ಮುದ್ದೇನಹಳ್ಳಿಯಲ್ಲಿ ಏರೋಸ್ಪೇಸ್ ವಿವಿ: ಸಚಿವ ಟಿ.ಬಿ.ಜಯಚಂದ್ರ
ಬೆಂಗಳೂರು, ಜ. 30: ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಯಲ್ಲಿ ಫ್ರಾನ್ಸ್ ದೇಶದ ನೆರವಿನಿಂದ ಏರೋಸ್ಪೇಸ್ ವಿಶ್ವ ವಿದ್ಯಾನಿಲಯ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
ಶನಿವಾರ ಹುತಾತ್ಮರ ದಿನಾಚರಣೆ ಹಿನ್ನೆಲೆಯಲ್ಲಿ ವಿಧಾನ ಸೌಧದ ಆವರಣದಲ್ಲಿ ಏರ್ಪಡಿಸಿದ್ದ ಸಮಾರಂಭದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಇನ್ವೆಸ್ಟ್-ಕರ್ನಾಟಕ’ ಹೂಡಿಕೆದಾರರ ಸಮಾವೇಶದಲ್ಲಿ ಈ ಸಂಬಂಧ ಒಡಂಬಡಿಕೆ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದರು. ಕರ್ನಾಟಕ ರಾಜ್ಯದಲ್ಲಿ ಹೆಚ್ಚಿನ ಮಾನವ ಸಂಪನ್ಮೂ ಲವಿದ್ದು, ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳು ದೊರೆಯ ಬೇಕು. ಆ ಮೂಲಕ ಕರ್ನಾಟಕ ಏರೋಸ್ಪೇಸ್ ಹಬ್ ಆಗ ಬೇಕು. ಸೆಂಟರ್ ಆ್ ಎಕ್ಸಲೆನ್ಸ್ ಆಗಬೇಕು ಎಂಬುದು ನಮ್ಮ ಅಪೇಕ್ಷೆ ಎಂದ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಿಂದ ಏರೋಸ್ಪೇಸ್ ವಿವಿ ಸ್ಥಾಪನೆಗೆ ಉದ್ದೇಶಿಸಲಾಗಿದೆ ಎಂದರು.
ಬೆಂಗಳೂರು ವಿವಿಯಲ್ಲಿ ಲಂಡನ್ ಸ್ಕೂಲ್ ಆ್ ಎಕನಾ ಮಿಕ್ಸ್ ಸ್ಥಾಪಿಸಲು ಲಂಡನ್ ದೇಶ ಎಲ್ಲ ಸಹಕಾರ ನೀಡುವ ಭರವಸೆ ನೀಡಿದ್ದು, ಅದೇ ಮಾದರಿಯಲ್ಲೆ ವಿವಿ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಸಂವಿಧಾನಶಿಲ್ಪಿ ಡಾ.ಬಿ. ಆರ್.ಅಂಬೇಡ್ಕರ್, ಮಹಾತ್ಮ ಗಾಂಧಿ ಸೇರಿ ಅನೇಕರು ಲಂಡನ್‌ನಲ್ಲಿ ವ್ಯಾಸಂಗ ಮಾಡಿದ್ದಾರೆಂದು ಸ್ಮರಿಸಿದರು.





