿದ್ದ ಮೊದಲ ಅರ್ಜಿಯಲ್ಲಿ ಹಲವಾರು ತಪ್ಪುಗಳಿರುವುದನ್ನು ನ್ಯಾಯಮೂರ್ತಿಗಳಲ್ಲಿ ಓರ್ವರಾದ ಜೆ.ಎಸ್. ಕೆಹರ್ ಬೆಟ್ಟು ಮಾಡಿದ ನಂತರ ಹೊಸದಾಗಿ ಈ ಅರ್ಜಿಯನ್ನು ಸಲ್ಲಿಸಲಾಗಿದೆ.

ಟುಕಿ ಸರಕಾರದ ಕುರಿತು ಕಳೆದ ಒಂದು ತಿಂಗಳಿನಿಂದಲೂ ಉಂಟಾಗಿರುವ ಬಿಕ್ಕಟ್ಟು ಮುಂದುವರಿದಿರುವಂತೆಯೇ ರಾಜ್ಯಪಾಲರ ವಿವೇಚನಾಧಿಕಾರದ ವ್ಯಾಪ್ತಿಯ ಕುರಿತು ಸಂವಿಧಾನದ ನಿಯಮಾವಳಿಗಳನ್ನು ಐವರು ನ್ಯಾಯಾಧೀಶರ ಪೀಠವು ಪರಿಶೀಲಿಸುತ್ತಿರುವ ಹಿನ್ನೆಲೆಯಲ್ಲಿ ಹೊಸದಾಗಿ ಸಲ್ಲಿಸಿರುವ ಅರ್ಜಿಯು ಮಹತ್ವವನ್ನು ಪಡೆದುಕೊಂಡಿದೆ.

60 ಸದಸ್ಯ ಬಲದ ವಿಧಾನ ಸಭೆಯಲ್ಲಿ 47 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಅವರ ಪೈಕಿ 21 ಶಾಸಕರು ಬಂಡೆದ್ದ ಬಳಿಕ ತೀವ್ರ ಹಿನ್ನಡೆಯನ್ನು ಅನುಭವಿಸಿತ್ತು. ಟುಕಿ ಸರಕಾರವನ್ನು ಉರುಳಿಸಲು ಬಿಜೆಪಿಯ 11 ಶಾಸಕರು ಬಂಡಾಯ ಕಾಂಗ್ರೆಸ್ ಶಾಸಕರನ್ನು ಬೆಂಬಲಿಸಿದ್ದರು. ಬಳಿಕ 14 ಬಂಡಾಯ ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸಲಾಗಿತ್ತು.

ಇಷ್ಟಾದ ಬಳಿಕ ರಾಜ್ಯಪಾಲರು ಡಿ.16ರಂದು ವಿಧಾನ ಸಭೆಯ ಅಧಿವೇಶನವನ್ನು ಕರೆದಿದ್ದರು. ಇಟಾ ನಗರದ ಸಮುದಾಯ ಭವನದಲ್ಲಿ ನಡೆದಿದ್ದ ಈ ಬೈಠಕ್‌ನಲ್ಲಿ ಉಪ ಸ್ಪೀಕರ್ ಅವರು 14 ಬಂಡಾಯ ಕಾಂಗ್ರೆಸ್ ಶಾಸಕರ ಅನರ್ಹತೆಯನ್ನು ಹಿಂದೆಗೆದುಕೊಂಡಿದ್ದರಲ್ಲದೆ, ಸ್ಪೀಕರ್ ಹುದ್ದೆಯಿಂದ ರೆಬಿಯಾ ಅವರನ್ನು ವಜಾಗೊಳಿಸಿದ್ದರು.

ರಾಜ್ಯಪಾಲರು ಮತ್ತು ಉಪ ಸ್ಪೀಕರ್‌ರ ವಿವಿಧ ನಿರ್ಣಯಗಳನ್ನು ರೆಬಿಯಾ ಗುವಾಹಟಿ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು, ಅದು ಫೆ.1ರವರೆಗೆ ಈ ನಿರ್ಧಾರಗಳನ್ನು ಅಮಾನತಿನಲ್ಲಿರಿಸಿ ಮಧ್ಯಾಂತರ ಆದೇಶವನ್ನು ಹೊರಡಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X