Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೀರಿನ ಸೋರಿಕೆ ತಡೆಗಟ್ಟಲು ಕ್ರಮ: ಸಚಿವ...

ನೀರಿನ ಸೋರಿಕೆ ತಡೆಗಟ್ಟಲು ಕ್ರಮ: ಸಚಿವ ಜಾರ್ಜ್

ವಾರ್ತಾಭಾರತಿವಾರ್ತಾಭಾರತಿ1 Feb 2016 10:40 PM IST
share
ನೀರಿನ ಸೋರಿಕೆ ತಡೆಗಟ್ಟಲು ಕ್ರಮ: ಸಚಿವ ಜಾರ್ಜ್

ಬೆಂಗಳೂರು, ಫೆ. 1: ನಗರದಲ್ಲಿ ಕುಡಿಯುವ ನೀರಿನ ಸೋರಿಕೆಯನ್ನು ಅಂತಾರಾಷ್ಟ್ರೀಯ ಮಾನದಂಡದನ್ವಯ ತಡೆಗಟ್ಟಲು ರಾಜ್ಯ ಸರಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಇಂದಿಲ್ಲಿ ತಿಳಿಸಿದ್ದಾರೆ.
  ಸೋಮವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಏರ್ಪಡಿಸಿದ್ದ ನೀರು ಸಂರಕ್ಷಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಗರದಲ್ಲ್ಲಿ ಶೇ.30ರಿಂದ 50ರಷ್ಟಿದ್ದ ನೀರಿನ ಸೋರಿಕೆಯನ್ನು ಶೇ.36ಕ್ಕೆ ಇಳಿಸಲಾಗಿದೆ. ಆದರೂ, ಇನ್ನೂ ಲೆಕ್ಕಕ್ಕೆ ಸಿಗದ ರೀತಿಯಲ್ಲಿ ಸೋರಿಕೆಯಾಗುತ್ತಿದೆ ಎಂದರು.
ನೀರಿನ ಸೋರಿಕೆ ಗಣನೀಯ ಪ್ರಮಾಣದಲ್ಲಿ ಕಡಿಮೆ ಮಾಡಿದರೆ ಎಲ್ಲರಿಗೂ ನೀರು ನೀಡಲು ಸಾಧ್ಯವಾಗಲಿದೆ ಎಂದ ಅವರು, ನಗರಕ್ಕೆ ನೂರು ಕಿ.ಮೀ ದೂರದಿಂದ 1 ಸಾವಿರ ಅಡಿ ಎತ್ತರದಿಂದ 500 ಎಂಎಲ್‌ಡಿ ನೀರನ್ನು ಪ್ರತಿದಿನ ಒದಗಿಸಲಾಗುತ್ತಿದೆ ಎಂದು ಅವರು ಹೇಳಿದರು.
 ಬೆಂಗಳೂರು ನಗರದಲ್ಲಿ 1 ಕೋಟಿಯಷ್ಟು ಮಂದಿ ವಾಸ ಮಾಡುತ್ತಿದ್ದು, ಎಲ್ಲರಿಗೂ ನೀರು ಪೂರೈಕೆ ಮಾಡಬೇಕಿದೆ. ಮಾತ್ರವಲ್ಲ ಅಷ್ಟೇ ವೇಗವಾಗಿ ಬೆಳೆಯುತ್ತಿರುವ ನಗರಕ್ಕೆ ನೀರು ಪೂರೈಕೆ ಕಷ್ಟಸಾಧ್ಯ. ಹೀಗಾಗಿ ಈ ಎಲ್ಲ ಸಮಸ್ಯೆಗಳನ್ನು ಅವಲೋಕಿಸಿ ನೀರಿನ ಸೋರಿಕೆ ಪ್ರಮಾಣ ತಡೆಗಟ್ಟುವುದು ಬಹಳ ಮುಖ್ಯ ಎಂದರು
ಜನ ಸಾಮಾನ್ಯರ ಒಳ್ಳೆಯ ಆರೋಗ್ಯಕ್ಕೆ ನೀರು ಅತ್ಯಗತ್ಯ. ವಿವಿಧ ಸಂಸ್ಥೆಗಳು, ಐಟಿ-ಬಿಟಿ ಕೇಂದ್ರಗಳು ಮುಂಚೂಣಿ ಸಾಧಿಸಿದ್ದು, ಎಲ್ಲದಕ್ಕೂ ನೀರಿನ ಅವಶ್ಯಕತೆಯಿದ್ದು, ಈ ಹಿನ್ನೆಲೆಯಲ್ಲಿ ನೀರಿನ ರಕ್ಷಣೆಯೂ ನಮ್ಮ ಕರ್ತವ್ಯ ಎಂದು ಕೆ.ಜೆ. ಜಾರ್ಜ್ ಸಲಹೆ ಮಾಡಿದರು.
ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಜಲ ಮಂಡಳಿ ಅಧ್ಯಕ್ಷ ವಿಜಯ್ ಭಾಸ್ಕರ್ ಮಾತನಾಡಿ, ನೀರಿನ ಸೋರಿಕೆ ತಡೆಗೆ ಮಂಡಳಿ ಗಂಭೀರ ಕ್ರಮಗಳನ್ನು ಕೈಗೊಂಡು ಸುಧಾರಣೆಯತ್ತ ಹೆಜ್ಜೆ ಹಾಕುತ್ತಿದೆ. ಆದರೆ, ಕೆಲವೆಡೆ ಹಳೆಯ ಪೈಪ್‌ಗಳು ನೀರಿನ ಸೋರಿಕೆಗೆ ಕಾರಣವಾಗಿವೆ. ಇವುಗಳನ್ನು ಬದಲಿಸಲು ಆರ್ಥಿಕ ಸಂಪನ್ಮೂಲದ ಕೊರತೆಯಿದೆ ಎಂದು ಹೇಳಿದರು.
ಅಂತಾರಾಷ್ಟ್ರೀಯ ಸಂಸ್ಥೆಯ ಕಾರ್ಯಕಾರಿ ನಿರ್ದೇಶಕ ಗರ್ ಬರ್‌ಕಾಪ್ ಮಾತನಾಡಿ, ನೀರಿನ ನಿರ್ವಹಣೆ ಬಹಳ ಮುಖ್ಯ. ನೈಸರ್ಗಿಕ ಸಂಪನ್ಮೂಲವಾದ ನೀರನ್ನು ಕೃತಕ ವಿಧಾನಗಳಿಂದ ತಯಾರಿಸಲು ಸಾಧ್ಯವಿಲ್ಲ. ಹೀಗಾಗಿ ನೀರಿನ ಬಳಕೆ ವೇಳೆ ಸೋರಿಕೆ ಮತ್ತು ಅಪವ್ಯಯ ತಪ್ಪಿಸಿ ಸದ್ಬಳಕೆಗೆ ಆದ್ಯತೆ ನೀಡಬೇಕೆಂದು ಕರೆ ನೀಡಿದರು.
 ಇಂತಹ ಕೆಲಸಗಳಿಗೆ ಇಚ್ಛಾಶಕ್ತಿಯೂ ಅಗತ್ಯ. ನೀರಿನ ಮಿತಿ ರೂಪಿಸಿ ಮಹಿಳೆಯರು, ಮಕ್ಕಳಿಗೆ ನೀರಿನ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು. ಸಂಸ್ಕರಿಸಿದ ನೀರನ್ನೇ ಪುನರ್ ಬಳಕೆ ಮಾಡುವ ಮುಖಾಂತರವೂ ನೀರಿನ ಸದ್ಬಳಕೆ ಮಾಡುವ ಮೂಲಕ ನೀರನ್ನು ಉಳಿಸಬೇಕೆಂದು ಅವರು ತಿಳಿಸಿದರು.
 ಸಮ್ಮೇಳನದಲ್ಲಿ ಭಾರತೀಯ ಜಲ ಕಾಮಗಾರಿ ಸಂಸ್ಥೆಯ ಅಧ್ಯಕ್ಷ ಎಚ್.ಸಿ.ಲ್ಯಾಂಡ್ಗೆ, ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಜಿ.ಸಿ.ಚಂದ್ರಶೇಖರ್, ಬಿಡಬ್ಲ್ಯೂಎಸ್‌ಎಸ್‌ಬಿ ಮುಖ್ಯ ಎಂಜಿನಿಯರ್ ಕೃಷ್ಣಪ್ಪ, ಶ್ರೀನಿವಾಸರೆಡ್ಡಿ, ಜಗದೀಶ್ ಪಟ್ನಾಯ್ಕರ್ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X