Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಡೀಲ್‌ನಲ್ಲಿ 41 ಕೋಟಿ ರೂ. ವೆಚ್ಚದಲ್ಲಿ...

ಪಡೀಲ್‌ನಲ್ಲಿ 41 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾಧಿಕಾರಿ ಸಂಕೀರ್ಣ

ವಾರ್ತಾಭಾರತಿವಾರ್ತಾಭಾರತಿ30 Jan 2016 2:39 PM IST
share

ಅರಣ್ಯ ಇಲಾಖೆಯ ಅನುಮತಿ ಪಡೆದು ಕಾಮಗಾರಿ ಆರಂಭ

ಮಂಗಳೂರು: ಪಡೀಲ್‌ನ 5.89 ಎಕರೆ ಪ್ರದೇಶದಲ್ಲಿ ನಿರ್ಮಿಸಲುದ್ದೇಶಿಸಿರುವ ಜಿಲ್ಲಾಧಿಕಾರಿ ಸಂಕೀರ್ಣಕ್ಕಾಗಿ 41 ಕೋಟಿ ರೂ.ಗಳ ಆಡಳಿತಾತ್ಮಕ ಮಂಜೂರಾತಿ ದೊರಕಿದೆ. ಈ ಪ್ರದೇಶದ 70 ಸೆಂಟ್ಸ್ ಜಾಗದಲ್ಲಿ ಮಾತ್ರವೇ ಜಿಲ್ಲಾಧಿಕಾರಿ ಕಟ್ಟಡ ಬರಲಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಸರ್ವೆ ನಡೆಸಿ ಕಡಿಯಬೇಕಾದ ಮರಗಳಿಗೆ ಅನುಮತಿ ನೀಡಿದ ಬಳಿಕ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ ತಿಳಿಸಿದ್ದಾರೆ.


ಸುದ್ದಿಗೋಷ್ಠಿಯಲ್ಲಿಂದು ಈ ಸ್ಪಷ್ಟನೆ ನೀಡಿದ ಅವರು, ಖಾಸಗಿ ವ್ಯಕ್ತಿಗಳು ಆ ಪ್ರದೇಶದಲ್ಲಿ ಮರ ಇದೆ ಅದು ಡೀಮ್ಡ್ ಫಾರೆಸ್ಟ್ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಮಂಡಿಸಿದ್ದ ದಾವೆಯನ್ನು ಪುರಸ್ಕೃತಗೊಂಡಿಲ್ಲ.

ಬಳಿಕ ಅವರು ಚೆನ್ನೈನ ಹಸಿರು ಪೀಠ (ಗ್ರೀನ್ ಟ್ರಿಬ್ಯೂನಲ್)ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಮೊದಲ ಹಂತದಲ್ಲಿ ಮರಗಳನ್ನು ಕಡಿಯದಂತೆ ಹಸಿರು ಪೀಠ ಸೂಚನೆ ನೀಡಿತ್ತು. ಇದೀಗ ಜ. 27ರಂದು ಆ ಸೂಚನೆಯನ್ನು ಹಿಂಪಡೆದು ಕಾನೂನುರೀತಿಯಲ್ಲಿ ಅರಣ್ಯ ಇಲಾಖೆಯಿಂದ ಅನುಮತಿ ಪಡೆದು ಪ್ರಕ್ರಿಯೆ ಮುಂದುವರಿಸುವಂತೆ ಹಸಿರು ಪೀಠ ಸೂಚಿಸಿದೆ ಎಂದು ಅವರು ಹೇಳಿದರು.


ಕಾಮಗಾರಿಗಾಗಿ ಟೆಂಡರ್ ಕರೆಯಲಾಗಿದ್ದು, ಗುತ್ತಿಗೆದಾರರನ್ನು ಅಂತಿಮಗೊಳಿಸಿ ಕಂದಾಯ ಇಲಾಖೆಗೆ ಕಳುಹಿಸಲಾಗಿದೆ.
ಖಾಸಗಿ ವ್ಯಕ್ತಿಯವರು ಹೇಳುತ್ತಿರುವ ಪ್ರಕಾರ 477 ಮರಗಳು ಇರುವುದು ಪಡೀಲ್‌ನ ಅರಣ್ಯ ಇಲಾಖೆಯ ಒಟ್ಟು 11 ಎಕರೆ ಭೂಮಿಯಲ್ಲಿ. ಪ್ರಸ್ತುತ ಜಿಲ್ಲಾಧಿಕಾರಿ ಸಂಕೀರ್ಣಕ್ಕಾಗಿ ಕಂದಾಯ ಭೂಮಿಯಾಗಿ ಪರಿವರ್ತಿಸಲಾದ ಭೂಮಿ 5.89 ಎಕರೆಯಾಗಿದ್ದು, ಅದರಲ್ಲಿ 70 ಸೆಂಟ್ಸ್‌ನಲ್ಲಿ ಮಾತ್ರವೇ ಕಟ್ಟಡ ರಚನೆಯಾಗಲಿದೆ.

ಈ ಪ್ರದೇಶದಲ್ಲಿ ಇರುವ ಹೆಚ್ಚಿನ ಮರಗಳು ಬಿದಿರು, ಅಕೇಶಿಯಾ, ತೇಗ ಮಾತ್ರ ಆಗಿವೆ. ಹೆಚ್ಚಿನ ಮರಗಳನ್ನು ಕಡಿಯಲಾಗುವುದಿಲ್ಲ. ಈ ಬಗ್ಗೆ ಅರಣ್ಯ ಇಲಾಖೆ ಸರ್ವೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಅವರು ಹೇಳಿದರು.


ನಗರದಲ್ಲಿನ ಜನ ಸಂದಣಿ, ಸಂಚಾರ ಒತ್ತಡವನ್ನು ಕಡಿಮೆಗೊಳಿಸುವ ಉದ್ದೇಶದಿಂದ ಪಡೀಲ್‌ನ ಪ್ರಶಾಂತ ಪರಿಸರದಲ್ಲಿ ಜಿಲ್ಲಾಧಿಕಾರಿ ಕಟ್ಟಡವನ್ನು ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಜಿಲ್ಲಾಡಳಿತ ಅರಣ್ಯದ ಬಗ್ಗೆ ಕಾಳಜಿ ಹೊಂದಿರುವುದರಿಂದಲೇ ಈಗಾಗಲೇ ಪಿಲಿಕುಳದಲ್ಲಿ 300 ಎಕರೆ ಪ್ರದೇಶದಲ್ಲಿ ಪರಿಸರ ಸಂರಕ್ಷಣಾ ಕಾರ್ಯ ನಡೆದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X