ಆದರ್ಶ ಪುರುಷ ಅಂಬಿಗರ ಚೌಡಯ್ಯ ಸಚಿವ ರಮಾನಾಥ ರೈ
ಮಂಗಳೂರು ಜನವರಿ 29 : ಕಾಯಕದೊಂದಿಗೆ ಸಮಾಜದ ಅಂಕುಡೊಂಕುಗಳನ್ನು ತನ್ನ ವಚನಗಳ ಮೂಲಕ ತಿದ್ದಿ ಸಮಾಜದಲ್ಲಿ ಎಲ್ಲರೂ ಸಹ ಬಾಳ್ವೆ ಮಾಡುವಂತೆ ಕರೆಕೊಟ್ಟ 10 ನೇ ಶತಮಾನದ ಅಂಬಿಗರ ಚೌಡಯ್ಯ ನಮಗೆ ಹಾಗೂ ಇಂದಿನ ಸಮಾಜಕ್ಕೆ ಮಾದರಿಯಾಗಿದ್ದಾರೆ. ಎಂದು ಅರಣ್ಯ, ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು. ಅವರು ಇಂದು ದ.ಕ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇತರ ಮೊಗವೀರ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಏರ್ಪಡಿಸಿದ್ದ ವಚನಕಾರ ಅಂಬಿಗರ ಚೌಡಯ್ಯ ಅವರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿಸಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಅವರು ಮಾತನಾಡಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಂಬಿಗರ ಚೌಡಯ್ಯ ಅಧ್ಯಯನ ಪೀಠವನ್ನು ಸ್ಥಾಪಿಸಿದ್ದು ಇದರಿಂದ ಯುವಜನರು ಅಂಬಿಗರ ಚೌಡಯ್ಯ ನವರ ಜೀವನಾದರ್ಶಗಳನ್ನು ಅರಿಯಲು ಅನುಕೂಲವಾಗಿದೆ ಎಂದರು.
ಅಂಬಿಗರ ಚೌಡಯ್ಯ ಅಧ್ಯಯನ ಪೀಠದ ಸಂಯೋಜಕರಾದ ಡಾ. ಜಯರಾಜ ಅಮೀನ್ ಅವರು ಅಂಬಿಗರ ಚೌಡಯ್ಯ ಜಯಂತಿಯ ಬಗ್ಗೆ ಸಂದೇಶವನ್ನು ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಪಿ.ಐ ಶ್ರೀವಿದ್ಯಾ, ಮೊಗವೀರ ಸಮಾಜದ ಯತೀಶ್ ಬೈಕಂಪಾಡಿ ಮುಂತಾದವರು ಹಾಜರಿದ್ದರು.





