ಜಿಲ್ಲಾಡಳಿತದಿಂದ ಅಂಬಿಗರ ಚೌಡಯ್ಯ ಜಯಂತಿ
ಮಂಗಳೂರು, ಜ.28: ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಪಂ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮೊಗೀರ ವ್ಯವಸ್ಥಾಪಕ ಮಂಡಳಿ, ದಕ್ಷಿಣ ಕನ್ನಡ ಮತ್ತು ಉಡುಪಿ, ನಿಜಶರಣ ಅಂಬಿಗರ ಚೌಡಯ್ಯ ಯುವಕ ವೃಂದ ಮುಲ್ಕಿ ಇವರ ಸಂಯುಕ್ತ ಆಶ್ರಯದಲ್ಲಿ ಜ.29ರಂದು ಮಧ್ಯಾಹ್ನ 12 ಗಂಟೆಗೆ ದ.ಕ. ಜಿಪಂನ ನೇತ್ರಾವತಿ ಸಭಾಂಗಣದಲ್ಲಿ ‘ವಚನಕಾರ ಅಂಬಿಗರ ಚೌಡಯ್ಯ ಜಯಂತಿ’ ಆಚರಣೆ ನಡೆಯಲಿರುವುದು. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಜೆ.ಆರ್.ಲೋಬೊ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





