Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎರಡು ವಾರಗಳ ಬಳಿಕ ಹೈದರಾಬಾದ್‌ ವಿವಿ...

ಎರಡು ವಾರಗಳ ಬಳಿಕ ಹೈದರಾಬಾದ್‌ ವಿವಿ ತರಗತಿಗಳ ಪುನರಾರಂಭ

ವಾರ್ತಾಭಾರತಿವಾರ್ತಾಭಾರತಿ1 Feb 2016 4:34 PM IST
share
ಎರಡು ವಾರಗಳ ಬಳಿಕ ಹೈದರಾಬಾದ್‌ ವಿವಿ ತರಗತಿಗಳ ಪುನರಾರಂಭ

ಹೊಸದಿಲ್ಲಿ, ಫೆ.1: ದಲಿತ ಸಂಶೊಧನಾ ವಿದ್ಯಾರ್ಥಿ ರೋಹಿತ್‌ ವೇಮುಲಾ ಆತ್ಮಹತ್ಯೆಯ ಬಳಿಕ ಮುಚ್ಚಿದ್ದ ಹೈದರಾಬಾದ್‌ ಕೇಂದ್ರ ವಿವಿಯ ತರಗತಿಗಳು  ಎರಡು ವಾರಗಳ ಬಳಿಕ ಸೊಮವಾರ ಆರಂಭಗೊಂಡಿದೆ.
 ವಿಶ್ವವಿದ್ಯಾನಿಯದ ಕ್ಯಾಂಪಸ್ ಸಹಜ ಸ್ಥಿತಿಗೆ ಮರಳಿದೆ. ಆಡಳಿತ ಕಚೇರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮವನ್ನು ವಿವಿ ವಿದ್ಯಾರ್ಥಿಗಳು ಹಿಂಪಡೆದಿದ್ದಾರೆ. ತರಗತಿಗಳ ಆರಂಭಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.
ಆದರೆ ವಿವಿಧ ವಿದ್ಯಾರ್ಥಿ ಸಂಘಟನೆಗಳನ್ನು ಒಂದೇ ವೇದಿಕೆಯ ಅಡಿ ಒಗ್ಗೂಡಿಸಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳ ಜಂಟಿ ಕ್ರಿಯಾ ಸಮಿತಿ(ಜೆಎಸಿ) ಆಶ್ರಯದಲ್ಲಿ ವಿದ್ಯಾರ್ಥಿಗಳು ಉಪಕುಲಪತಿ ಪಿ ಅಪ್ಪಾರಾವ್‌ ಅವರನ್ನು ವಜಾಗೊಳಿಸುವ  ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ವಿವಿ ಆವರಣದಲ್ಲಿ ಸರದಿಯಲ್ಲಿ ಉಪವಾಸ ಸತ್ಯಾಗೃಹ ಮುಂದುವರಿಸಿದ್ದಾರೆ.
ಹಂಗಾಮಿ ಉಪಕುಲಪತಿ ಪಾರಿಸ್ವಾಮಿ ಅವರನ್ನು ರವಿವಾರ ಭೇಟಿಯಾದ ವಿದ್ಯಾರ್ಥಿಗಳ ಜಂಟಿ ಕ್ರಿಯಾ ಸಮಿತಿ  ತಮ್ಮ ಬೇಡಿಕೆಗಳ ಈಡೇರಿಕೆಗೆ ವಿವಿ ಆಡಳಿತಕ್ಕೆ  ಹತ್ತು ದಿನಗಳ ಗಡುವು ವಿಧಿಸಿದೆ.
ನಾಲ್ಕು ದಿನಗಳ ರಜೆಯಲ್ಲಿ ಕಳೆದ ಶುಕ್ರವಾರ ತೆರಳಿರುವ ವಿವಿಯ ಹಂಗಾಮಿ ಉಪಕುಲಪತಿ ಪ್ರೊ.  ವಿಪಿನ್‌ ಶ್ರೀವಾಸ್ತವ್‌ ಮತ್ತೆ ಹಂಗಾಮಿ ಕುಪಪತಿಯಾಗಿ ಮುಂದುವರಿಯುವುದಕ್ಕೆ ಜೆಎಸಿ ವಿರೋಧ ವ್ಯಪಡಿಸಿದೆ. ಶ್ರೀವಾಸ್ತವ್‌ ನೇತೃತ್ವದ ಸಮಿತಿಯು ರೋಹಿತ್‌ ವೇಮುಲಾ ಸೇರಿದಂತೆ ಐವರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿತ್ತು. ಈ ಕಾರಣದಿಂದಾಗಿ ಪ್ರೊ. ವಿಪಿನ್‌ ಶ್ರೀವಾಸ್ತವ್‌ಗೆ ಹಂಗಾಮಿ  ಉಪಕುಲಪತಿ ಸ್ಥಾನ ನೀಡಬಾರದೆಂದು ಜಂಟಿ ಕ್ರಿಯಾ ಸಮಿತಿ ವಿವಿ ಆಡಳಿತ ಸಮಿತಿಯನ್ನು ಆಗ್ರಹಿಸಿದೆ.
ರೋಹಿತ್‌ ಸಾವಿನ ಹಿನ್ನೆಲೆಯಲ್ಲಿ ಹಿಂದಿನ ಉಪಕುಲಪತಿ ಪ್ರೊ. ಪಿ. ಅಪ್ಪಾರಾವ್‌ ಜನವರಿ 24ರಂದು ಉಪಕುಲಪತಿ ಹುದ್ದೆಯಿಂದ ಪಕ್ಕಕ್ಕೆ ಸರಿದು  ರಜೆಯಲ್ಲಿ ತೆರಳಿದ್ದರು.
ತಮ್ಮನ್ನು ಭೇಟಿಯಾದ  ವಿದ್ಯಾರ್ಥಿಗಳಿಂದಿಗೆ ಮಾತನಾಡಿದ ಈಗಿನ ಹಂಗಾಮಿ ಉಪಕುಲಪತಿ ಪ್ರೊ. ಪಾರಿ ಸ್ವಾಮಿ ಅವರು ವಿದ್ಯಾರ್ಥಿಗಳ ಬೇಡಿಕೆಗಳನ್ನು ಈಡೇರಿಸಲು ಅಸಾಧ್ಯ ಎಂದು ಹೇಳಿದ್ದಾರೆ. ವಿದ್ಯಾರ್ಥಿಗಳ ಬೇಡಿಕೆಗಳು ತಮ್ಮ ಕಾರ್ಯ ವ್ಯಾಪ್ತಿಗೆ ಬಾರದಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ವಿವಿಗೆ ಆಗಮಿಸಲಿರುವ ಮಾನವ ಸಂಪನ್ಮೂಲ ಸಚಿವಾಲಯದ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸುವಂತೆ ವಿದ್ಯಾರ್ಥಿ ಮುಖಂಡರಿಗೆ  ಪ್ರೊ. ಪಾರಿಸ್ವಾಮಿ ಸಲಹೆ ನೀಡಿದ್ದಾರೆ.
ಜಂಟಿ ಕ್ರಿಯಾ ಸಮಿತಿ ಫೆಬ್ರವರಿ 4ರಂದುಹೊಸದಿಲ್ಲಿಯಲ್ಲಿ ಪ್ರತಿಭಟನೆ ನಡೆಸುವ ನಿರ್ಧಾರ ಕೈಗೊಂಡಿದೆ.

ಜನವರಿ 17ರಂದು ಸಂಶೋಧನಾ ವಿಧ್ಯಾರ್ಥಿ ಅತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆಯ ಬಳಿಕ  ದೇಶಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.ಜೆಎಸಿ ವಿವಿ ಕುಲಪತಿ ಪ್ರೊ. ಪಿ. ಅಪ್ಪಾರಾವ್‌ .ಅವರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿ ಧರಣಿ ಸತ್ಯಾಗೃಹ ಆರಂಭಿಸಿತ್ತು.
ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯವು ರೋಹಿತ್‌ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೊಪ್ಪಿಸಲು ತಯಾರಿ ನಡೆಸಿದೆ.
ರೋಹಿತ್‌ ಆತ್ಮಹತ್ಯೆ ಹಿನ್ನೆಲೆಯಲ್ಲಿ ಅವರ ಕುಟುಂಬಕ್ಕೆ ವಿಶ್ವವಿದ್ಯಾನಿಲಯ ಎಂಟು ಲಕ್ಷ ರೂ. ಪರಿಹಾರ ಘೋಷಿಸಿದ್ದು, ರೋಹಿತ್‌ ಜೊತೆ ಅಮಾನತುಗೊಂಡಿದ್ದ ನಾಲ್ವರು ವಿದ್ಯಾರ್ಥಿಗಳ ಅಮಾನತು ಆದೇಶವನ್ನು ಹಿಂಪಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X