ಕೇಂದ್ರ ಕಾರಾಗೃಹದಲ್ಲಿ ಮತ್ತೆ ಕೈದಿಗಳ ಮಧ್ಯೆ ಮಾರಾಮಾರಿ
ಮಂಗಳೂರು, ಜ. 29: ನಗರದ ಕೇಂದ್ರ ಕಾರಾಗೃಹದಲ್ಲಿ ಇಂದು ಸಂಜೆ ಮತ್ತೆ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಗಳಾದ ಮಂಗಳಾದೇವಿಯ ವಿಜಯ ಮತ್ತು ಚಂದ್ರಹಾಸ ಪೂಜಾರಿ ಎಂಬ ತಂಡಗಳ ನಡುವೆ ಇಂದು ಸಂಜೆ ಗಲಾಟೆ ನಡೆಸಿದ್ದು, ಇತ್ತಂಡಗಳ ಮಧ್ಯೆ ಹೊಡೆದಾಟ ನಡೆದಿದೆ. ಜೈಲು ಅಧಿಕಾರಿಗಳ ಮಧ್ಯ ಪ್ರವೇಶದಿಂದ ಗಲಾಟೆ ಶಮನಗೊಂಡಿಗದೆ ಎನ್ನಲಾಗಿದೆ.
ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
Next Story





