Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಂಗಳೂರು : ಜೀಕಾ ವೈರಾಣು ತಡೆಗಟ್ಟಲು...

ಬೆಂಗಳೂರು : ಜೀಕಾ ವೈರಾಣು ತಡೆಗಟ್ಟಲು ಕ್ರಮ : ಆರೋಗ್ಯ ಸಚಿವ ಯು.ಟಿ. ಖಾದರ್

ವಾರ್ತಾಭಾರತಿವಾರ್ತಾಭಾರತಿ1 Feb 2016 5:44 PM IST
share
ಬೆಂಗಳೂರು : ಜೀಕಾ ವೈರಾಣು ತಡೆಗಟ್ಟಲು ಕ್ರಮ : ಆರೋಗ್ಯ ಸಚಿವ ಯು.ಟಿ. ಖಾದರ್

ಬೆಂಗಳೂರು.ಫೆ.1:ಜಾಗತಿಕವಾಗಿ ತೀವ್ರ ಆತಂಕ ಸೃಷ್ಟಿಸಿರುವ ಜೀಕಾ ವೈರಾಣು ತಡೆಗಟ್ಟಲು ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಸಜ್ಜಾಗಿದ್ದು, ಈ ಸಂಬಂಧ ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಕೇಂದ್ರ ಸರ್ಕಾರದ ನೆರವು ಕೋರಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಡೆಂಗ್ಯೂ, ಚಿಕೂನ್ ಗುನ್ಯಾ ರೋಗಾಣುಗಳನ್ನು ಹರಡುವ ಈಡಿಸ್ ಈಜಿಪ್ಟಿ ಮಾರಕವಾದ ಜೀಕಾ ರೋಗದ ವೈರಾಣುಗಳು

ಹರಡುತ್ತವೆ. ಮುಖ್ಯವಾಗಿ ಹುಟ್ಟುವ ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರಲಿದ್ದು, ಈ ಬಗ್ಗೆ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ದಕ್ಷಿಣ ಆಫ್ರಿಕಾದಲ್ಲಿರುವ ನಿರ್ದಿಷ್ಟ ಸೊಳ್ಳೆಗಳಿಂದ ಈ ರೋಗ ಹಬ್ಬುತ್ತದೆ ಎಂಬುದು ತಿಳಿದು ಬಂದಿದ್ದು ಅಲ್ಲಿಂದ ದೇಶಕ್ಕೆ ಬರುವವರಿಗೆ ಈ ರೋಗ ಬಂದಿದೆಯೇ?ಎಂಬುದನ್ನು ಅರಿತುಕೊಳ್ಳಲು ನಿರ್ದಿಷ್ಟ ಕಿಟ್ ಅನ್ನು ಒದಗಿಸಬೇಕು ಎಂದು ಕೋರಲಾಗಿದೆ.

ದೆಹಲಿ ಹಾಗೂ ಮುಂಬಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಿದರೆ ದಕ್ಷಿಣ ಆಫ್ರಿಕಾದಿಂದ ಬರುವವರನ್ನು ಪರೀಕ್ಷಿಸಲು ನೆರವಾಗುತ್ತದೆ.ಅಲ್ಲಿ ಪ್ರವಾಸಿಗರನ್ನು ಪರೀಕ್ಷಿಸಿದರೆ ಶೇಕಡಾ ತೊಂಭತ್ತರಷ್ಟು ಸಮಸ್ಯೆ ನಿವಾರಣೆಯಾಗುತ್ತದೆ ಎಂದರು.

ದಕ್ಷಿಣ ಆಫ್ರಿಕಾದಲ್ಲಿ ಸೊಳ್ಳೆ ಕಚ್ಚಿಸಿಕೊಂಡು ಇಲ್ಲಿಗೆ ಬಂದವರನ್ನು ಸೊಳ್ಳೆಗಳು ಕಚ್ಚಿ,ಆ ಸೊಳ್ಳೆಗಳು ಬೇರೆಯವರಿಗೆ ಕಚ್ಚಿದರೆ ಝೀಕಾ ರೋಗ ಹರಡುತ್ತದೆಯೇ?ಎಂಬುದರ ವಿವರವನ್ನೂ ಪಡೆಯಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಆರೋಗ್ಯ ಇಲಾಖೆಯ 108 ಸಂಖ್ಯೆಯ ಆಂಬುಲೆನ್ಸ್‌ಗಳಲ್ಲಿ ಕೆಲಸ ಮಾಡುತ್ತಿರುವವರು ಕಳೆದೊಂದು ವಾರದಿಂದ ನಡೆಸುತ್ತಿರುವ ಮುಷ್ಕರದ ಹಿನ್ನೆಲೆಯಲ್ಲಿ ಇಂದು ಸಭೆ ನಡೆಸಲಾಗಿದ್ದು,ಮುಂದಿನ ನಲವತ್ತೆಂಟು ಗಂಟೆಗಳಲ್ಲಿ ಅವರು ಕರ್ತವ್ಯಕ್ಕೆ ಹಾಜರಾಗದಿದ್ದರೆ ಸೇವೆಯಿಂದ ವಜಾ ಮಾಡಲಾಗುವುದು ಎಂದು ಹೇಳಿದರು.

ಈ ರೀತಿಯ ಆಂಬುಲೆನ್ಸ್‌ಗಳಲ್ಲಿ 270 ಮಂದಿ ಕೆಲಸ ಮಾಡುತ್ತಿದ್ದು ಈ ಪೈಕಿ ನೂರಾ ಐವತ್ತೆರಡು ಮಂದಿಯನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ.ಆದರೆ ಹಲವರು ಬಂದು,ತಾವು ಕರ್ತವ್ಯಕ್ಕೆ ಹಾಜರಾಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಹೀಗಾಗಿ ಅಂತವರಿಗೆ ನಲವತ್ತೆಂಟು ಗಂಟೆಗಳ ಕಾಲಾವಕಾಶ ನೀಡಿದ್ದು ಅಷ್ಟರೊಳಗಾಗಿ ಅವರು ಸೇವೆಗೆ ಹಾಜರಾಗದಿದ್ದರೆ ಅವರನ್ನು ವಜಾ ಮಾಡುತ್ತೇವೆ ಎಂದ ಅವರು,ಈ ಮಧ್ಯೆ ಹೊಸ ನೇಮಕಾತಿಗಳನ್ನು ಆರಂಭಿಸಿದ್ದು ಕೊರತೆಯಾಗುವ ಹುದ್ದೆಗಳನ್ನು ಆ ಮೂಲಕ ಭರ್ತಿ ಮಾಡುವುದಾಗಿ ಸ್ಪಷ್ಟ ಪಡಿಸಿದರು.

ಈಗ ಮುಷ್ಕರ ನಡೆಸುತ್ತಿರುವ 108 ಸಂಖ್ಯೆಯ ಆಂಬುಲೆನ್ಸ್‌ಗಳ ಚಾಲಕರು ತಮ್ಮ ಮುಷ್ಕರಕ್ಕೆ ನೀಡುತ್ತಿರುವ ಕಾರಣಗಳು ಸಮರ್ಪಕವಾಗಿಲ್ಲ.ಅವರಿಗೆ ನೀಡಬೇಕಾದ ಎಲ್ಲ ಸವಲತ್ತುಗಳನ್ನು ನೀಡಲಾಗಿದೆ ಎಂದು ಅವರು ವಿವರ ನೀಡಿದರು.

ರಾಜ್ಯದಲ್ಲಿರುವ ಬಹುತೇಕ ಆಸ್ಪತ್ರೆಗಳು ರೋಗಿಗಳನ್ನು ಸುಲಿಯುವ ಕೆಲಸ ಮಾಡುತ್ತಿರುವ ಬಗ್ಗೆ ಸುದ್ದಿಗಾರರು ನಿರಂತರವಾಗಿ ಪ್ರಶ್ನೆಗಳ ಸುರಿಮಳೆ ಸುರಿಸಿದಾಗ,ಇಂತಹ ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಣದಲ್ಲಿಡಲು ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದರು.

ಓಂಬುಡ್ಸ್‌ಮನ್‌ಗಳನ್ನು ಎಲ್ಲ ಜಿಲ್ಲೆಗಳಲ್ಲಿ ನೇಮಕ ಮಾಡುವುದೂ ಸೇರಿದಂತೆ ತಾವೇ ಅನಿರೀಕ್ಷಿತವಾಗಿ ಧಾಳಿ ಮಾಡುವ ತನಕ ಎಲ್ಲ ಸಾಧ್ಯತೆಗಳ ಕುರಿತೂ ಚರ್ಚಿಸಲಾಗುತ್ತಿದೆ ಎಂದು ಅವರು ಹೇಳಿದರು.

ಖಾಸಗಿ ಆಸ್ಪತ್ರೆಗಳ ಒಳ ಹೊಕ್ಕ ಕೂಡಲೇ ಸಂಪರ್ಕ ವೆಚ್ಚ ಎಂದು ಸುಲಿಗೆ ನಡೆಯುತ್ತಿದೆ. ಮಾತ್ರವಲ್ಲ, ಅನಗತ್ಯವಾಗಿ ಆಸ್ಪತ್ರೆಗೆ ಬಂದವರು ಚಿಕಿತ್ಸೆ ಪಡೆಯಲೇಬೇಕಾದ ಸನ್ನಿವೇಶವನ್ನು ಸೃಷ್ಟಿಸಲಾಗುತ್ತಿದೆ ಎಂಬ ದೂರುಗಳ ಕುರಿತು ಪರಿಶೀಲನೆ ನಡೆಸುವುದಾಗಿ ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X