Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಸಮಸ್ಯೆಗಳಿಗೆ ಧ್ವನಿಯಾಗಲು...

ಮಂಗಳೂರು : ಸಮಸ್ಯೆಗಳಿಗೆ ಧ್ವನಿಯಾಗಲು ತೀಸ್ತಾ ಕರೆ

ವಾರ್ತಾಭಾರತಿವಾರ್ತಾಭಾರತಿ29 Jan 2016 7:04 PM IST
share
ಮಂಗಳೂರು : ಸಮಸ್ಯೆಗಳಿಗೆ ಧ್ವನಿಯಾಗಲು ತೀಸ್ತಾ ಕರೆ

ಮಂಗಳೂರು, ಜ. 29: ಸಮಸ್ಯೆಗಳಿಗೆ ಧ್ವನಿಯಾಗುವ ಮೂಲಕ ಸಮಾಜದಲ್ಲಿ ಬದಲಾವಣೆಗೆ ಯುವ ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು ಮುಂದಾಗಬೇಕು ಎಂದು ಮಾನವ ಹಕ್ಕುಗಳಿಗಾಗಿನ ಹಿರಿಯ ಹೋರಾಟಗಾರ್ತಿ ತೀಸ್ತಾ ಸೆಟಲ್ವಾದ್ ಕರೆ ನೀಡಿದರು.
ನಗರದ ರೋಶನಿ ನಿಲಯದಲ್ಲಿ ಇಂದು ಪತ್ರಿಕೋದ್ಯಮ ಹಾಗೂ ಸಮಾಜ ಕಾರ್ಯ ಸ್ನಾತಕೋತ್ತರ ವಿದ್ಯಾರ್ಥಿಗಳ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ತಮ್ಮ ಮಾತುಗಳ ಮೂಲಕ ಸಮಾಜದಲ್ಲಿ ಸಂಕಷ್ಟದಲ್ಲಿರುವವರ ಬಗ್ಗೆ, ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ಧ್ವನಿಯಾಗುವಂತೆ ಅವರು ಪ್ರೇರೇಪಿಸಿದರು.
ಮಂಗಳೂರಿನ ದಲಿತ ಪ್ರಾಂಶುಪಾಲ ಸುದೇಶ್‌ರವರ ಆತ್ಮಹತ್ಯೆಗೆ ಕಾರಣವಾದ ಸನ್ನಿವೇಶವನ್ನು ಈ ಸಂದರ್ಭದಲ್ಲಿ ಉಲ್ಲೇಖಿಸಿದ ತೀಸ್ತಾ, ಈ ಬಗ್ಗೆ ಮಾಧ್ಯಮಗಳಲ್ಲಿ ಹೆಚ್ಚಿನ ಪ್ರಚಾರ ದೊರೆಯದ ಬಗ್ಗೆಯೂ ಖೇದ ವ್ಯಕ್ತಪಡಿಸಿದರು.
ದೇಶದ 12 ರಾಜ್ಯಗಳು ಬರಪೀಡಿತವಾಗಿದ್ದರೂ ಇಂದು ಮಾಧ್ಯಮಗಳಲ್ಲಿ ಆ ಬಗ್ಗೆ ಸುದ್ದಿಯಾಗುತ್ತಿಲ್ಲ. ಮಾನವ ಹಕ್ಕುಗಳ ಉಲ್ಲಂಘನೆಯ ಘಟನೆಗಳು ಕೆಲವೊಂದು ಪ್ರಾದೇಶಿಕ ಪತ್ರಿಕೆಗಳಲ್ಲಿ ಸುದ್ದಿಯಾದರೂ ಚಾನೆಲ್‌ಗಳಿಗೆ ಆ ಬಗ್ಗೆ ಸಮಯವೇ ಇಲ್ಲದಂತಾಗಿದೆ. ಇದು ವಿಷಾದನೀಯ ಎಂದು ಅವರು ಬೇಸರಿಸಿದರು.
ಬಾಬರಿ ಮಸೀದಿ ಧ್ವಂಸ, ಗುಜರಾತ್ ಹತ್ಯಾಕಾಂಡ ಪ್ರಕರಣಗಳ ಸಂದರ್ಭ ಪತ್ರಕರ್ತೆಯಾಗಿ ತಾನು ಮಾಡಿದ ವಿದ್ಯಾರ್ಥಿಗಳಿಗೆ ಸಂಕ್ಷಿಪ್ತವಾಗಿ ವಿವರಿಸಿದ ಅವರು, ಕೇವಲ ಬೈಲೈನ್‌ಗಾಗಿ ಸುದ್ದಿ ಮಾಡುವ ಉದ್ದೇಶ ನನ್ನದಾಗಿರಲಿಲ್ಲ. ಬದಲಾಗಿ ಸಮಾಜದಲ್ಲಿನ ತಪ್ಪುಗಳಿಗೆ ಧ್ವನಿಯಾಗುವ ಇರಾದೆಯಿಂದ ನಾನು ಪತ್ರಕರ್ತೆಯಾದೆ ಎಂದವರು ಹೇಳಿದರು.
ತನ್ನ 25ರ ಹರೆಯಲ್ಲಿ ಪತ್ರಕರ್ತೆಯಾಗುವ ತನ್ನ ಆಯ್ಕೆಗೆ ತನ್ನ ತಂದೆಯ ಬೆಂಬಲವನ್ನು ಮೆಲುಕು ಹಾಕುತ್ತಾ ತನ್ನ ಪತ್ರಿಕೋದ್ಯಮ ಬದುಕು, ಬಳಿಕ ತನ್ನ ಸಾಮಾಜಿಕ ಕಾರ್ಯಕರ್ತೆಯಾಗಿ ತಾನು ನಿರ್ವಹಿಸಿದ ಪಾತ್ರದ ಬಗ್ಗೆ ವಿದ್ಯಾರ್ಥಿಗಳೆದುರು ಮನಬಿಚ್ಚಿ ಮಾತನಾಡಿದ ಅವರು, ಹೆಣ್ಣು ಮಕ್ಕಳು ಸಮಾನರೆಂದು ಹೇಳುತ್ತಾರದರೂ ಹೆಚ್ಚಿನ ಮನೆಗಳಲ್ಲಿ ಇಂದಿಗೂ ಗಂಡು ಮಕ್ಕಳಿಗೆ ನೀಡುವ ಆದ್ಯತೆ ಹೆಣ್ಣು ಮಕ್ಕಳಿಗೆ ಇಲ್ಲವಾಗಿದೆ ಎಂದರು.
ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಎಲ್ಲರಿಗೂ ಸಮಾನವಾಗಿ ಬದುಕುವ ಹಕ್ಕಿದೆ. ನಮ್ಮದು ಧರ್ಮ ಆಧಾರಿತ ರಾಷ್ಟ್ರವಲ್ಲ. ಹಾಗಿದ್ದರೂ ಪ್ರಸಕ್ತ ಸರಕಾರವು ನಮ್ಮ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ, ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದರು.


ಹೈದಾರಾಬಾದ್‌ನ ಕೇಂದ್ರೀಯ ವಿವಿ ಮತ್ತು ಎಫ್‌ಟಿಐಐ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಉಲ್ಲೇಖಿಸಿ ಮಾತನಾಡಿದ ತೀಸ್ತಾ, ದೇಶದ ಯುವಕರು ನಿರ್ಭಯದಿಂದ ಹೋರಾಟ ನಡೆಸುತ್ತಿದ್ದಾರೆ. ರೋಹಿತ್ ವೇಮುಲ ಪ್ರಕರಣವನ್ನು ಉಲ್ಲೇಖಿಸುತ್ತಾ, ದೇಶದ ಖಾಸಗಿ ನಿಯಂತ್ರಣದಲ್ಲಿರುವ ಶಿಕ್ಷಣ ವ್ಯವಸ್ಥೆಯಲ್ಲಿ ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಅಸಾಧ್ಯವಾಗುತ್ತಿದೆ. ಈ ನಿಟ್ಟಿನಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಯಾಗಬೇಕಿದೆ ಎಂದವರು ಹೇಳಿದರು.
ಈ ಸಂದರ್ಭ ಅವರು ಮಣಿಪುರ, ರಾಜಸ್ತಾನ, ಕೇರಳ ಮೊದಲಾದ ರಾಜ್ಯಗಳಿಂದ ಮಂಗಳೂರಿಗೆ ಆಗಮಿಸಿ ಪತ್ರಿಕೋದ್ಯಮ ಹಾಗೂ ಸಮಾಜ ಕಾರ್ಯ ವಿಭಾಗಗಳಲ್ಲಿ ನಗರದ ವಿವಿಧ ಕಾಲೇಜುಗಳಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿದರು.
ಸರಕಾರೇತರ ಸಂಸ್ಥೆಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತನಿಖೆಗೊಳಪಡಿಸಬಹುದೇ ಎಂಬ ಪ್ರಶ್ನೆಯೊಂದಕ್ಕೆ, ಭ್ರಷ್ಟಾಚಾರ ಎಲ್ಲಿ ನಡೆದರೂ ಅದನ್ನು ಪ್ರಶ್ನಿಸುವ ಮತ್ತು ತನಿಖೆಗೊಳಪಡಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದರು.
ಮಂಗಳೂರು ಸಿಟಿಝನ್ ಫೋರಂನ ವಿದ್ಯಾ ದಿನಕರ್ ಕಾರ್ಯಕ್ರಮ ನಿರ್ವಹಿಸಿದರು. ಸಿಸ್ಟರ್ ಇವ್ಲಿನ್ ವಂದಿಸಿದರು.

ಪವಿತ್ರ ಕ್ಷೇತ್ರಗಳ ಪ್ರವೇಶಕ್ಕೆ ಮಹಿಳೆಯರಿಗೂ ಹಕ್ಕಿದೆ


ವಿದ್ಯಾರ್ಥಿಯೊಬ್ಬರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ತೀಸ್ತಾ, ‘‘ಶಬರಿಮಲೆ ಸೇರಿದಂತೆ ಪವಿತ್ರ ಕ್ಷೇತ್ರಗಳಿಗೆ ಪ್ರವೇಶಿಸುವ ಹಕ್ಕು ಮಹಿಳೆಯರಿಗೂ ಇದೆ. ಮಹಿಳೆಯರ ಸಾಂವಿಧಾನಿಕ ಹಕ್ಕುಗಳನ್ನು ನ್ಯಾಯಾಲಯಗಳು ಕೂಡಾ ಎತ್ತಿ ಹಿಡಿಯಬೇಕಾಗಿದೆ. ದೇವಲಾಯವಿರಲಿ, ಮಸೀದಿಯಿರಲಿ, ಮಹಿಳೆಯರಿಗೂ ಪ್ರವೇಶದ ಹಕ್ಕಿದೆ. ಇದಕ್ಕಾಗಿ ವಿದ್ಯಾರ್ಥಿಗಳು ಧ್ವನಿ ಎತ್ತಿ ಹೋರಾಡಬೇಕು. ಬದಲಾವಣೆ ನಮ್ಮಿಂದ ಮಾತ್ರ ಸಾಧ್ಯ ಎಂಬುದನ್ನು ತಿಳಿದು ಮುನ್ನಡಿ ಹೆಜ್ಜೆ ಇರಿಸಿದಾಗ ಮಾತ್ರವೇ ಬದಲಾವಣೆಯಾಗುತ್ತದೆ. ಇಲ್ಲವಾದಲ್ಲಿ ಏನೂ ಮಾಡಲಾಗದು’’ ಎಂದು ಹೇಳಿದರು.



ನನ್ನೆಲ್ಲಾ ಖಾತೆಗಳು ಪಾರದರ್ಶಕ- ಸಾರ್ವಜನಿಕವಾಗಿ ಲಭ್ಯ: ತೀಸ್ತಾ


‘‘ನನ್ನ ವಿರುದ್ಧ 10 ಕ್ರಿಮಿನಲ್ ಪ್ರಕರಣಗಳಿದ್ದು, 7 ಪ್ರಕರಣಗಳಲ್ಲಿ ಜಾಮೀನು ದೊರಕಿದೆ. ಎರಡು ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್‌ನಿಂದ ರಕ್ಷಣೆ ದೊರಕಿದೆ. ಹಾಗಿದ್ದರೂ ನನ್ನನ್ನು ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿವೆ. ಮಾತ್ರವಲ್ಲದೆ ನನ್ನ ವರ್ಚಸ್ಸಿಗೆ ಧಕ್ಕೆಯುಂಟುವಾಡುವ ಕಾರ್ಯಗಳನ್ನೂ ಸಾರ್ವಜನಿಕವಾಗಿ ನಡೆಸಲಾಗುತ್ತಿದೆ. ನಿಮ್ಮ ವಿರೋಧಿಗಳಿಂದ ನಿಮಗೆ ಏನೂ ಮಾಡಲಾಗದ ಸಂದರ್ಭ ನಿಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ತರುವಂತದ್ದು ಸರ್ವಾಧಿಕಾರಿ ಧೋರಣೆಯ ಹಳೆಯ ಕೃತ್ಯಗಳು. ಇದರಿಂದ ನನ್ನ ಕಾರ್ಯಗಳಿಗೆ ತೊಂದರೆಯಾಗುತ್ತಿದೆಯಾದರೂ ಹೋರಾಟ ಮುಂದುವರಿಯಲಿದೆ’’ ಎಂದು ತೀಸ್ತಾ ತಮ್ಮ ಹೋರಾಟದ ಬಗ್ಗೆ ವಿದ್ಯಾರ್ಥಿಗಳಿಗೆ ವಿವರ ನೀಡಿದರು.
‘‘ನನ್ನ ಎಲ್ಲಾ ಖಾತೆಗಳು ಪಾರದರ್ಶಕ ಮತ್ತು ವೆಬ್‌ಸೈಟ್ ಮೂಲಕ ಸಾರ್ವಜನಿಕವಾಗಿ ಲಭ್ಯವಿದೆ. ನಮ್ಮ ಹೋರಾಟ ಮತ್ತು ಕಾರ್ಯಗಳ ಬಗ್ಗೆ ಸಿಜೆಪಿ (ಸಿಟಿಝನ್ ಫಾರ್ ಜಸ್ಟಿಸ್ ಆ್ಯಂಡ್ ಪೀಸ್) ಅಥವಾ ಸಬ್‌ರಂಗ್ ನಮ್ಮ ಜತೆಗಿದ್ದು, ನಮ್ಮ ಕೆಲಸದ ಮೇಲೆ ನಂಬಿಕೆ ಹೊಂದಿರುವುದು ನಮ್ಮ ಅದೃಷ್ಟ’’ ಎಂದವರು ಹೇಳಿದರು.
‘‘ನೀವು ಕಾರ್ಯಾಗಾರ, ಸಮ್ಮೇಳನ ಮಾಡಿ ಸರಕಾರ ಕ್ಯಾರೇ ಅನ್ನಲ್ಲ. ಪ್ರತಿಭಟನೆ ಚಳವಳಿಗಿಳಿದಾಗ ಸ್ವಲ್ಪ ಗಮನ ಹರಿಸುತ್ತದೆ. ನ್ಯಾಯಾಲಯದ ಮೆಟ್ಟಿಲೇರಿ ಪ್ರಕರಣ ದಾಖಲಿಸಿ ಹೋರಾಟಕ್ಕಿಳಿದರೆ ನಿಮ್ಮ ವಿರುದ್ಧ ಪ್ರಹಾರ ನಡೆಸುತ್ತದೆ. ನೀವು ಸರಕಾರದ ವಿರುದ್ಧ ನ್ಯಾಯಾಲಯದಲ್ಲಿ ಹೋರಾಟಕ್ಕಿಳಿದು, ನ್ಯಾಯಾಲಯದಲ್ಲಿ ಅದರ ತಪ್ಪನ್ನು ಸಾಬೀತುಪಡಿಸಿದಾಗ ಪ್ರತಿಯೊಬ್ಬರೂ ಬಾಧ್ಯಸ್ಥರಾಗುತ್ತಾರೆಂಬ ಕಾರಣಕ್ಕೆ ಆ ಹಂತದಲ್ಲಿ ನಿಮ್ಮ ವಿರುದ್ಧ ಪ್ರಹಾರವಾಗುವುದು ಖಂಡಿತ’’ ಎಂದು ವಿದ್ಯಾರ್ಥಿಗಳನ್ನುದ್ದೇಶಿಸಿ ತಮ್ಮ ಹೋರಾಟದ ದಿಟ್ಟ ಹೆಜ್ಜೆಯನ್ನು ಮೊಟಕುಗೊಳಿಸುವ ಯತ್ನದ ಬಗ್ಗೆ ಅವರು ಮಾರ್ಮಿಕವಾಗಿ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X