ಮಂಗಳೂರು : ಜಿಪಂ-ತಾಪಂ ಚುನಾವಣೆಯಲ್ಲಿ ದ.ಕ. ಜಿಲ್ಲೆಯೆಲ್ಲೆಡೆ ಸ್ಪರ್ಧೆ: ಎಸ್‌ಡಿಪಿಐ
ಮಂಗಳೂರು, ಜ.30: ಫೆಬ್ರವರಿಯಲ್ಲಿ ನಡೆಯಲಿರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷವು ದ.ಕ. ಜಿಲ್ಲೆಯಲ್ಲಿ ಬಹುತೇಕ ಕಡೆಗಳಲ್ಲಿ ಸ್ಪರ್ಧಿಸಲಿದೆ ಎಂದು ಎಸ್‌ಡಿಪಿಐ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವಾಝ್ ಉಳ್ಳಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಎಸ್‌ಡಿಪಿಐ ಪಕ್ಷವು ಜಿಲ್ಲೆಯಲ್ಲಿ ತೃತೀಯ ಶಕ್ತಿಯಾಗಿ ಮೂಡಿಬಂದಿದ್ದು, ಗ್ರಾಮಾಂತರ ಗ್ರಾಮಾಂತರ ಪ್ರದೇಶಗಳಲ್ಲಿ ಪಕ್ಷದ ಕಾರ್ಯಕರ್ತರು ನಿರಂತರವಾಗಿ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಮತದಾರರ ಒಲವು ಗಳಿಸುವಲ್ಲಿ ಸಫಲವಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಕಳೆದ ಹಲವಾರು ವರ್ಷಗಳಿಂದ ಸ್ಥಳೀಯ ಸಂಸ್ಥೆಗಳಲ್ಲಿ ಆಡಳಿತ ನಡೆಸುತ್ತಿದ್ದು, ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಅವರಿಂದ ಅಸಾಧ್ಯವಾಗಿದೆ. ಈ ಎಲ್ಲಾ ಕಾರಣಗಳನ್ನು ಗಮನದಲ್ಲಿಟ್ಟುಕೊಂಡು ಎಸ್‌ಡಿಪಿಐ ಸ್ಪರ್ಧಿಸುತ್ತಿದ್ದು, ಹಲವಾರು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಜಯಗಳಿಸುವ ವಿಶ್ವಾಸವನ್ನು ಪಕ್ಷ ಹೊಂದಿದೆ ಎಂದು ಪ್ರಕಟನೆ ತಿಳಿಸಿದೆ.





