Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೊಹ್ಲಿ ಅಭಿಮಾನಿ ಮೇಲೆ 10 ವರ್ಷ ಜೈಲಿನ...

ಕೊಹ್ಲಿ ಅಭಿಮಾನಿ ಮೇಲೆ 10 ವರ್ಷ ಜೈಲಿನ ತೂಗುಗತ್ತಿ: ಮನೆಯ ಮೇಲೆ ಭಾರತದ ತ್ರಿವರ್ಣ ಧ್ವಜ ಹಾರಿಸಿದ ಆರೋಪ

ವಾರ್ತಾಭಾರತಿವಾರ್ತಾಭಾರತಿ28 Jan 2016 11:14 PM IST
share
ಕೊಹ್ಲಿ ಅಭಿಮಾನಿ ಮೇಲೆ 10 ವರ್ಷ ಜೈಲಿನ ತೂಗುಗತ್ತಿ: ಮನೆಯ ಮೇಲೆ ಭಾರತದ ತ್ರಿವರ್ಣ ಧ್ವಜ ಹಾರಿಸಿದ ಆರೋಪ

ಲಾಹೋರ್, ಜ. 28: ತನ್ನ ಮನೆಯ ಮೇಲೆ ಭಾರತದ ರಾಷ್ಟ್ರ ಧ್ವಜವನ್ನು ಹಾರಿಸಿದ ಕ್ರಿಕೆಟಿಗ ವಿರಾಟ್ ಕೊಹ್ಲಿಯ ಕಟ್ಟಾ ಅಭಿಮಾನಿಗೆ ಇಲ್ಲಿನ ನ್ಯಾಯಾಲಯವೊಂದು ನ್ಯಾಯಾಂಗ ಬಂಧನ ವಿಧಿಸಿದೆ.
ಪಾಕಿಸ್ತಾನದ ಪಂಜಾಬ್ ರಾಜ್ಯದ ಒಕಾರ ಜಿಲ್ಲೆಯ ನಿವಾಸಿ 22 ವರ್ಷದ ಉಮರ್ ಡ್ರಾಝ್‌ರನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಅಪರಾಧ ಸಾಬೀತಾದರೆ ಅವರಿಗೆ 10 ವರ್ಷಗಳ ಜೈಲು ಶಿಕ್ಷೆಯಾಗುವ ಸಾಧ್ಯತೆಯಿದೆ.

ಕ್ರಿಕೆಟಿಗನ ಮೇಲಿನ ತನ್ನ ಪ್ರೀತಿಯನ್ನು ತೋರಿಸುವುದಕ್ಕಾಗಿ ವೃತ್ತಿಯಲ್ಲಿ ದರ್ಜಿಯಾಗಿರುವ ಉಮರ್ ಭಾರತೀಯ ಧ್ವಜವನ್ನು ತನ್ನ ಮನೆಯಲ್ಲಿ ಹಾರಿಸಿದ್ದರು. ಅವರನ್ನು ಬುಧವಾರ ಜಿಲ್ಲಾ ನ್ಯಾಯಾಲಯವೊಂದಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿತು.
ಜನವರಿ 26ರಂದು ನಡೆದ ಟ್ವೆಂಟಿ-20 ಕ್ರಿಕೆಟ್ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯವನ್ನು ಸೋಲಿಸಿತ್ತು ಹಾಗೂ ಆ ಪಂದ್ಯದಲ್ಲಿ ಕೊಹ್ಲಿ 90 ರನ್‌ಗಳನ್ನು ಗಳಿಸಿದ್ದರು. ಅದೇ ದಿನ ಉಮರ್‌ರನ್ನು ಪೊಲೀಸರು ಬಂಧಿಸಿದರು.
ಉಮರ್ ತನ್ನ ಮನೆಯ ಮಾಡಿನಲ್ಲಿ ಭಾರತೀಯ ಧ್ವಜವನ್ನು ಹಾರಿಸಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಆ ದಿನ ಉಮರ್ ಮನೆಗೆ ದಾಳಿ ನಡೆಸಿದರು.
ಪಾಕಿಸ್ತಾನ ದಂಡ ಸಂಹಿತೆಯ 123-ಎ ಪರಿಚ್ಛೇದ ಮತ್ತು ಸಾರ್ವಜನಿಕ ಶಾಂತಿ ನಿರ್ವಹಣೆ ಕಾನೂನಿನ ಅಡಿಯಲ್ಲಿ ಅವರ ವಿರುದ್ಧ ಮೊಕದ್ದಮೆ ದಾಖಲಾಗಿದೆ.
ದೇಶದ ಸಾರ್ವಭೌಮತ್ವಕ್ಕೆ ಹಾನಿ ತರುವ ಚಟುವಟಿಕೆಗಳಿಗೆ ಸಂಬಂಧಿಸಿದ 123-ಎ ಪರಿಚ್ಛೇದದ ಅನ್ವಯ, ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಬಹುದಾಗಿದೆ.
ಕೊಹ್ಲಿ ಮೇಲಿನ ಅಭಿಮಾನಕ್ಕಾಗಿ ಮಾತ್ರ ತಾನು ಭಾರತೀಯ ಧ್ವಜವನ್ನು ಹಾರಿಸಿದೆ ಎಂಬುದಾಗಿ ಉಮರ್ ನ್ಯಾಯಾಲಯದಲ್ಲಿ ಹೇಳಿದ್ದಾರೆ.
ಹೆಚ್ಚಿನ ತನಿಖೆಗಾಗಿ ಆತನನ್ನು ತಮ್ಮ ಕಸ್ಟಡಿಗೆ ಒಪ್ಪಿಸಬೇಕೆಂದು ಪೊಲೀಸರು ಕೋರಿದರಾದರೂ, ನ್ಯಾಯಾಲಯ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


ನಾನು ಕೊಹ್ಲಿಯ ಅಭಿಮಾನಿ ಮಾತ್ರ; ಕ್ಷಮಿಸಿ

ನ್ಯಾಯಾಲಯಕ್ಕೆ ಹಾಜರಾಗುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಉಮರ್, ‘‘ನಾನು ವಿರಾಟ್ ಕೊಹ್ಲಿಯ ದೊಡ್ಡ ಅಭಿಮಾನಿ. ಕೊಹ್ಲಿಗಾಗಿ ನಾನು ಭಾರತ ತಂಡವನ್ನು ಬೆಂಬಲಿಸುತ್ತೇನೆ. ನನ್ನ ಮನೆಯ ತುದಿಯಲ್ಲಿ ಭಾರತದ ಧ್ವಜವನ್ನು ಹಾರಿಸಿರುವುದು ಕೊಹ್ಲಿಯ ಕುರಿತಾದ ನನ್ನ ಅಭಿಮಾನವನ್ನು ಮಾತ್ರ ತೋರಿಸುತ್ತದೆ’’ ಎಂದು ಹೇಳಿದರು.
ತಾನು ಅಪರಾಧ ಮಾಡುತ್ತಿದ್ದೇನೆಂಬ ಅರಿವು ತನಗಿರಲಿಲ್ಲ ಎಂದು ಹೇಳಿದ ಅವರು, ತನ್ನನ್ನು ಭಾರತೀಯ ಕ್ರಿಕೆಟಿಗನ ಅಭಿಮಾನಿ ಎಂಬುದಾಗಿ ಪರಿಗಣಿಸಿ ತನಗೆ ಕ್ಷಮೆ ನೀಡಬೇಕೆಂದು ನ್ಯಾಯಾಲಯವನ್ನು ಕೋರಿದರು.
ಕೊಹ್ಲಿಯ ಬೃಹತ್ ಗಾತ್ರದ ಚಿತ್ರಗಳು ಅವರ ಮನೆಯ ಗೋಡೆಗಳಲ್ಲಿ ಪತ್ತೆಯಾಗಿವೆ. ಭಾರತ ಧ್ವಜ ಹಾಗೂ ಕೊಹ್ಲಿಯ ಪೋಸ್ಟರ್‌ಗಳು ಮತ್ತು ಚಿತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X