ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರ
ಮಂಗಳೂರು, ಜ.28: 2015ನೆ ಶೈಕ್ಷಣಿಕ ವರ್ಷದಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ/ ವೃತ್ತಿಪರ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಹಾಗೂ 3ಬಿಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರತಿಭಾ ವೇತನ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಅರ್ಜಿಯನ್ನು ಫೆ.8ರೊಳಗೆ ಸಲ್ಲಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ www.backwardclasses.kar.nic.in, ಮೊಬೈಲ್ ಸಂಖ್ಯೆ 9480818013/ 08044554444 ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಕಟನೆ ತಿಳಿಸಿದೆ.
Next Story





